ಮಂಗಳೂರು: ಮಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀಶಾ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ಸಹಾಯಧನ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಜೂ.7ರಂದು ಬೆಳಗ್ಗೆ 10.30ಕ್ಕೆ ಮಂಗಳೂರು ರಾಮಕೃಷ್ಣ ಮಠದ ರಾಮಕೃಷ್ಣ ಆಶ್ರಮ ಸಭಾಂಗಣದಲ್ಲಿ ನಡೆಯಲಿದೆ.
ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿನ ಸರಕಾರಿ/ಅನುದಾನಿತ ಕನ್ನಡ ಮಾಧ್ಯಮದ ಶಾಲೆಗಳ 2026ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಶೇ.90 ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಆಯ್ದ 10 ವಿದ್ಯಾರ್ಥಿಗಳಿಗೆ ಅವರ ಸಾಧನೆಗಳ ಆಧಾರದಲ್ಲಿ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸಹಾಯವನ್ನು ನೀಡಲಾಗುತ್ತದೆ ಎಂದು ಸೊಸೈಟಿ ಅಧ್ಯಕ್ಷ ಎಂ.ಎಸ್.ಗುರುರಾಜ್ ತಿಳಿಸಿದ್ದಾರೆ.ಶ್ರೀಶಾ ಸೌಹಾರ್ದ ಸೊಸೈಟಿಯು 2024 ರಲ್ಲಿ ಅತ್ಯುತ್ತಮ ಸಹಕಾರಿ ಸಂಸ್ಥೆಯೆಂಬ ಪ್ರಶಸ್ತಿಗೆ ಪಾತ್ರವಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ ನಿರೀಕ್ಷೆಗೂ ಮೀರಿ ಅತ್ಯುತ್ತಮ ಸಾಧನೆಗೈದು 2.25 ಕೋಟಿ ರು.ಗೂ ಹೆಚ್ಚಿನ ಲಾಭ ಗಳಿಸಿದೆ. ಶ್ರೀಶಾ ಸೊಸೈಟಿಯು ತಾನು ಗಳಿಸಿದ ಲಾಭದ ದೊಡ್ಡ ಭಾಗವನ್ನು ಮರಳಿ ಸಮಾಜಕ್ಕೆ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ನೀಡುತ್ತಿದೆ. ಮುಖ್ಯವಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ.