ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಸ್ವಚ್ಛತಾ ಅಭಿಯಾನ

KannadaprabhaNewsNetwork |  
Published : Feb 11, 2026, 03:15 AM IST
ಸ್ವಚ್ಛತಾ ಅಭಿಯಾನ ನಡೆಯಿತು. | Kannada Prabha

ಸಾರಾಂಶ

ಶ್ರೀಶಾ ಸೌಹಾರ್ದ ಸೊಸೈಟಿ ವತಿಯಿಂದ ಭಾನುವಾರ ಬೆಳಗ್ಗೆ ನಗರದ ಹೊರವಲಯದ ಸೋಮೇಶ್ವರ ಕಡಲ ತಡಿಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಮಂಗಳೂರು: ಶ್ರೀಶಾ ಸೌಹಾರ್ದ ಸೊಸೈಟಿ ವತಿಯಿಂದ ಭಾನುವಾರ ಬೆಳಗ್ಗೆ ನಗರದ ಹೊರವಲಯದ ಸೋಮೇಶ್ವರ ಕಡಲ ತಡಿಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶ್ರೀಶಾ ಸೊಸೈಟಿಯ ಎಲ್ಲ ಸಿಬ್ಬಂದಿ ವರ್ಗ ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದ ಈ ಸ್ವಚ್ಛತಾ ಕಾರ್ಯದಲ್ಲಿ ಬೀಚ್‌ನಲ್ಲಿ ಹೇರಳವಾಗಿ ಬಿದ್ದಿದ್ದ ಪ್ಲಾಸ್ಟಿಕ್ ಮತ್ತು ಗ್ಲಾಸ್ ಬಾಟಲಿಗಳು, ಪ್ಲಾಸ್ಟಿಕ್ ಇತರ ತುಣುಕುಗಳನ್ನು ಆಯ್ದು ಸಂಗ್ರಹಿಸಲಾಯಿತು. ಸುಮಾರು ಒಂದು ಕಿಲೋಮೀಟರ್‌ವರೆಗೆ ಬೀಚ್‌ನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲಾಯಿತು.ಬೆಳಗ್ಗೆ 7 ಗಂಟೆಯಿಂದ 9ರವರೆಗೆ ನಡೆದ ಸ್ವಚ್ಛತಾ ಕಾರ್ಯ 20ಕ್ಕೂ ಹೆಚ್ಚು ಮೂಟೆಗಳಷ್ಟು ತ್ಯಾಜ್ಯವನ್ನು ಸಂಗ್ರಹಿಸಲಾಯಿತು. ನಂತರ ಸಾಂದರ್ಭಿಕವಾಗಿ ಮಾತನಾಡಿದ ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ. ಎಸ್. ಗುರುರಾಜ್, ನಮ್ಮ ಪರಿಸರವನ್ನು ಸ್ವಚ್ಛವಾಗಿ ಇಡಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯ. ಸ್ವಚ್ಛತೆ ಇದ್ದಲ್ಲಿ ದೇವರ ಸಾನಿಧ್ಯ ಇರುತ್ತದೆ. ಅಲ್ಲದೆ ಪರಿಸರ ಸ್ವಚ್ಛತೆಯಿಂದ ನಮ್ಮ ಸ್ವಾಸ್ಥವೂ ಹೆಚ್ಚುತ್ತದೆ. ಪ್ಲಾಸ್ಟಿಕ್ ಪರಿಸರಕ್ಕೆ ದೊಡ್ಡ ಮಾರಕ. ಅದನ್ನು ಸಮುದ್ರದ ಹಾಗೂ ನೆಲದ ಪ್ರಾಣಿ ಸಂಕುಲಗಳು ತಿಂದು ಪ್ರಾಣ ಕಳೆದುಕೊಳ್ಳುತ್ತಿರುವುದನ್ನು ಕಾಣುತ್ತಿದ್ದೇವೆ. ನಮ್ಮ ಸೊಸೈಟಿಯ ವತಿಯಿಂದ ಸಮಾಜದಲ್ಲಿ ಜಾಗೃತಿ ಮೂಡಿಸುವ ಇಂತಹ ಇನ್ನೂ ಹೆಚ್ಚಿನ ಕಾರ್ಯಗಳು ನಿರಂತರ ನಡೆಯಲಿ ಎಂದರು.ಸೊಸೈಟಿಯ ಉಪಾಧ್ಯಕ್ಷ ಉದಯ ವಿ. ಶಾಸ್ತ್ರಿ, ನಿರ್ದೇಶಕರಾದ ಸುರೇಶ್ ಬೈಂದೂರು, ಪ್ರಸನ್ನ ಕುಮಾರ, ರಾಜೇಶ್ ಪೂಂಜಾಲಕಟ್ಟೆ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಿತ್ರಾ ಡಿಸೋಜ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರ್ಮ ಉಳಿಯ ಹಿಂದೂಗಳು ಸಂಘಟಿತರಾಗಿ
ಕ್ಯಾನ್ಸರ್ ಭಯ ಬೇಡ, ಅರಿವು ಇರಲಿ: ಡಾ.ಎಚ್.ಆರ್. ತಿಮ್ಮಯ್ಯ