ಕನ್ನಡಪ್ರಭ ವಾರ್ತೆ ಎಚ್.ಡಿ.ಕೋಟೆ
ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ವಿವಿಧ ಪೂಜಾ ವಿಧಿ-ವಿಧಾನಗಳು ಜರುಗಿದವು. ದೇವರನ್ನು ಪುರ ಗ್ರಾಮದ ತೋಟಕ್ಕೆ ಕರೆದುಕೊಂಡು ಬಂದು ದೇವರ ವಿಗ್ರಹಮೂರ್ತಿಗಳನ್ನು ತೊಳೆದು ವಿಶೇಷ ಪೂಜೆ ಸಲ್ಲಿಸಿ ದೇವಸ್ಥಾನದ ಬಳಿಗೆ ಕರೆತರಲಾಯಿತು. ವೀರಗಾಸೆ ನೃತ್ಯ ಪ್ರದರ್ಶಿಸಲಾಯಿತು. ವಾದ್ಯಗೋಷ್ಠಿಗಳು ಮೊಳಗಿದವು. ದೇವಸ್ಥಾನಕ್ಕೆ ತಳಿರು-ತೋರಣ ಕಟ್ಟಿ ಸಿಂಗರಿಸಲಾಗಿತ್ತು. ಇದಲ್ಲದೆ ವಿದ್ಯುತ್ ದೀಪಾಲಂಕಾರವನ್ನೂ ಮಾಡಲಾಗಿತ್ತು.
ಜಾತ್ರಾ ಮಹೋತ್ಸವ ಹಿನ್ನೆಲೆ ತುಳಸಿಹಾರದೊಂದಿಗೆ ವಿವಿಧ ಹೂವುಗಳಿಂದ ದೇವಸ್ಥಾನವನ್ನು ಅಲಂಕೃತಗೊಳಿಸಲಾಗಿತ್ತು. ದೇವಸ್ಥಾನದ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ, ಲಿಂಗೈಕ್ಯ ಗುರುಲಿಂಗಪ್ಪ ಅವರ ಸ್ಮರಣಾರ್ಥವಾಗಿ ಗುರುವಂದನಾ ಕಾರ್ಯಕ್ರಮ, ಪಾದಪೂಜಾ ಕಾರ್ಯಕ್ರಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ಛಾಯಾದೇವಿ ಕಳಸ, ಸೂರ್ಯದೇವರ ಕಳಸ, ಶನೇಶ್ವರಸ್ವಾಮಿ ದೇವರ ಉತ್ಸವಮೂರ್ತಿಯೂ ಮೆರವಣಿಗೆ ಮೂಲಕ ಮೈಸೂರು-ಮಾನಂದವಾಡಿ ರಸ್ತೆಯಲ್ಲಿ ಸಾಗಿ ದೇವಸ್ಥಾನ ತಲುಪಿತು. ಕುದುರೆ ವಾಹನ, ಸತ್ತಿಗೆ ಸೂರಪಾನಿ, ತಮಟೆವಾದ್ಯ, ಅರಮನೆ ಬ್ಯಾಂಡ್ ಸೇರಿದಂತೆ ನಾನಾ ಕಲಾಪ್ರಕಾರಗಳು ಮೆರವಣಿಗೆಗೆ ಮೆರಗು ತಂದವು. ಭಕ್ತರು ದಾರಿಯುದ್ದಕ್ಕೂ ವಿವಿಧ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಟ್ರಸ್ಟಿನ ಅಧ್ಯಕ್ಷ ಕುಮಾರಸ್ವಾಮಿ ಇದ್ದರು.
ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ನಂತರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಹರಕೆ ತಿರಿಸಿದರು. ಬಳಿಕ ಅನ್ನ ಸಂತರ್ಪಣೆ ನಡೆಯಿತು.ಮೊತ್ತ ಗ್ರಾಮದಲ್ಲಿ ಅದ್ಧೂರಿ ಶ್ರೀಶನೈಶ್ಚರ ಸ್ವಾಮಿ ಪಲ್ಲಕ್ಕಿ ಉತ್ಸವ
ಗ್ರಾಮಸ್ಥರೆಲ್ಲ ಸೇರಿ ಭಕ್ತಿಪೂರ್ವಕವಾಗಿ ಸ್ವಾಮಿಯ ಉತ್ಸವದಲ್ಲಿ ಪಾಲ್ಗೊಂಡಿದ್ದರು, ಮುಂಜಾನೆಯಿಂದಲೇ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು, ಹೋಮ ಹವನಗಳು ನೆರವೇರಿದವು, ಶನೈಶ್ಚರ ವಿಗ್ರಹಕ್ಕೆ ವಿವಿಧ ಬಗೆಯ ಪುಷ್ಪಗಳಿಂದ ಅಲಂಕೃತಗೊಳಿಸಲಾಗಿದ್ದು, ದೇವಾಲಯದ ಒಳಗೂ ಹೊರಗೂ ಹೂಗಳಿಂದ ಸಿಂಗರಿಸಲಾಗಿದ್ದು, ಮದುವಣಗಿತ್ತಿಯಂತೆ ಕಂಗೊಳಿಸುತ್ತಿತ್ತು,ಮುಂಜಾನೆಯಿಂದಲೂ ದೇವಾಲಯಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಶನೇಶ್ವರ ದರ್ಶನ ಪಡೆದು ಪುನೀತರಾದರು, ಪ್ರತಿವರ್ಷದಂತೇ ಈ ವರ್ಷವೂ ಸಹ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.