ಶ್ರೀವಾಸವಿ ಶಾಲೆಯಲ್ಲಿ ಅಂತರ್‌ಶಾಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ

KannadaprabhaNewsNetwork |  
Published : Jan 17, 2024, 01:46 AM IST
ಬಳ್ಳಾರಿಯ ಶ್ರೀವಾಸವಿ ಶಾಲೆಯಲ್ಲಿ ಜರುಗಿದ ಅಂರ್ ಶಾಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಯಶಸ್ವಿಗೊಳಿಸಿದ ವಿವಿಧ ಶಾಲೆಗಳ ಮುಖ್ಯಗುರುಗಳನ್ನು ಸನ್ಮಾನಿಸಲಾಯಿತು.  | Kannada Prabha

ಸಾರಾಂಶ

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸುವ ಮೂಲಕ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಹಾಗೂ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಬೆಳೆಸುವ ಉದ್ದೇಶ ಹೊಂದಲಾಗಿದೆ.

ಬಳ್ಳಾರಿ: ನಗರದ ಪ್ರತಿಷ್ಠಿತ ಶ್ರೀ ವಾಸವಿ ವಿದ್ಯಾಶಾಲೆಯಲ್ಲಿ ಆರ್‌ಎಸ್‌ಬಿ ಚಾರಿಟೆಬಲ್ ಟ್ರಸ್ಟ್‌ ಹಾಗೂ ವಾಸವಿ ಎಜ್ಯುಕೇಷನ್ ಟ್ರಸ್ಟ್‌ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಅಂತರ್‌ ಶಾಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರ್‌ಎಸ್‌ಬಿ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಪೋಲಾ ರಾಧಾಕೃಷ್ಣ ಹಾಗೂ ಕಾರ್ಯದರ್ಶಿ ಗುಡದೂರು ವಿಜಯಕುಮಾರ್ ಮಾತನಾಡಿ, ಗುಣಮಟ್ಟದ ಶಿಕ್ಷಣಕ್ಕೆ ಹೆಸರು ಮಾಡಿರುವ ಶ್ರೀ ವಾಸವಿ ವಿದ್ಯಾಶಾಲೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸುವ ಮೂಲಕ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಹಾಗೂ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದರು.

ಎಂಜಿನಿಯರ್ ಸಂಜೀವ್ ಪ್ರಸಾದ್ ಅವರು, ಸ್ವಾಮಿ ವಿವೇಕಾನಂದರ ಆದರ್ಶ ಸರಳ ಜೀವನ ಹಾಗೂ ಅಪಾರವಾದ ಜ್ಞಾನ ಕುರಿತು ತಿಳಿಸಿದರು. ಸ್ವಾಮಿ ವಿವೇಕಾನಂದರು ಸಾರಿದ ಮೌಲ್ಯಯುತ ಬದುಕು ಕುರಿತು ಮಾತನಾಡಿದ ಶಾಲೆಯ 9ನೇ ತರಗತಿ ವಿದ್ಯಾರ್ಥಿ ತರುಣ್ ಚೌಧರಿ ಗಮನ ಸೆಳೆದರು. ಶ್ರೀ ವಾಸವಿ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಪೋಲ ಬಸವರಾಜ, ಕಾರ್ಯದರ್ಶಿ ಪಿ.ಎನ್. ಸುರೇಶ್, ಮುಖ್ಯಗುರು ವೀರೇಶ್‌ ಹಾಗೂ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು. ಬಸವರಾಜೇಶ್ವರಿ, ಜಬೀನಾ ಬೇಗಂ ಹಾಗೂ ಸುಜಾತಾ ಕಾರ್ಯಕ್ರಮ ನಿರ್ವಹಿಸಿದರು.

ಸಾಮಾನ್ಯ ಜ್ಞಾನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಗರದ 17 ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ 232 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಯಲ್ಲಿ ವಿಜ್ಞಾನ, ಕನ್ನಡ, ಇಂಗ್ಲಿಷ್, ಗಣಿತ, ಸಮಾಜ ಮತ್ತು ಪ್ರಸಕ್ತ ವಿದ್ಯಮಾನಗಳ ಕುರಿತಾದ ಪ್ರಶ್ನೆಗಳನ್ನು ಕೇಳಲಾಗಿತ್ತು.

ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಅಂತರ್ ಶಾಲಾ ಮುಖ್ಯೋಪಾಧ್ಯಾಯರನ್ನು ಸನ್ಮಾನಿಸಲಾಯಿತು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ