ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಪೇಟೆ ಒಕ್ಕಲಿಗರ ಬೀದಿಯ ರಾಮ ಮಂದಿರ ಆವರಣದಲ್ಲಿ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಚನ್ನ ಬಸವ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಬೇಬಿ ಬೆಟ್ಟದ ರಾಮಯೋಗಿಶ್ವರ ಮಠದ ಶಿವಬಸವ ಸ್ವಾಮೀಜಿ, ವೈದ್ಯನಾಥಪುರ ಕದಂಬ ಜಂಗಮ ಮಠದ ರೇಣುಕ ಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾಡಿಗೆ ಅಕ್ಷರ, ಆರೋಗ್ಯ ಅನ್ನ ದಾಸೋಹ ನೀಡುತ್ತಿರುವ ಶ್ರೀಮಠ ಸಮಾಜದಲ್ಲಿ ಭಾವೈಕ್ಯತೆಯನ್ನು ಮೂಡಿಸುವಂತಹ ಕಾಯಕವನ್ನು ಮಾಡುತ್ತಿದೆ. ಮಳವಳ್ಳಿಯಲ್ಲಿ ನಡೆಯುತ್ತಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಕಾರ್ಯಕ್ರಮ ಹೊಸತನದ ತಿಳಿವಳಿಕೆ ನೀಡುತ್ತಿದೆ ಎಂದರು.ಎಲ್ಲಾ ಸಮುದಾಯದ ಜನರು ತನ್ನದೇ ಜವಾಬ್ದಾರಿಯಲ್ಲಿ ಯಶಸ್ವಿಗೆ ಶ್ರಮಿಸುತ್ತಿದ್ದಾರೆ. ವಿವಿಧ ಮಠಾಧೀಶರಿಗೆ ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಲಾಗಿದೆ. ನಿರೀಕ್ಷೆಗೂ ಮೀರಿ ನಾಡಿದ್ಯಾಂತ ಭಕ್ತರು ಆಗಮಿಸುತ್ತಿರುವುದು ಸಾರ್ಥಕತೆ ಎನಿಸುತ್ತಿದೆ ಎಂದರು.
ಪಟ್ಟಣದ ಪೇಟೆ ಬೀದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಉತ್ಸವ ಬರುತ್ತಿದ್ದಂತೆ ಮುಸ್ಲಿಂ ಸಮುದಾಯದ ಮುಖಂಡರು ಉತ್ಸವ ಮೂರ್ತಿ ಹಾಗೂ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಚನ್ನ ಬಸವ ಸ್ವಾಮೀಜಿಗಳಿಗೆ ಅಭಿನಂದಿಸಿ ಗೌರವಿಸಿ ಭಾವೈಕ್ಯತಾ ಯಾತ್ರೆಯಲ್ಲಿ ಜೊತೆಯಾದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮಂಗಳವಾದ್ಯ ಹಾಗೂ ಜಾನಪದ ಕಲಾಮೇಳದೊಂದಿಗೆ ಮೆರವಣಿಗೆ ನಡೆಸಲಾಯಿತು. ಈ ವೇಳೆ ಪೇಟೆ ಬೀದಿ ಒಕ್ಕಲಿಗ ಸಮುದಾಯದ ಮುಖಂಡರು ಮಂಟೇಸ್ವಾಮಿ ಬಸವಪ್ಪ ಹಾಗೂ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದರು.ನಾಳೆ ಮಳವಳ್ಳಿಗೆ ಸಿಎಂ ಸಿದ್ದರಾಮಯ್ಯ
ಕನ್ನಡಪ್ರಭ ವಾರ್ತೆ ಮಂಡ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.21ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಸಂಜೆ 4.25 ಗಂಟೆಗೆ ಮಳವಳ್ಳಿ ತಾಲೂಕಿನ ಮಾರೇಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಸಂಜೆ 4.30 ಗಂಟೆಗೆ ಮಳವಳ್ಳಿ ತಾಲೂಕು ಆಡಳಿತ ವತಿಯಿಂದ ಪಟ್ಟಣದಲ್ಲಿ ಆಯೋಜಿಸಿರುವ ಪ್ರಜಾಸೌಧ ಆಡಳಿತ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಮಳವಳ್ಳಿಯ ಮುನಿಸಿಪಲ್ ಗ್ರೌಂಡ್, ಶಾಂತಿ ಕಾಲೇಜು ಮುಂಭಾಗ ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ಕಾರ್ಯಕ್ರಮದ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 7 ಗಂಟೆಗೆ ವಳವಳ್ಳಿ, ಮಂಡ್ಯ ರಸ್ತೆ ಮಾರ್ಗವಾಗಿ ಮೈಸೂರು ತಲುಪಲಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.