ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಂಡ್ಯ ಜಿಲ್ಲೆ ರಾಜ್ಯಕ್ಕೆ 5ನೇ ಸ್ಥಾನ

KannadaprabhaNewsNetwork |  
Published : Apr 24, 2026, 12:30 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಂಡ್ಯ ಜಿಲ್ಲೆ ರಾಜ್ಯಕ್ಕೆ 5ನೇ ಸ್ಥಾನ  | Kannada Prabha

ಸಾರಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೆ 5ನೇ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇದಕ್ಕೆ ಕಾರಣರಾದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ್, ಸಿಇಒ ಕೆ.ಆರ್.ನಂದಿನಿ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.

ಮಂಡ್ಯ:

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೆ 5ನೇ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇದಕ್ಕೆ ಕಾರಣರಾದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ್, ಸಿಇಒ ಕೆ.ಆರ್.ನಂದಿನಿ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಚಿವರು, ಮಂಡ್ಯ ಜಿಲ್ಲೆ ಈ ಬಾರಿ ಶೇ.97.45ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ 5ನೇ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ. ಇದು ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಬದ್ಧತೆ, ಪೋಷಕರ ಸಹಕಾರ ಮತ್ತು ಅಧಿಕಾರಿಗಳ ಸಮರ್ಥ ನಿರ್ವಹಣೆಯ ಫಲ. ಉಡುಪಿ, ಮಂಗಳೂರು ವಿದ್ಯಾರ್ಥಿಗಳ ಜೊತೆ ಪೈಪೋಟಿ ನೀಡಿರುವುದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ 12ನೇ ಸ್ಥಾನದಲ್ಲಿದ್ದ ನಮ್ಮ ಜಿಲ್ಲೆ ಈ ಬಾರಿ 5 ನೇ ಸ್ಥಾನ ಮೇಲೇರಿರುವುದಕ್ಕೆ ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಗೆ ಸಾಕ್ಷಿ. ಮುಂದಿನ ವರ್ಷ ನಾವು ಮೊದಲ 3 ಸ್ಥಾನಗಳ ಗುರಿ ಹೊಂದಬೇಕು. ಇದಕ್ಕಾಗಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು. ಗ್ರಾಮೀಣ ಮಕ್ಕಳಿಗೆ ವಿಶೇಷ ತರಬೇತಿ, ಮೂಲ ಸೌಕರ್ಯ ಸುಧಾರಣೆ, ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ. ಅನುತ್ತೀರ್ಣರಾದ ಮಕ್ಕಳು ಧೃತಿಗೆಡದೆ ಸೋಲು ಯಸ್ಸಿನ ಮೆಟ್ಟಿಲು ಎಂದು ತಿಳಿದು ಪೂರಕ ಪರೀಕ್ಷೆಗೆ ಸಿದ್ಧರಾಗಬೇಕು ಕಿವಿಮಾತು ಹೇಳಿದ್ದಾರೆ. ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯಲ್ಲಿ ಶೇ.50 ಕ್ಕಿಂತ ಕಡಿಮೆ ಅಂಕ ಪಡೆದ ಮಕ್ಕಳಿಗೆ ಕಲಿಕಾ ಮಿತ್ರ ಎಂಬ ಪುಸ್ತಕ ತಯಾರು ಮಾಡಿ ಜಿಲ್ಲೆಯಾದ್ಯಂತ ವಿಶೇಷ ತರಬೇತಿ ನೀಡಿ ಮಂಡ್ಯ ಜಿಲ್ಲೆ 5ನೇ ಸ್ಥಾನಕ್ಕೆ ಬರಲು ಶ್ರಮಿಸಿದ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಜಿಪಂ ಸಿಇಒ ಕೆ.ಆರ್. ನಂದಿನಿ ಯವರ ಶ್ರಮ ನಿಜಕ್ಕೂ ಮೆಚ್ಚುವಂತದ್ದು ಅಭಿನಂದನೆ ಸಲ್ಲಿಸಿದ್ದಾರೆ.ಎಚ್.ಮಲ್ಲಿಗೆರೆಯ ಬಿಎಲ್‌ಎಸ್ ಪ್ರೌಢಶಾಲೆ ಶೇ.100ರಷ್ಟು ಫಲಿತಾಂಶಮಂಡ್ಯ:

ಮಂಡ್ಯ ಉತ್ತರ ವಲಯದ ಎಚ್.ಮಲ್ಲಿಗೆರೆಯ ಬಿಎಲ್‌ಎಸ್ ಪ್ರೌಢಶಾಲೆ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ರಲ್ಲಿ ಶೇಕಡಾ100 ರಷ್ಟು ಫಲಿತಾಂಶದೊಂದಿಗೆ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ 39 ಮಕ್ಕಳಲ್ಲಿ 11 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಎಂ.ಲಿಂಗರಾಜು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದಕ್ಕೂ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಎಂ.ಎಸ್ ಕಾರ್ತಿಕ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗೀರಥ ಮಹರ್ಷಿಗಳ ದೃಢ ಪ್ರಯತ್ನ ಎಲ್ಲರಿಗೂ ಸ್ಫೂರ್ತಿ
ಕುಡಿವ ನೀರಿನ ಘಟಕ ದುರಸ್ತಿಗೆ ಬಂದ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗೆ ಗ್ರಾಮಸ್ಥರ ಅಡ್ಡಿ