ಪ್ರತಿಭೆಗಳ ಅನಾವರಣಕ್ಕೆ ಎಸ್ಸೆಸ್ಸೆಫ್‌ ಸಾಹಿತ್ಯೋತ್ಸವ ವೇದಿಕೆ: ಡಾ.ಪುರುಷೋತ್ತಮ ಬಿಳಿಮಲೆ

KannadaprabhaNewsNetwork |  
Published : Aug 13, 2026, 01:15 AM IST
ಬಿಳಿಮಲೆ | Kannada Prabha

ಸಾರಾಂಶ

ಸಮಸ್ತ ಸೆಂಟಿನರಿ ಅಂಗವಾಗಿ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್(ಎಸ್ಸೆಸ್ಸೆಫ್‌) ಬೆಂಗಳೂರು ಜಿಲ್ಲಾ ಸಮಿತಿಯ ವತಿಯಿಂದ ನಾಗವಾರದ ಎಚ್‌ಕೆಬಿಕೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 14ನೇ ಆವೃತ್ತಿಯ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ, ಅವುಗಳನ್ನು ಸಮಾಜದ ಮುನ್ನೆಲೆಗೆ ತರುವಲ್ಲಿ ಸಾಹಿತ್ಯೋತ್ಸವಗಳು ಮಹತ್ವದ ವೇದಿಕೆಯಾಗಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.ಸಮಸ್ತ ಸೆಂಟಿನರಿ ಅಂಗವಾಗಿ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್(ಎಸ್ಸೆಸ್ಸೆಫ್‌) ಬೆಂಗಳೂರು ಜಿಲ್ಲಾ ಸಮಿತಿಯ ವತಿಯಿಂದ ನಾಗವಾರದ ಎಚ್‌ಕೆಬಿಕೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 14ನೇ ಆವೃತ್ತಿಯ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಲ್ಲಿ ಅಡಗಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಿ, ಅವುಗಳನ್ನು ಸಮಾಜಕ್ಕೆ ಪರಿಚಯಿಸುವ ಮೂಲಕ ಯುವ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಕಾರ್ಯವನ್ನು ಸಾಹಿತ್ಯೋತ್ಸವ ಮಾಡುತ್ತಿದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸೃಜನಶೀಲತೆ, ಸಾಹಿತ್ಯಾಸಕ್ತಿ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೆ.ಎಂ.ಜೆ. ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ಹಾಜಿ ವಹಿಸಿದ್ದರು. ಇಬ್ರಾಹಿಂ ಸಖಾಫಿ ದಿಕ್ಸೂಚಿ ಭಾಷಣ ಮಾಡಿದರು. ಎಸ್ಸೆಸ್ಸೆಫ್‌ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಶಂಸು ಗಾಂಜಾಲ್ ಸ್ವಾಗತಿಸಿದರು. ಮುನೀರ್ ಕೆ.ಆರ್. ಪುರಂ ವಂದಿಸಿದರು. ಜಿಲ್ಲಾ ಅಧ್ಯಕ್ಷ ಫಾರೂಕ್ ಅಮಾನಿ ಫಲಿತಾಂಶ ಪ್ರಕಟಿಸಿದರು.ಇದಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸ್ವಾಗತ ಸಮಿತಿ ಅಧ್ಯಕ್ಷ ಮುಜೀಬ್ ಸಖಾಫಿ ವಹಿಸಿದ್ದರು. ಡಿಆರ್‌ಡಿಒ ವಿಜ್ಞಾನಿ ಅಬ್ದುಲ್ ಅಝೀಝ್ ಸಾಹಿತ್ಯೋತ್ಸವವನ್ನು ಉದ್ಘಾಟಿಸಿದರು. ಎಸ್‌ವೈಎಸ್‌ ಜಿಲ್ಲಾ ಅಧ್ಯಕ್ಷ ಜಾಫರ್ ಅಹ್ಮದ್ ನೂರಾನಿ, ಡಿಆರ್‌ಡಿಒ ವಿಜ್ಞಾನಿ ರಝಾಕ್ ಹಾಗೂ ಕರೋಲ್ ಗ್ರೂಪ್ ಮುಖ್ಯಸ್ಥರಾದ ಉಸ್ಮಾನ್ ಶರೀಫ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಎಸ್ಸೆಸ್ಸೆಫ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಅಲಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಎಸ್ಸೆಸ್ಸೆಫ್‌ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಶಂಸು ಗಾಂಜಾಲ್ ಸ್ವಾಗತಿಸಿದರು. ಮುನೀರ್ ಕೆ.ಆರ್. ಪುರಂ ವಂದಿಸಿದರು.ಬೆಂಗಳೂರು ಜಿಲ್ಲೆಯ ಏಳು ಡಿವಿಷನ್‌ಗಳಿಂದ 400ಕ್ಕೂ ಅಧಿಕ ಸ್ಪರ್ಧಾಳುಗಳು ಸಾಹಿತ್ಯೋತ್ಸವದಲ್ಲಿ ಭಾಗವಹಿಸಿದ್ದರು. ಐದು ವೇದಿಕೆಗಳಲ್ಲಿ, ಏಳು ವಿಭಾಗಗಳಲ್ಲಿ ಹಾಗೂ ಆರು ಭಾಷೆಗಳಲ್ಲಿ ಒಟ್ಟು 162 ವಿವಿಧ ಸ್ಪರ್ಧೆಗಳು ನಡೆದವು. ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಸಾಹಿತ್ಯಿಕ, ಕಲಾತ್ಮಕ ಹಾಗೂ ಸೃಜನಶೀಲ ಪ್ರತಿಭೆಯನ್ನು ಅನಾವರಣಗೊಳಿಸಿದರು.ಸ್ಪರ್ಧೆಗಳ ಸಮಗ್ರ ಫಲಿತಾಂಶದಲ್ಲಿ ಕೆ.ಆರ್. ಪುರಂ ಡಿವಿಷನ್ ಚಾಂಪಿಯನ್ ಪಟ್ಟವನ್ನು ಪಡೆದುಕೊಂಡಿತು. ಶಿವಾಜಿನಗರ ಡಿವಿಷನ್ ರನ್ನರ್-ಅಪ್ ಹಾಗೂ ಜಯನಗರ ಡಿವಿಷನ್ ದ್ವಿತೀಯ ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಫಿನಾಡಿನಲ್ಲಿ 100 ಮೀಟರ್‌ ಉದ್ದದ ತ್ರಿವರ್ಣ ಧ್ವಜ ಯಾತ್ರೆ
ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ