ಎಸ್‌ಎಸ್‌ಐಟಿ ಕಾಲೇಜಿನ ಸಾಂಸ್ಕೃತಿಕ ಹಬ್ಬ ಕಲೋತ್ಸವಕ್ಕೆ ಚಾಲನೆ

KannadaprabhaNewsNetwork |  
Published : Mar 21, 2026, 01:45 AM IST
್ಿ್ಿ್ಿ | Kannada Prabha

ಸಾರಾಂಶ

ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಸಾಂಸ್ಕೃತಿಕ ಹಬ್ಬ ಕಲೋತ್ಸವ - 2026 ಕ್ಕೆ ಈಗಾಗಲೇ ವೇದಿಕೆ ಸಜ್ಜಾಗಿದ್ದು ಈ ಸಾಂಸ್ಕೃತಿಕ ಹಬ್ಬಕ್ಕೆ ಸಾಹೇ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ ಲಿಂಗೇಗೌಡರವರು ಕಲೋತ್ಸವ - 2026ರ ಲೋಗೋವನ್ನು ಬಿಡುಗಡೆಗೊಳಿಸುವುದರ ಮೂಲಕ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರುಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಸಾಂಸ್ಕೃತಿಕ ಹಬ್ಬ ಕಲೋತ್ಸವ - 2026 ಕ್ಕೆ ಈಗಾಗಲೇ ವೇದಿಕೆ ಸಜ್ಜಾಗಿದ್ದು ಈ ಸಾಂಸ್ಕೃತಿಕ ಹಬ್ಬಕ್ಕೆ ಸಾಹೇ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ ಲಿಂಗೇಗೌಡರವರು ಕಲೋತ್ಸವ - 2026ರ ಲೋಗೋವನ್ನು ಬಿಡುಗಡೆಗೊಳಿಸುವುದರ ಮೂಲಕ ಚಾಲನೆ ನೀಡಿದರು. ನಗರದ ಎಸ್‌ಎಸ್‌ಐಟಿ ಕಾಲೇಜ್‌ನ ಸರ್. ಎಂ.ವಿ. ಬ್ಲಾಕ್‌ನ ಆವರಣದಲ್ಲಿ ಕಲೋತ್ಸವ 2026 ರ ಲೋಗೋ ಲಾಂಚ್ ಮಾಡಿ ಮಾತನಾಡಿದ ಅವರು ಕಲೋತ್ಸವ ಎಂಬ ಹೆಸರು ಎಸ್‌ಎಸ್‌ಐಟಿ ಕಾಲೇಜಿನ ಬ್ರಾಂಡ್ ಆಗಿದ್ದು ಈ ಕಾರ್ಯಕ್ರಮ ಕ್ಯಾಂಪಸ್ ನ ಒಂದು ಬಹುದೊಡ್ಡ ಸಾಂಸ್ಕೃತಿಕ ಹಬ್ಬವಾಗಿದೆ. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎರಡು ತಂಡಗಳಾದ ಐಕ್ಯ ಮತ್ತು ಸಂಸ್ಕೃತಿ ತಂಡಗಳ ಸ್ಪರ್ಧೆ ಎಂಥವರನ್ನೂ ರೋಮಾಂಚನಗೊಳಿಸುತ್ತದೆ. ಪ್ರತಿಯೊಬ್ಬರೂ ಈ ಕಲೋತ್ಸವ 2026 ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯ ಅನಾವರಣಗೊಳಿಸಿ ಎಂದು ಹೇಳಿದರು. ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಮಹಾಂತೇಶ್ ಎಂ. ನಡಕಟ್ಟಿ ಮಾತನಾಡಿ, ಕಲೋತ್ಸವ ವಿದ್ಯಾಥಿಗಳ ಪ್ರತಿಭಾ ಪ್ರದರ್ಶನಕ್ಕೆ ನಡೆಸಲಾಗುವ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಪಾಲ್ಗೊಂಡು ತಮ್ಮ ಪ್ರತಿಭೆಯ ಪ್ರದರ್ಶನವನ್ನು ಮಾಡುವುದರ ಮೂಲಕ ಕಾರ್ಯಕ್ರಮದ ಕಳೆಯನ್ನು ಹೆಚ್ಚಿಸಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಲೋತ್ಸವ 2026ರ ಪೋಸ್ಟರ್ ಬಿಡುಗಡೆಗೊಳಿಸುವುದರ ಜೊತೆಗೆ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಟ್ರೋಫಿ ಕಫ್ ಅನ್ನು ಬಿಡುಗಡೆ ಮಾಡಿದರು. ಈ ವೇಳೆ ವಿದ್ಯಾರ್ಥಿಗಳಿಂದ ನೃತ್ಯ, ಸಂಗೀತ, ಫ್ಯಾಷನ್, ಶೋಗಳ ಒಂದು ಝಲಕ್ ಅನ್ನು ಕಾಲೇಜಿನ ಎರಡೂ ತಂಡಗಳು ಪ್ರದರ್ಶಿಸಿ ಗಮನ ಸೆಳೆದರು. ಕಲೋತ್ಸವ ಇದೇ ತಿಂಗಳ 27 ಮತ್ತು 28 ರಂದು ಅದ್ಧೂರಿಯಾಗಿ ನಡೆಯಲಿದ್ದು, ಈಗಾಗಲೇ ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಅಕಾಡೆಮಿಕ್ ಡೀನ್ ಡಾ. ರೇಣುಕಾಲತಾ, ಈ ಬಾರಿಯ ಕಲೋತ್ಸವ ಉಸ್ತುವಾರಿಗಳಾದ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಪ್ರದೀಪ್, ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಂಕೇಶ ಸಾಹಿತ್ಯ ಸಾಧನೆ ಅನುಕರಣೀಯ-ಡಾ. ಮಾನ್ಪಡೆ
ಮಹಿಳೆಯರು ಸಬಲರಾದರೆ ಮಹಿಳಾ ದಿನಾಚರಣೆ ಸಾರ್ಥಕ