ಬ್ಯಾಡಗಿಯಲ್ಲಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

KannadaprabhaNewsNetwork |  
Published : May 05, 2025, 12:48 AM IST
ಮ | Kannada Prabha

ಸಾರಾಂಶ

ಬ್ಯಾಡಗಿ ತಾಲೂಕು ಕಳೆದ ಕೆಲವು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿದೆ.

ಬ್ಯಾಡಗಿ: ಸ್ಪರ್ಧಾತ್ಮಕ ದಿನಗಳಲ್ಲಿ ಮಕ್ಕಳು ಪಡೆದಿರುವ ಅಂಕಗಳನ್ನು ನೋಡಿದರೆ ಶಿಕ್ಷಣದ ಮೇಲಿರುವ ಅವರ ವಿಶೇಷ ಕಾಳಜಿ ತೋರಿಸುತ್ತಿದೆ. ಪ್ರಸಕ್ತ ವರ್ಷ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಮೌಲ್ಯವನ್ನು ಎತ್ತಿ ಹಿಡಿದಿದ್ದಾರೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯಪಟ್ಟರು.

ಶನಿವಾರ ಪಟ್ಟಣದ ಕ್ಷೇತ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ನಾಲ್ವರು ವಿದ್ಯಾರ್ಥಿಗಳನ್ನು ಸನ್ನಾನಿಸಿ ಮಾತನಾಡಿದರು.

ಬ್ಯಾಡಗಿ ತಾಲೂಕು ಕಳೆದ ಕೆಲವು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿದೆ. ನಿರಂತರವಾಗಿ ಮಕ್ಕಳೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಪರೀಕ್ಷೆ ತಯಾರಿ ನಡೆಸಿ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕರ ಶ್ರಮ ಹಾಗೂ ಪೋಷಕರು ಜವಾಬ್ದಾರಿಯಿಂದ ಈ ಫಲಿತಾಂಶ ಬರಲು ಸಾಧ್ಯವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಒಟ್ಟು 619 ಅಂಕಗಳನ್ನು ಪಡೆದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಅನನ್ಯ ತಹಶೀಲ್ದಾರ(ಆಂಗ್ಲ ಮಾಧ್ಯಮ), 619 ಅಂಕ ಪಡೆದ ಕದರಮಂಡಲಗಿ ಸ್ಪಂದನ ಪ್ರೌಢಶಾಲೆ ಶಶಿಕಲಾ ಹೂಲಿಹಳ್ಳಿ ಹಾಗೂ 616 ಅಂಕ ಪಡೆದ ಅಂಜನಾ ನಾಯ್ಕರ್, 615 ಅಂಕ ಪಡೆದ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ ಯಶೋದಾ ಕುರಿ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ತಹಸೀಲ್ದಾರ್ ಫಿರೋಜ್ ಷಾ ಸೋಮನಕಟ್ಟಿ, ತಾಪಂ ಇಒ ಮಲ್ಲಿಕಾರ್ಜುನ ಕೆ.ಎಂ., ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ, ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಸ್. ನಾಯ್ಕರ, ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುನಾಫ್ ಏರೇಶಿಮಿ, ಸುರೇಶಗೌಡ ಪಾಟೀಲ(ದಿಡಗೂರು) ಕೆಆರ್‌ಸಿಎಸ್ ಪ್ರಾಚಾರ್ಯ ಶಂಭುಲಿಂಗಪ್ಪ ಹಿತ್ತಲಮನಿ, ಶಿಕ್ಷಕರಾದ ಜೀವರಾಜ ಛತ್ರದ, ಜಿ.ಬಿ. ಬೂದಿಹಾಳ ಬಿಇಒ ಸಿಬ್ಬಂದಿಗಳಾದ ಜಗದೀಶ ಮಠದ, ವಿಜಯ ಮಹೇಂದ್ರಕರ, ಮೈನುದ್ದೀನ್ ಕಳಗೊಂಡ, ದಿಲೀಪ ಕೂರಗುಂದ, ಸಿ.ಎಚ್. ಹಿರೇಮೊರಬ, ಸಿ. ಮೋಹನಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.ಧರ್ಮಜಾಗೃತಿ ಮೂಡಿಸಿದ ಶಂಕರಾಚಾರ್ಯರು

ಬ್ಯಾಡಗಿ: ಅದ್ವೈತ ಸಿದ್ಧಾಂತ ಪ್ರತಿಪಾದಿಸಿ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿ ದೇಶದ ನಾಲ್ಕು ದಿಕ್ಕುಗಳಲ್ಲಿ 4 ಪೀಠಗಳನ್ನು ಸ್ಥಾಪಿಸಿ ಭಾರತದ ಸನಾತನ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು ಎಂದು ಪ್ರಾಚಾರ್ಯ ಡಾ. ಎಸ್.ಜಿ. ವೈದ್ಯ ತಿಳಿಸಿದರು.ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಂಕರಾಚಾರ್ಯರ ಜಯಂತಿ ಕಾರ‍್ಯಕ್ರಮದಲ್ಲಿ ಮಾತನಾಡಿ, ತಮ್ಮ ಏಳನೇ ವಯಸ್ಸಿನಲ್ಲಿ ಸನ್ಯಾಸತ್ವ ಸ್ವೀಕಾರ ಮಾಡಿದ ಶಂಕರಾಚಾರ್ಯರು 8ನೇ ಶತಮಾನದಲ್ಲಿಯೇ ಹಿಂದೂ ಧರ್ಮದ ಉಳಿವಿಗಾಗಿ ಶ್ರಮಿಸಿ 4 ಪೀಠಗಳ ಮೂಲಕ ಧರ್ಮ ಜಾಗೃತಿ ಹಾಗೂ ಸಂಸ್ಕಾರ ನೀಡುವ ಮೂಲಕ ಸನಾತನ ಧರ್ಮವನ್ನು ಉಳಿಸಲು ಶ್ರಮಿಸಿದರು ಎಂದರು.ಬ್ರಾಹ್ಮಣ ಸಮಾಜದ ತಾಲೂಕಾಧ್ಯಕ್ಷ ಶಂಕರರಾವ್ ಕುಲಕರ್ಣಿ ಮಾತನಾಡಿ, ತಾವು ಇದ್ದಷ್ಟು ಜೀವಿತಾವಧಿಯಲ್ಲಿ ದೇಶದ ಮೂಲೆ ಮೂಲೆ ಸಂಚರಿಸಿ ಅದ್ವೈತ ಸಿದ್ಧಾಂತ ಪ್ರತಿಪಾದಿಸಿ ಹಲವಾರು ಮತಗಳಿಂದ ದಾಳಿಗೊಳಗಾಗಿದ್ದ ಸನಾತನ ಹಿಂದೂ ಧರ್ಮವನ್ನು ಪುರುತ್ಥಾನಗೊಳಿಸಿದರು ಎಂದರು.

ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ತಹಸೀಲ್ದಾರ್ ಫಿರೋಜ ಷಾ ಸೋಮನಕಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜದ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ವಿನಾಯಕ ಹುದ್ದಾರ, ಸಮಾಜದ ಮುಖಂಡರಾದ ಉಮೇಶ ರಟ್ಟಿಹಳ್ಳಿ, ಬಾಬುರಾವ್ ಹುದ್ದಾರ, ಸಂಧ್ಯಾರಾಣಿ ದೇಶಪಾಂಡೆ, ಗೋಪಾಲ ದೇಶಪಾಂಡೆ, ಶ್ರೀನಿವಾಸ ಕುಲಕರ್ಣಿ, ಪವನ್ ಗೋಸಾವಿ, ಸುಪ್ರಭಾ ಗೋಸಾವಿ ಹಾಗೂ ಸಮಾಜದ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು