)
ಉಡುಪಿ: ಮಾ.18ರಿಂದ ಏ. 22ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 14151 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅದಕ್ಕಾಗಿ ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳನ್ನು ಸಿದ್ದಗೊಳಿಸಲಾಗಿದೆ. ಜಿಲ್ಲೆಯಲ್ಲಿ 7353 ಬಾಲಕರು ಹಾಗೂ 6798 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಅವರಲ್ಲಿ 13,516 ಸಾಮಾನ್ಯ, 295 ಪುನರಾವರ್ತಿತ, 293 ಖಾಸಗಿ ಹಾಗೂ 47 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳಿದ್ದಾರೆ. ಪರೀಕ್ಷೆಗೆ ಉಡುಪಿ ವಲಯದಲ್ಲಿ 15, ಬ್ರಹ್ಮಾವರದಲ್ಲಿ 11, ಕಾರ್ಕಳದಲ್ಲಿ 9, ಬೈಂದೂರು ಮತ್ತು ಕುಂದಾಪುರದಲ್ಲಿ ತಲಾ 8 ಸೇರಿದಂತೆ
ಪರೀಕ್ಷೆಯನ್ನು ಭಯಮುಕ್ತ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಪರೀಕ್ಷಾ ಕೇಂದ್ರದ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಕ್ಯಾಂಪಸ್‌ಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷೆ ಆಗಿರುವುದರಿಂದ ಅದನ್ನು ಯಶಸ್ವಿಯಾಗಿ ನಿರ್ವಹಿಸಲು ಅಧೀಕ್ಷಕರು, ಮೇಲ್ವಿಚಾರಕರು, ಜಾಗೃತಿ ದಳ, ಮೊಬೈಲ್ ಸ್ವಾಧೀನ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ವಿಚಕ್ಷಣಾ ದಳ, ಪರೀಕ್ಷಾ ನೋಡೆಲ್ ಅಧಿಕಾರಿಗಳು ಸೇರಿದಂತೆ 1350 ಅಧಿಕಾರಿ ಸಿಬ್ಬಂದಿ ನಿಯೋಜಿಸಲಾಗಿದೆ.
2025ರಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿ ಶೇ 89.96 ಫಲಿತಾಂಶ ಸಾಧಿಸಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿತ್ತು. ಈ ಬಾರಿಯೂ ಫಲಿತಾಂಶವನ್ನು ಇನ್ನಷ್ಟು ಉತ್ತಮಗೊಳಿಸಲು ವಿಶೇಷವಾಗಿ ಶಿಕ್ಷಕರಿಗೆ ತರಬೇತಿ, ಕಾರ್ಯಾಗಾರಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳಿಗೂ ವಿಶೇಷ ತರಗತಿಗಳನ್ನು ನಡೆಸಲಾಗಿದೆ.