ಪರೀಕ್ಷೆಗಳಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಅವ್ಯವಹಾರ ನಡೆಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಜಿಲ್ಲೆಯ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ.
ಗದಗ: ಜಿಲ್ಲೆಯಲ್ಲಿ ಮೇ 18ರಿಂದ 25ರ ವರೆಗೆ ಜರುಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ಯನ್ನು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರೀಕ್ಷೆಗಳಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಅವ್ಯವಹಾರ ನಡೆಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಜಿಲ್ಲೆಯ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಆಯಾ ಕೇಂದ್ರಗಳಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಮೂಲ ಸೌಲಭ್ಯಗಳು ಕಲ್ಪಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು.
ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದ್ದು, ಯಾವುದೇ ಹಂತದಲ್ಲೂ ಲೋಪದೋಷಗಳಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ವರ್ತಿಸಬೇಕು ಎಂದು ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುಗಮವಾಗಿ ಜರುಗಿಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಜಿಲ್ಲಾ ನೋಡಲ್ ಅಧಿಕಾರಿ ಎಚ್.ಬಿ. ರಡ್ಡೇರ್, ಡಿವೈಪಿಸಿ ಎಂ.ಎಸ್. ಕಂಬಳಿ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಸೇರಿದಂತೆ ಮತ್ತಿತರ ಸಿಬ್ಬಂದಿ ಉಪಸ್ಥಿತರಿದ್ದರು. ಇಂದು ಜಾನಪದ ಉತ್ಸವಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ನುಲಿ ಚಂದಯ್ಯ ಜಾನಪದ ಕಲಾ ಮೇಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಹಯೋಗದಲ್ಲಿ ಜಾನಪದ ಉತ್ಸವ ಕಾರ್ಯಕ್ರಮ ಮೇ 18ರಂದು ಸಂಜೆ 5ಕ್ಕೆ ಮಾರುತಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೆರವೇರಲಿದೆ.ಹರ್ಲಾಪೂರ ಕೊಟ್ಟೂರೇಶ್ವರ ಮಠದ ಡಾ. ಕೊಟ್ಟೂರೇಶ್ವರ ಸ್ವಾಮಿಗಳ ಸಾನ್ನಿಧ್ಯ ವಹಿಸುವರು. ನರಗುಂದ ಶಾಸಕ ಸಿ.ಸಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಚನ್ನಬಸಪ್ಪ ಭಜಂತ್ರಿ ಅಧ್ಯಕ್ಷತೆ ವಹಿಸುವರು. ಶಂಕ್ರಯ್ಯ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ತಾಪಂ ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ, ಬಿಜೆಪಿ ಲಕ್ಕುಂಡಿ ಮಂಡಲದ ಅಧ್ಯಕ್ಷ ಪ್ರಕಾಶ ಅರಹುಣಶಿ, ಬಸವರಾಜ ಮುಳ್ಳಾಳ, ಶಿವಪ್ಪ ಬಳಿಗೇರ, ಲಕ್ಷ್ಮಣ ಗುಡಸಲಮನಿ, ಮಹಾಂತೇಶ ಗುರಿಕಾರ, ಕುಬೆರಪ್ಪ ಬಡಿಗೇರ, ಸಿದ್ದಣ್ಣ ಮಂಗಳೂರು, ಶಶಿಕಲಾ ದೇಶಿಹಳ್ಳಿ, ಚನ್ನಬಸಪ್ಪ ಹಡಗಲಿ, ವಿನಾಯಕ ಡಿಗ್ಗಾವಿ ಉಪಸ್ಥಿತರಿರುವರು. ನೂತನ ಪಿಎಸ್ಐ ಆಗಿ ನೇಮಕಗೊಂಡ ಗ್ರಾಮದ ಅಂದಪ್ಪ ಬಳಿಗೇರ, ಪಿಕೆಪಿಎಸ್ ಅಧ್ಯಕ್ಷ ದೇವಪ್ಪ ಖಂಡು, ಕುಶ ಕವಲೂರು ಅವರನ್ನು ಸನ್ಮಾನಿಸಲಾಗುವುದು.ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸುವ 15ಕ್ಕೂ ಹೆಚ್ಚು ತಂಡಗಳು ಭಕ್ತಿಸಂಗೀತ, ದೀಪ ನೃತ್ಯ, ಸುಗಮ ಸಂಗೀತ, ಡೊಳ್ಳಿನ ಪದ, ಕೋಲಾಟ, ಜೋಗತಿ ನೃತ್ಯ, ಮಲ್ಲಕಂಬ, ಗೀ ಗೀ ಪದ, ಹಾಸ್ಯ ಸಂಜೆ ಸೇರಿದಂತೆ ವಿವಿಧ ಜಾನಪದ ಕಾರ್ಯಕ್ರಮಗಳು ನಡೆಯುವುವು ಎಂದು ನುಲಿ ಚಂದಯ್ಯ ಜಾನಪದ ಕಲಾ ಮೇಳದ ಅಧ್ಯಕ್ಷ ಶಿವಪ್ಪ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.