ಕನ್ನಡಪ್ರಭ ವಾರ್ತೆ ಚಿಂಚೋಳಿ
ಪ್ರಸಕ್ತಸಾಲಿನಲ್ಲಿ ತಾಲೂಕಿನಲ್ಲಿ ಒಟ್ಟು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿದ್ದು ಸೋಮವಾರ ನಡೆದ ಪ್ರಥಮ ಭಾಷೆಯಲ್ಲಿ ಒಟ್ಟು ೩೫೦೦ ವಿದ್ಯಾರ್ಥಿಗಳಲ್ಲಿ ೩೩೫೦ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ೧೫೦ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿರುವುದಿಲ್ಲ.
ಸುಲೇಪೇಟ-೨, ಚಿಂಚೋಳಿ-೩, ಕೋಡ್ಲಿ, ಚಿಮ್ಮನಚೋಡ, ಚಂದನಕೇರಾ, ಕುಂಚಾವರಂ ಪರೀಕ್ಷೆ ಕೇಂದ್ರಗಳಿವೆ ಎಲ್ಲ ಪರೀಕ್ಷೆ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಪೋಲಕಪಳ್ಳಿ ಆದರ್ಶ ವಿದ್ಯಾಲಯದಲ್ಲಿ ವೆಬ್‌ಕ್ಯಾಸ್ಟಿಂಗ್ ಲೈವ್ ಸಿಸಿ ಕ್ಯಾಮೆರಾ ವ್ಯವಸ್ಥೆ ಮಾಡಲಾಗಿದೆ.ಪರೀಕ್ಷೆ ಕೇಂದ್ರಗಳಲ್ಲಿ ನಡೆಯುವ ಎಲ್ಲ ಚಟುವಟಿಕೆಗಳನ್ನು ವೀಕ್ಷಣೆ ಮಾಡಲು ೯ ಸಿಬ್ಬಂದಿ ನೇಮಕ ಮಾಡಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳಿಗೆ ಡೆಸ್ಕ್, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಫ್ಯಾನ್ ಅಳವಡಿಸಲಾಗಿದೆ. ಪರೀಕ್ಷೆಗೆ ಒಟ್ಟು ೧೫೦ ಕೋಣೆಗಳನ್ನು ಬಳಸಿಕೊಳ್ಳಲಾಗಿದೆ. ಅಲ್ಲದೇ ೨೦೦ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿದೆ ಎಂದು ನೋಡಲ್ ಅಧಿಕಾರಿ ಅಶೋಕ ಹೂವಿನಬಾವಿ ಹೇಳಿದ್ದಾರೆ.