- ಪ್ರಥಮ ಬಾರಿಗೆ ಪರೀಕ್ಷೆ ಬರೆಯಲಿರುವ 2927 ವಿದ್ಯಾರ್ಥಿಗಳು
- ಪರೀಕ್ಷಾ ಕೇಂದ್ರದ ಸುತ್ತ 200 ಅಡಿವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
- - - ಕನ್ನಡಪ್ರಭ ವಾರ್ತೆ ಹೊನ್ನಾಳಿ2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಈ ಬಾರಿ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ನ್ಯಾಮತಿ ಮತ್ತು ಹೊನ್ನಾಳಿ ಅವಳಿ ತಾಲೂಕಿನಲ್ಲಿ 7 ಸರ್ಕಾರಿ ಪ್ರೌಢಶಾಲೆಗಳು ಹಾಗೂ ಅನುದಾನಿತ ಪ್ರೌಢಶಾಲೆಗಳು 4 ಸೇರಿದಂತೆ ಒಟ್ಟು 11 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3191 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ. ನಂಜರಾಜ್ ಹೇಳಿದರು.
ಪರೀಕ್ಷೆ ಬರೆಯಲಿರುವ ಎಲ್ಲ ವಿದ್ಯಾರ್ಥಿಗಳಿಗೆ 149 ಸುವ್ಯವಸ್ಥಿತವಾದ ಕೊಠಡಿಗಳು ಹಾಗೂ ಪೀಠೋಪಕರಣಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ಕುಡಿಯುವ ನೀರಿನ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದರು.
138 ಶಿಕ್ಷಕರನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಕ ಮಾಡಿಕೊಂಡಿದ್ದು, 11 ಜನ ಸ್ಥಾನಿಕ ಜಾಗೃತದಳ, 5 ಜನ ಮಾರ್ಗಾಧಿಕಾರಿಗಳು ಹಾಗೂ ತಾಲೂಕುಮಟ್ಟದ ಅಧಿಕಾರಿಗಳನ್ನು ಸಂಚಾರಿ ಜಾಗೃತ ದಳದ ತಂಡದಲ್ಲಿ ನಿಯೋಜನೆ ಮಾಡಿಕೊಳ್ಳಲಾಗಿದೆ. 5 ಇಲಾಖೆ ವಾಹನಗಳಲ್ಲಿ ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳನ್ನು ಸರಬರಾಜು ಮಾಡಲು ಬಳಸಿಕೊಳ್ಳಲಾಗುವುದು, ಗೈರುಹಾಜರಿ ಹಾಗೂ ಸ್ವೀಕೃತಿ ಕೇಂದ್ರಗಳ ನಿರ್ವಹಣೆಗಾಗಿ ಶಿಕ್ಷಣ ಸಂಯೋಜಕ ಎಸ್.ಎಚ್. ಬಸವರಾಜ್ ಅವರನ್ನು ನಿಯೋಜನೆ ಮಾಡಿದ್ದು, ಸಹಾಯವಾಣಿ ಸಂಖ್ಯೆ: 9743875176 ಆಗಿರುತ್ತದೆ ಎಂದು ಬಿಇಒ ಮಾಹಿತಿ ನೀಡಿದರು.
- - - (-ಫೋಟೋ: ಸಾಂದರ್ಭಿಕ ಚಿತ್ರ)