ಗದಗ: ನಗರ ಸೇರಿದಂತೆ ಜಿಲ್ಲೆಯೇ 61 ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಪ್ರಾರಂಭವಾದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ- 1 ಪರೀಕ್ಷೆ ನಡೆಯಿತು. ಜಿಲ್ಲೆಯೇ ಪ್ರತಿ ಪರೀಕ್ಷಾ ಕೇಂದ್ರಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪರೀಕ್ಷೆ ಬರೆಯಲು ಆಗಮಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಆರತಿ ಬೆಳಗಿ ಪುಷ್ಪವೃಷ್ಟಿಗೈದು ಸ್ವಾಗತಿಸಲಾಯಿತು.
ಗದಗ ಶಹರದ 12 ಪರೀಕ್ಷಾ ಕೇಂದ್ರಗಳಲ್ಲಿ 2656 ವಿದ್ಯಾರ್ಥಿಗಳು ಪ್ರಥಮ ಭಾಷೆ- 1ಕ್ಕೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 2588 ಹಾಜರಾತಿ ಇದ್ದು, 68 ಗೈರಾಗಿದೆ. ಗದಗ ಗ್ರಾಮೀಣ ಭಾಗದ 10 ಪರೀಕ್ಷಾ ಕೇಂದ್ರಗಳಲ್ಲಿ 2659 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 2616 ವಿದ್ಯಾರ್ಥಿಗಳು ಹಾಜರಾಗಿ, 43 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಮುಂಡರಗಿ ತಾಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ 2184 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 2088 ಹಾಜರಾತಿ ಇದ್ದು, 96 ಗೈರಾಗಿದೆ. ನರಗುಂದ ತಾಲೂಕಿನ 5 ಪರೀಕ್ಷಾ ಕೇಂದ್ರಗಳಲ್ಲಿ 1468 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 1462 ಹಾಜರಾತಿ ಇದ್ದು, 6 ವಿದ್ಯಾರ್ಥಿಗಳು ಗೈರಾಗಿದ್ದಾರೆ.ರೋಣ ತಾಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ 4077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 3952 ವಿದ್ಯಾರ್ಥಿಗಳು ಹಾಜರಾಗಿ, 125 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶಿರಹಟ್ಟಿ ತಾಲೂಕಿನ 12 ಪರೀಕ್ಷಾ ಕೇಂದ್ರಗಳಲ್ಲಿ 2799 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 29 ವಿದ್ಯಾರ್ಥಿಗಳು ಗೈರಾಗಿದ್ದಾರೆ.ವಿದ್ಯಾರ್ಥಿಗಳಿಗೆ ಪೆನ್, ಸಿಹಿ ನೀಡಿ ಪರೀಕ್ಷೆಗೆ ಸ್ವಾಗತ