ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೊದಲ ದಿನ ಸುಗಮ

KannadaprabhaNewsNetwork |  
Published : Mar 19, 2026, 01:30 AM IST
ಪೊಟೋ: 18ಎಸ್ಎಂಜಿಕೆಪಿ06ಶಿವಮೊಗ್ಗ ಬಿ.ಎಚ್‌.ರಸ್ತೆಯಲ್ಲಿರುವ ಕೆಪಿಎಸ್‌ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆಯನ್ನು ಪರಿಶೀಲನೆ ನಡೆಸುತ್ತಿರುವುದು.  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಬುಧವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆದಿದೆ. ಜಿಲ್ಲೆಯ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ ಜಿಲ್ಲೆಯಲ್ಲಿ 192 ವಿದ್ಯಾರ್ಥಿಗಳು ಗೈರಾದರು.

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆದಿದೆ. ಜಿಲ್ಲೆಯ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ ಜಿಲ್ಲೆಯಲ್ಲಿ 192 ವಿದ್ಯಾರ್ಥಿಗಳು ಗೈರಾದರು.

ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 22621 ವಿದ್ಯಾರ್ಥಿಗಳ ಪೈಕಿ 22429 ವಿದ್ಯಾರ್ಥಿಗಳು ಹಾಜರಾಗಿದ್ದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಜೊತೆಗೆ ಎಲ್ಲಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್‌ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತವೆಂದು ಘೋಷಿಸಲಾಗಿತ್ತು.

ಜಿಲ್ಲೆಯಲ್ಲಿ ಡಿಡಿಪಿಐ, ಉಪ ಯೋಜನಾ ಸಮನ್ವಯಾಧಿಕಾರಿ, ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರನ್ನು ಒಳಗೊಂಡಂತೆ ತಲಾ ಮೂರು ಸದಸ್ಯರಿರುವ ಜಾಗೃತ ದಳಗಳಿಂದ ಪರೀಕ್ಷಾ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಲಾಯಿತು.

ವಿದ್ಯಾರ್ಥಿಗಳು ಬೆಳಗ್ಗೆ 8.30ರಿಂದಲೇ ಪರೀಕ್ಷಾ ಕೇಂದ್ರಗಳತ್ತ ಧಾವಿಸಿ ತಮ್ಮ ನೋಂದಣಿ ಸಂಖ್ಯೆ ಯಾವ ಕೊಠಡಿಯಲ್ಲಿದೆ ಎಂಬುದನ್ನು ಸೂಚನಾ ಫಲಕ ನೋಡಿ ಖಚಿತಪಡಿಸಿಕೊಂಡರು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆರಂಭವಾಗುವುದಕ್ಕೂ ಮುನ್ನ ಧ್ವನಿ ವರ್ಧಕದ ಮೂಲಕ ವಿದ್ಯಾರ್ಥಿಗಳಿಗೆ ಅಗತ್ಯವಾದ ಮಾಹಿತಿ ಮತ್ತು ಸೂಚನೆ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಳೆನರಸೀಪುರದಲ್ಲಿ ಯುಗಾದಿ ಹಬ್ಬದ ವ್ಯಾಪಾರ ಬಲು ಜೋರು
ಅವಧಿ ಮುಗಿದ ಅಹಾರ ಸರಬರಾಜು: ಬ್ಲಿಂಕ್‌ಇಟ್ ಗೋದಾಮಿಗೆ ದಾಳಿ