ಎಸ್ಸೆಸ್ಸೆಲ್ಸಿ ಪರೀಕ್ಷೆ, ಮೊದಲ ದಿನ ಸುಗಮ

KannadaprabhaNewsNetwork | Published : Mar 22, 2025 2:04 AM

ಸಾರಾಂಶ

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಶುಕ್ರವಾರದಿಂದ ಆರಂಭವಾಗಿದ್ದು, ಪ್ರಥಮ ಭಾಷೆ ವಿಷಯದ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದಂತೆ ಸುಸೂತ್ರವಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಶುಕ್ರವಾರದಿಂದ ಆರಂಭವಾಗಿದ್ದು, ಪ್ರಥಮ ಭಾಷೆ ವಿಷಯದ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದಂತೆ ಸುಸೂತ್ರವಾಗಿ ನಡೆಯಿತು.

ನಗರದ 19 ಕೇಂದ್ರಗಳು ಸೇರಿದಂತೆ ಜಿಲ್ಲೆಯ 97 ಕೇಂದ್ರಗಳಲ್ಲಿ 32,497 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 515 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಎಲ್ಲಿಯೂ ಪರೀಕ್ಷೆ ನಕಲು ಮತ್ತು ಡಿಬಾರ್‌ ಆಗಿರುವ ಪ್ರಕರಣಗಳು ದಾಖಲಾಗಿಲ್ಲ ಎಂದು ಡಿಡಿಪಿಐ ಲೀಲಾವತಿ ಹಿರೇಮಠ ತಿಳಿಸಿದ್ದಾರೆ.ಒಟ್ಟು 33012 ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ತಮ್ಮ ಹೆಸರು ನೋಂದಾಯಿಸಿದ್ದರು. ಈ ಪೈಕಿ 32497 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನವಾಗಿದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತಂದು ಅವರಿಗೆ ಆತ್ಮಸ್ಥೈರ್ಯವನ್ನು ತುಂಬಿದರು. ತಮ್ಮ ಪರೀಕ್ಷಾ ನೋಂದಣಿ ಸಂಖ್ಯೆ ಯಾವ ಕೊಠಡಿಯಲ್ಲಿ ಬಂದಿದೆ ಎಂದು ನಾಮಫಲಕಗಳನ್ನು ನೋಡಿ, ಪರೀಕ್ಷಾ ಕೇಂದ್ರಗಳಿಗೆ ತೆರಳಿದರು. ಮುಂಚಿತವಾಗಿಯೇ ಬಂದ ವಿದ್ಯಾರ್ಥಿಗಳು ಅಲ್ಲಲ್ಲಿ ಗುಂಪುಗೂಡಿ ಅಂತಿಮ ತಯಾರಿ ನಡೆಸುತ್ತಿರುವುದು ಕಂಡುಬಂತು.ನಗರದ ಸರ್ದಾರ್‌ ಪ್ರೌಢಶಾಲೆಯ ಬಳಿ ಹಲವು ಪೋಷಕರು ತಮ್ಮ ಮಕ್ಕಳೊಂದಿಗೆ ಆಗಮಿಸಿ, ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯುವಂತೆ ಧೈರ್ಯತುಂಬಿ ಪ್ರೋತ್ಸಾಹಿಸಿದರು. ಬಹುತೇಕ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ಇದೇ ವಾತಾವರಣ ಇರುವುದು ಕಂಡುಬಂದಿತು.ಡಿಡಿಪಿಐ ಲೀಲಾವತಿ ಹಿರೇಮಠ, ಆಯಾ ವ್ಯಾಪ್ತಿಯ ಬಿಇಒಗಳು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾರದರ್ಶಕ ಮತ್ತು ಪ್ರಾಮಾಣಿಕ ಪರೀಕ್ಷೆ ನಡೆಸುವಂತೆ ಸಿಬ್ಬಂದಿಗೆ ಸೂಚಿಸಿದರು. ಫ್ಲೈಯಿಂಗ್‌ ಸ್ಕ್ವಾಡ್‌ಗಳು ವಿವಿಧ ಕೇಂದ್ರಗಳಿಗೆ ಭೇಟಿ ನೀಡಿದವು. ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್‌ ನಿಷೇಧಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಅಲ್ಲದೇ ಜೆರಾಕ್ಸ್‌ ಕೇಂದ್ರಗಳನ್ನು ಮುಚ್ಚುವಂತೆ ಸೂಚಿಸಲಾಗಿತ್ತು.ಬಿಇಒ ಕ್ಷೇತ್ರವಾರು ವಿದ್ಯಾರ್ಥಿಗಳ ಹಾಜರಾತಿ ವಿವರ

ಕ್ಷೇತ್ರ ಕೇಂದ್ರಗಳ ಹಾಜರಾತಿ ಗೈರು

ಬೆಳಗಾವಿ ನಗರ198824 - 163

ಬೆಳಗಾವಿ ಗ್ರಾಮೀ- 20-5354- 101

ಬೈಲಹೊಂಗ -11397-44

ಖಾನಾಪು-11-3573-37

ರಾಮದುರ್ಗ-14-4015- 96

ಸವದತ್ತಿ-19-5268- 51

ಕಿತ್ತೂರ3-1654- 29

Share this article