ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-ಅಗತ್ಯ ಮುಂಜಾಗ್ರತಾ ಕ್ರಮ

KannadaprabhaNewsNetwork |  
Published : Mar 18, 2026, 02:15 AM IST
ಹಾವೇರಿಯ ಮುನ್ಸಿಪಲ್ ಹೈಸ್ಕೂಲ್‌ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿಸಿಟಿವಿ ಕಾರ್ಯನಿರ್ವಹಣೆಯನ್ನು ಡಿಡಿಪಿಐ ಮೋಹನ ದಂಡಿನ ಪರಿಶೀಲಿಸಿದರು. | Kannada Prabha

ಸಾರಾಂಶ

ಹಾವೇರಿಯ ಮುನ್ಸಿಪಲ್ ಹೈಸ್ಕೂಲ್‌ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿಸಿಟಿವಿ ಕಾರ್ಯನಿರ್ವಹಣೆಯನ್ನು ಡಿಡಿಪಿಐ ಮೋಹನ ದಂಡಿನ ಪರಿಶೀಲಿಸಿದರು.

ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮಾ.18ರಿಂದ ಏ.2ರ ವರೆಗೆ ಜಿಲ್ಲೆಯ 81 ಕೇಂದ್ರಗಳಲ್ಲಿ ನಡೆಯಲಿದ್ದು, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ಪರೀಕ್ಷೆ ನಡೆಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

23,348 ವಿದ್ಯಾರ್ಥಿಗಳು: 21,446 ಹೊಸ ವಿದ್ಯಾರ್ಥಿಗಳು, 1,296 ಪುನರಾವರ್ತಿತ ವಿದ್ಯಾರ್ಥಿಗಳು, 528 ಖಾಸಗಿ ಹೊಸ ಅಭ್ಯರ್ಥಿಗಳು, 78 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿ 23,348 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 11,539 ಗಂಡು ಮತ್ತು 11,809 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ.81 ಪರೀಕ್ಷಾ ಕೇಂದ್ರಗಳು: ಬ್ಯಾಡಗಿ ತಾಲೂಕಿನಲ್ಲಿ 07, ಹಾನಗಲ್ಲ ಹಾಗೂ ಹಾವೇರಿಯಲ್ಲಿ ತಲಾ 14, ಹಿರೇಕೆರೂರು-11, ರಾಣಿಬೆನ್ನೂರು-15, ಸವಣೂರ-08 ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ 12 ಸೇರಿ ಒಟ್ಟು 81 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಧಿಕಾರಿ-ಸಿಬ್ಬಂದಿಗಳ ನೇಮಕ: ಸುಗಮ ಪರೀಕ್ಷೆ ನಡೆಸಲು ಮುಖ್ಯಅಧೀಕ್ಷಕರು -81, ಉಪ ಮುಖ್ಯಅಧೀಕ್ಷಕರು-15, ಸಿ.ಸಿ.ಟಿ.ವಿ. ವೆಬ್ ಕಾಸ್ಟಿಂಗ್ ತಂಡ- 14, ಕಸ್ಟೋಡಿಯನ್-81, ಸ್ಥಾನಿಕ ಜಾಗೃತದಳ-81, ಮಾರ್ಗಾಧಿಕಾರಿಗಳು- 32, ಕೊಠಡಿ ಮೇಲ್ವಿಚಾರಕರು- 1089 ಹಾಗೂ 81 ಕಚೇರಿ ಸಹಾಯಕರನ್ನು ನೇಮಕ ಮಾಡಲಾಗಿದೆ.ಪ್ರಶ್ನೆಪ್ರತಿಕೆ ಸರಬರಾಜುಗಾಗಿ 32 ಮಾರ್ಗಗಳನ್ನು ರಚಿಸಲಾಗಿರುತ್ತದೆ. ಪರೀಕ್ಷಾ ಕಾರ್ಯವು ಸುಗಮವಾಗಿ ನಡೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಂಟು ಜಿಲ್ಲಾ ಮಟ್ಟದ ವೀಕ್ಷಕರ ತಂಡವನ್ನು ಹಾಗೂ 32 ತಾಲೂಕು ವೀಕ್ಷಕರ ತಂಡವನ್ನು ಜಿಲ್ಲಾಧಿಕಾರಿಗಳು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.ಅಗತ್ಯ ಮೂಲಭೂತ ಸೌಲಭ್ಯ:

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಉತ್ತಮ ಆಸನದ ವ್ಯವಸ್ಥೆ, ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದೆ. ಜಿಲ್ಲಾ ಪಂಚಾಯಿತಿಯಲ್ಲಿ ಜಿಲ್ಲಾಮಟ್ಟದ ವೆಬ್ ಕಾಸ್ಟಿಂಗ್ ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ನಡೆಸಿ, ನಕಲು ರಹಿತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅಗತ್ಯ ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಜಾಗೃತ ದಳವನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯಎಸ್ಸೆಸ್ಸೆಲ್ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಮಾ.18ರಿಂದ ಏಪ್ರಿಲ್ 2ರ ವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.ಈ ಬಾರಿ ಹಾವೇರಿ ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಫಲಿತಾಂಶ ದಾಖಲಿಸುವ ಗುರಿ ಹೊಂದಲಾಗಿದೆ. ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಪೂರ್ವಸಿದ್ಧತೆ ಕೈಗೊಂಡಿದ್ದು, ವಿದ್ಯಾರ್ಥಿಗಳಿಗೆ ವಿಷಯವಾರು ಮಾರ್ಗದರ್ಶನ ಶಿಬಿರಗಳು, ಮೌಲ್ಯಮಾಪನ ಸಭೆಗಳು ಹಾಗೂ ಪೋಷಕರೊಂದಿಗೆ ಸಮಾಲೋಚನಾ ಸಭೆಗಳನ್ನು ನಡೆಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿದ್ದು, ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ ಎಂದು ಹಾವೇರಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲಕ್ಕೆ ಹೆದರಿ ಗುತ್ತಲ ರೈತ ಆತ್ಮಹತ್ಯೆ
ರಂಜಾನ್, ಯುಗಾದಿ ಆಚರಣೆ ಸೌಹಾರ್ದತೆಯ ಸಂಕೇತ-ಬಿ.ಸಿ. ಪಾಟೀಲ್‌