ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಕಲ್ಬುರ್ಗಿ ಜಿಲ್ಲೆಗಳ ಸಾಧನೆ ಕುರಿತು ಶಾಸಕ ಡಾ. ಭರತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.
ಮೂಲ್ಕಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಕಲ್ಬುರ್ಗಿ ಜಿಲ್ಲೆಗಳ ಸಾಧನೆ ಕುರಿತು ಶಾಸಕ ಡಾ. ಭರತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯನ್ನು ಸದಾ ಟೀಕಿಸುತ್ತಿರುವ ಪ್ರಿಯಾಂಕ ಖರ್ಗೆ ಇನ್ನಾದರೂ ತಮ್ಮ ಜಿಲ್ಲೆಯಲ್ಲಿ ಉಳಿದುಕೊಂಡು ಶಿಕ್ಷಣ ಕ್ಷೇತ್ರವನ್ನು ಮೇಲಕ್ಕೆತ್ತಲು ಶ್ರಮವಹಿಸಬೇಕು ಎಂದು ಭರತ್ ಶೆಟ್ಟಿ ಸಲಹೆ ನೀಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದ್ದರೆ, ಕಲ್ಬುರ್ಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಎಂಬುದನ್ನು ಉಲ್ಲೇಖಿಸಿ, ಸಚಿವರ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಹಿಂದುಳಿದಿದೆ ಎಂದು ಟೀಕಿಸಿದ್ದಾರೆ.
ಸಚಿವರು ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು, ತಮ್ಮ ಜಿಲ್ಲೆಯ ಅಭಿವೃದ್ಧಿಯ ಕಡೆ ಗಮನಹರಿಸಬೇಕು ಎಂದು ಅವರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಮುಂದಿದ್ದು, ಕಲ್ಬುರ್ಗಿ ಜಿಲ್ಲೆ ಇನ್ನೂ ಅನೇಕ ವಿಷಯಗಳಲ್ಲಿ ಹಿಂದೆ ಉಳಿದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ಐಟಿ ಸಚಿವರಾಗಿ ತಮ್ಮ ಜಿಲ್ಲೆಗೆ ನೀಡಿದ ಕೊಡುಗೆಗಳ ಬಗ್ಗೆ ಪ್ರಶ್ನೆ ಎತ್ತಿದ ಅವರು, ಜಿಲ್ಲೆಯ ಅಭಿವೃದ್ಧಿಯ ಮೂಲಕ ನಿಮ್ಮ ಸಾಮರ್ಥ್ಯ ತೋರಿಸಿ ಎಂದು ಸಲಹೆ ನೀಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.