ಕಂಪ್ಲಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಶಾಂತಿಯುತ

KannadaprabhaNewsNetwork |  
Published : Mar 19, 2026, 02:15 AM IST
ಕಂಪ್ಲಿಯಲ್ಲಿ 10ನೇ ತರಗತಿ ಪರೀಕ್ಷಾ ಮುಗಿಸಿಕೊಂಡು ಹೊರ ನಡೆಯುತ್ತಿರುವ ವಿದ್ಯಾರ್ಥಿಗಳು.  | Kannada Prabha

ಸಾರಾಂಶ

ಕಂಪ್ಲಿ ಪಟ್ಟಣದ ನಾಲ್ಕು ಪರೀಕ್ಷಾ ಕೇಂದ್ರಗಳನ್ನು ಒಳಗೊಂಡಂತೆ ತಾಲೂಕಿನಲ್ಲಿ ಒಟ್ಟು ಆರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಿತು.

ಕಂಪ್ಲಿ: ತಾಲೂಕಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮೊದಲ ದಿನದ ಪರೀಕ್ಷೆಗಳು ಶಾಂತಿಯುತವಾಗಿ ಹಾಗೂ ಯಾವುದೇ ಅಡಚಣೆಗಳಿಲ್ಲದೆ ಜರುಗಿದವು.ಕಂಪ್ಲಿ ಪಟ್ಟಣದ ನಾಲ್ಕು ಪರೀಕ್ಷಾ ಕೇಂದ್ರಗಳನ್ನು ಒಳಗೊಂಡಂತೆ ತಾಲೂಕಿನಲ್ಲಿ ಒಟ್ಟು ಆರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಿತು. ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಬಿಗಿ ಭದ್ರತೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಯಾವುದೇ ತೊಂದರೆಗಳಿಲ್ಲದೆ ಪರೀಕ್ಷೆ ಬರೆದರು.

ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನೋಂದಣಿಯಾಗಿದ್ದ 274 ವಿದ್ಯಾರ್ಥಿಗಳಲ್ಲಿ 264 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10 ವಿದ್ಯಾರ್ಥಿಗಳು ಗೈರಾಗಿದ್ದರು. ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನೋಂದಣಿಯಾಗಿದ್ದ 333 ವಿದ್ಯಾರ್ಥಿಗಳಲ್ಲಿ 327 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಓಡ್ಸೋ ಜಡೆಮ್ಮ ಗುರುಸಿದ್ದಯ್ಯ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನೋಂದಣಿಯಾಗಿದ್ದ 380 ವಿದ್ಯಾರ್ಥಿಗಳಲ್ಲಿ 374 ವಿದ್ಯಾರ್ಥಿಗಳು ಹಾಜರಾಗಿದ್ದು, 6 ವಿದ್ಯಾರ್ಥಿಗಳು ಗೈರಾಗಿದ್ದಾರೆ. ವಿಜಯನಗರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನೋಂದಣಿಯಾಗಿದ್ದ 372 ವಿದ್ಯಾರ್ಥಿಗಳಲ್ಲಿ 365 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 7 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ತಾಲೂಕಿನ ಗ್ರಾಮೀಣ ಭಾಗದಲ್ಲಿಯೂ ಪರೀಕ್ಷೆಗಳು ಸಮರ್ಪಕವಾಗಿ ಜರುಗಿದವು. ಎಮ್ಮಿಗನೂರಿನ ಕೆಪಿಎಸ್ ಪರೀಕ್ಷಾ ಕೇಂದ್ರದಲ್ಲಿ ನೋಂದಣಿಯಾಗಿದ್ದ 272 ವಿದ್ಯಾರ್ಥಿಗಳಲ್ಲಿ 265 ವಿದ್ಯಾರ್ಥಿಗಳು ಹಾಜರಾಗಿದ್ದು, 7 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಸುಗ್ಗೇನಹಳ್ಳಿ ವಿದ್ಯಾಭಾರತಿ ಪರೀಕ್ಷಾ ಕೇಂದ್ರದಲ್ಲಿ ನೋಂದಣಿಯಾಗಿದ್ದ 364 ವಿದ್ಯಾರ್ಥಿಗಳಲ್ಲಿ 345 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 19 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಇನ್ನು ತಾಲೂಕಿನಲ್ಲಿ ನೋಂದಣಿಯಾಗಿದ್ದ 10 ಅಂಧ ವಿದ್ಯಾರ್ಥಿಗಳಲ್ಲಿ 8 ವಿದ್ಯಾರ್ಥಿಗಳು ಸಹಾಯಕರೊಂದಿಗೆ ಪರೀಕ್ಷೆ ಬರೆದಿದ್ದು, 2 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಒಟ್ಟಾರೆ ಕಂಪ್ಲಿ ತಾಲೂಕಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೊದಲ ದಿನದಲ್ಲಿ ನೋಂದಣಿಯಾಗಿದ್ದ 1994 ವಿದ್ಯಾರ್ಥಿಗಳಲ್ಲಿ 1940 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 55 ವಿದ್ಯಾರ್ಥಿಗಳು ಗೈರಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್ಲೆಲ್ಲೂ ಯುಗಾದಿಯ ಸಂಭ್ರಮ: ಆದರೆ ಕೂಡ್ಲಿಗಿಯಲ್ಲಿ ಸೂತಕದ ಛಾಯೆ!
ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ: ತಹಸೀಲ್ದಾರ್ ಕೆ. ರಾಘವೇಂದ್ರ ರಾವ್