ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ಸಕಲ ಸಿದ್ಧತೆ

KannadaprabhaNewsNetwork |  
Published : Mar 17, 2026, 02:30 AM IST
ಪೋಟೊ16ಕೆಎಸಟಿ1: ಕುಷ್ಟಗಿ ಪಟ್ಟಣದ ಗುರುಭವನದಲ್ಲಿ ಬಿಇಒ ಉಮಾದೇವಿ ಬಸಾಪೂರು ಅವರು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಸಿಬ್ಬಂದಿಗಳಿಗೆ ಸಭೆ ನಡೆಸಿದರು.  16ಕೆಎಸಟಿ1ಎ: ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಪರೀಕ್ಷಾ ಕೇಂದ್ರದ ಹೊರನೋಟ. | Kannada Prabha

ಸಾರಾಂಶ

ಕುಷ್ಟಗಿ ತಾಲೂಕಿನಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ. 18ರಿಂದ ಏಪ್ರಿಲ್ 2ರ ವರೆಗೂ ನಡೆಯಲಿದ್ದು ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಪಾರದರ್ಶಕತೆಯಿಂದ ನಡೆಸಲು ಸಕಲ ಸಿದ್ಧತೆ ಕೈಗೊಂಡಿದೆ.

ಕುಷ್ಟಗಿ: ತಾಲೂಕಿನಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ. 18ರಿಂದ ಏಪ್ರಿಲ್ 2ರ ವರೆಗೂ ನಡೆಯಲಿದ್ದು ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಪಾರದರ್ಶಕತೆಯಿಂದ ನಡೆಸಲು ಸಕಲ ಸಿದ್ಧತೆ ಕೈಗೊಂಡಿದೆ.

ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 15 ಕೇಂದ್ರಗಳು, 199 ಕೊಠಡಿಗಳನ್ನು ಗುರುತಿಸಲಾಗಿದೆ. ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಬಾಲಕಿಯರು 2320, ಬಾಲಕರು 2223, ಒಟ್ಟು 4774 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ.

ಆ ಪೈಕಿ ಸರಕಾರಿ ಪ್ರೌಢಶಾಲೆಯ 3722 ಅನುದಾನಿತ ಹಾಗೂ ಅನುದಾನರಹಿತ 369 ವಿದ್ಯಾರ್ಥಿಗಳು ಇದ್ದಾರೆ. 4461 ಹೊಸ ವಿದ್ಯಾರ್ಥಿಗಳು, 151 ಪುನರಾವರ್ತಿತ ವಿದ್ಯಾರ್ಥಿಗಳು, 147 ಖಾಸಗಿ ಅಭ್ಯರ್ಥಿಗಳು, 15 ಖಾಸಗಿ ಪುನರಾವರ್ತಿತ ವಿದ್ಯಾರ್ಥಿ ಸೇರಿದಂತೆ ಒಟ್ಟು 4774 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಸಿಸಿ ಕ್ಯಾಮೆರಾ ಅಳವಡಿಕೆ:ಎಸ್ಸೆಸ್ಸೆಲ್ಸಿ ಪರೀಕ್ಷೆಯ 15 ಕೇಂದ್ರಗಳ 199 ಕೊಠಡಿಗಳಿಗೆ 215 ಸಿಸಿ ಕ್ಯಾಮೆರಾ ಅಳವಡಿಕೆ ಕಾರ್ಯ ನಡೆಸಲಾಗಿದೆ. ಎಲ್ಲ ಕೇಂದ್ರಗಳಲ್ಲೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಕಸ್ಟೋಡಿಯನ್ನರು, ಸ್ಥಾನಿಕ ಜಾಗೃತದಳ ಅಧಿಕಾರಿಗಳು, ಮೊಬೈಲ್ ಸ್ವಾಧಿನಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರು, ಹೆಚ್ಚುವರಿ ಸಿಬ್ಬಂದಿ ಒಟ್ಟು 300 ಜನ ಸಿಬ್ಬಂದಿಯನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಬಿಇಒ ಉಮಾದೇವಿ ಬಸಾಪೂರ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಕಲ ಸಿದ್ದತೆ ಮಾಡಿದ್ದಾರೆ.

15 ಪರೀಕ್ಷಾ ಕೇಂದ್ರಗಳು

ಕುಷ್ಟಗಿ ನಗರದಲ್ಲಿ-2, ಹನುಮಸಾಗರದಲ್ಲಿ-2, ಹನುಮನಾಳದಲ್ಲಿ-2, ತಾವರಗೇರಾದಲ್ಲಿ-2, ಕಬ್ಬರಗಿ-1, ದೋಟಿಹಾಳ-1, ಮುದೇನೂರು-1, ತಳುವಗೇರಾ-1, ಚಳಗೇರಿ-1 ನವಲಹಳ್ಳಿ-1, ಜಹಗಿರ ಗುಡದೂರ-1 ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಈ ಎಲ್ಲ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ಸೂಕ್ತವಾದ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಈ ಕೊಠಡಿಗಳಲ್ಲಿ ಕುಡಿಯುವ ನೀರು, ಗಾಳಿ, ಬೆಳಕು ಇರುವಂತೆ ವ್ಯವಸ್ಥೆ ಮಾಡಲಾಗಿದೆ.

ನಿಷೇಧ

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶ ನಿಷೇಧಿತವಾಗಿದ್ದು ಸಮೀಪವಿರುವ ಝರಾಕ್ಸ್, ಸೈಬರ್ ಕೇಂದ್ರಗಳನ್ನು ತೆರೆಯುವಂತಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಬೇರಾವುದೇ ಸಿಬ್ಬಂದಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಪರೀಕ್ಷಾ ಸಿಬ್ಬಂದಿ ಗುರುತಿನ ಚೀಟಿ ಧರಿಸಬೇಕು. ವಿದ್ಯಾರ್ಥಿಗಳಿಗೆ ಮೊಬೈಲ್, ಬ್ಲೂ ಟೂತ್ ವಿದ್ಯುನ್ಮಾನ ಉಪಕರಣ ನಿಷೇಧಿಸಲಾಗಿದೆ, ಕೇಂದ್ರದಲ್ಲಿ ಪರೀಕ್ಷಾ ಸಿಬ್ಬಂದಿಯನ್ನು ಹೊರತು ಪಡಿಸಿ ಅನ್ಯರಿಗೆ ಪ್ರವೇಶ ನಿ಼ಷೇಧ ಮಾಡಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ, ಸ್ವಚ್ಚತೆಗೆ ಆದ್ಯತೆ, ಕುಡಿಯುವ ನೀರಿನ ವ್ಯವಸ್ಥೆ, ಪ್ರತಿ ಕೇಂದ್ರಕ್ಕೆ ಆರೋಗ್ಯ ಸಿಬ್ಬಂದಿ, ಸಾರಿಗೆ ಬಸ್ ವ್ಯವಸ್ಥೆ, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಸಿಬ್ಬಂದಿ, ಪರೀಕ್ಷಾ ಕೇಂದ್ರಗಳ ಭದ್ರತೆಗೆ ಪೊಲೀಸರನ್ನು ನಿಯೋಜಿಸಿದ್ದಾರೆ.

ವಿಕಲಚೇತನರಿಗೆ ಒಂದು ತಾಸು ಹೆಚ್ಚಿಗೆ:

ವಿಕಲಚೇತನ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ವಾಚಕರು, ಸಹಾಯಕರು ಮತ್ತು ಸಹಾಯಕ ಬರಹಗಾರರನ್ನು ನೇಮಿಸಿಕೊಳ್ಳಬಹುದು. ಒಂದು ಗಂಟೆ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ. ನೆಲ ಮಹಡಿಯಲ್ಲಿ ಆಸನದ ವ್ಯವಸ್ಥೆ ಮಾಡಲಾಗುತ್ತದೆ.

ಸಮಿತಿ ರಚನೆ

ಮಾ. 18ರಿಂದ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಸಲು ಎಲ್ಲ ಸಿದ್ದತೆಯನ್ನು ಕೈಗೊಂಡಿದೆ ಪೊಲೀಸ್ ಬಂದೋಬಸ್ತ್, ಸಿ.ಸಿ. ಕ್ಯಾಮೆರಾ, ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಿದೆ. ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ತಹಸೀಲ್ದಾರ್, ಕೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗನ್ನೊಳಗೊಂಡ ಪ್ರಶ್ನೆಪತ್ರಿಕೆ ಪಾಲಕರ ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ಪ್ರಶ್ನೆ ಪತ್ರಿಕೆ ವಿತರಿಸುವ ವಾಹನಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದು ಕುಷ್ಟಗಿ ಬಿಇಒ ಉಮಾದೇವಿ ಬಸಾಪೂರ ತಿಳಿಸಿದ್ದಾರೆ.

ಕುಷ್ಟಗಿ ತಾಲೂಕಿನಲ್ಲಿ ಒಟ್ಟು 15 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ತೊಂದರೆಯಾಗದಂತೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲಿವೆ ಎಂದು ಕುಷ್ಟಗಿ ಕ್ಷೇತ್ರಸಮನ್ವಯಾಧಿಕಾರಿ ಜಗದೀಶಪ್ಪ ಎಂ. ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಟ್ಟೂರಲ್ಲಿ ನೀರಿದ್ದರೂ ಬಳಕೆಗೆ ತೀವ್ರ ಬರ
ಅಡುಗೆ ಅನಿಲ ಕೃತಕ ಅಭಾವ: ಮಾರ್ಕ್ಸ್‌ವಾದಿ ಭಾರತ ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ