ಎಸ್ಸೆಸ್ಸೆಲ್ಸಿ ಮಕ್ಕಳ ಮುಂದಿನ ಭವಿಷ್ಯಕ್ಕೆ ಮೊದಲ ಮೆಟ್ಟಿಲು

KannadaprabhaNewsNetwork |  
Published : Feb 09, 2026, 02:45 AM IST
ಫೋಟೋ 08 ಎಚ್,ಎನ್,ಎಮ್ 02 ಹನುಮಸಾಗರದ ಸರ್ವೋದಯ ಶಾಲೆಯ ವಾರ್ಷಿಕೊತ್ಸವ ಕಾರ್ಯಕ್ರಮವನ್ನು ಸಾಲುಮರದ ತಿಮ್ಮಕ್ಕನಿಗೆ ಪುಷ್ಪವನ್ನು ಹಾಕುವದರ ಮೂಕಾಂತರ ಕಾರ್ಯಕ್ರಮ ಉದ್ಘಾಟಿಸಲಾಯಿತು.  | Kannada Prabha

ಸಾರಾಂಶ

ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು

ಹನುಮಸಾಗರ: ಮುಂದಿನ ಭವಿಷ್ಯಕ್ಕೆ ಎಸ್ಸೆಸ್ಸೆಲ್ಸಿ ಮೊದಲ ಮೆಟ್ಟಿಲು. ವಿದ್ಯಾರ್ಥಿಗಳು ಶ್ರಮ ವಹಿಸಿ ಓದುವ ಮೂಲಕ ಹೆಚ್ಚಿನ ಅಂಕ ಗಳಿಸಬೇಕು ಎಂದು ಕಸಾಪ ತಾಲೂಕಾಧ್ಯಕ್ಷ ಲೆಂಕಪ್ಪ ವಾಲಿಕಾರ ಹೇಳಿದರು.

ಪಟ್ಟಣದ ಸರ್ವೋದಯ ಶಿಕ್ಷಣ ಸಂಸ್ಥೆಯ ವಾರ್ಷಿಕೊತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾಭ್ಯಾಸದತ್ತ ಗಮನಹರಿಸಿ ಮುಂದಿನ ಭವಿಷ್ಯ ರೂಪಿಸಿಕೊಳ್ಳಿ ಎಂದರು.

ಪ್ರಾಂಶುಪಾಲ ಶ್ರೀನಿವಾಸ ನಾನಾಜಕರ ಮಾತನಾಡಿ, ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಮತ್ತು ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು.

ಅಧ್ಯಕ್ಷತೆ ವಹಿಸಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪಂ. ಪ್ರಹಲಾದಾಚಾರ್ಯ ಪೂಜಾರ ಮಾತನಾಡಿ, ಹಲವು ವರ್ಷಗಳಿಂದ ಶಾಲೆಯು ಸಮಾಜಕ್ಕೆ ಉತ್ತಮ ವಿದ್ಯಾರ್ಥಿ ನೀಡುತ್ತಿದೆ. ಈಗಾಗಲೇ ಸಹಸ್ರಾರು ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆದಿದ್ದಾರೆ ಎಂದರು.

ಶ್ರೀನಿವಾಸ ಜಹಗೀರದಾರ, ವಿಜಯೇಂದ್ರ ಕುಲಕರ್ಣಿ, ವಿಶ್ವನಾಥ ನಾಗೂರ, ಮಾರುತಿಸಾ ರಂಗ್ರೇಜ, ಸುಭಾಷ ನಾಗೂರ, ಪ್ರಾಣೇಶ ಪಪ್ಪು, ಮುಖ್ಯಶಿಕ್ಷಕ ಪ್ರಕಾಶ ಹಿರೇಮಠ, ರಮೇಶ ಅಂಬಿಗೇರ, ನೀಲಮ್ಮ ಸೊಪ್ಪಿಮಠ, ಸುಪ್ರಿಯಾ ಜೋಷಿ, ರೂಪಾ ಹಯಗ್ರೀವ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’