ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಶುಕ್ರವಾರ ಆರಂಭವಾದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯಕ್ಕೆ ಪಟ್ಟಣ ಸೇರಿದಂತೆ ತಾಲೂಕಿನಿಂದ ಒಟ್ಟು 1981 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.ತಾಲೂಕಿನಲ್ಲಿ ಒಟ್ಟು 2032 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯಾಗಿದ್ದು, ಇದರಲ್ಲಿ 1997 ವಿದ್ಯಾರ್ಥಿಗಳು ಮಾತ್ರ ಅರ್ಹತೆ ಹೊಂದಿದ್ದಾರೆ. ಈ ಪೈಕಿ 16ವಿದ್ಯಾರ್ಥಿಗಳು ಗೈರಾಗಿದ್ದರಿಂದ ಒಟ್ಟಾರೆ 1981 ಮಕ್ಕಳು ಪರೀಕ್ಷೆ ಹಾಜರಾಗಿದ್ದರು.
ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು, ರಿವರ್‌ವ್ಯಾಲಿ ಶಿಕ್ಷಣ ಸಂಸ್ಥೆ, ಓಂ ಶ್ರೀನಿಕೇತನ ಶಾಲೆ, ತಾಲ್ಲೂಕಿನ ಕಿರಂಗೂರು ಗ್ರಾಮದ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆ, ಮಹದೇವಪುರದ ಎಂ.ಕೆ. ಆನಂದಾಳ್ವಾರ್ ಶಾಲೆ, ಅರಕೆರೆ ಕರ್ನಾಟಕ ಪಬ್ಲಿಕ್ ಶಾಲೆ, ಕೆಆರ್‌ಎಸ್ ಸರ್ಕಾರಿ ಜೂನಿಯರ್ ಕಾಲೇಜು ಮತ್ತು ಬೆಳಗೊಳ ಸರ್ಕಾರಿ ಜೂನಿಯರ್ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಿತು.ಮೊದಲ ಪ್ರಥಮ ಭಾಷೆ ಕನ್ನಡ ವಿಷಯ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಅಕ್ರಮ ತಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. ಒಬ್ಬರು ಮುಖ್ಯ ಅಧೀಕ್ಷಕರು ಮತ್ತು ಸಿಟ್ಟಿಂಗ್ ಸ್ಕ್ವಾಡ್‌ಗಳನ್ನು ನಿಯೋಜಿಸಿದ್ದಾಗಿ ಬಿಇಒ ಆರ್.ಪಿ. ಮಹೇಶ್ ಮಾಹಿತಿ ನೀಡಿದರು.
ತಾಲೂಕಿನ ಬೆಳಗೊಳ ಗ್ರಾಮದ ಪರೀಕ್ಷಾ ಕೇಂದ್ರಕ್ಕೆ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಪಂ ಇಒರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಪರೀಕ್ಷೆ ಅಚ್ಚುಕಟ್ಟಾಗಿ ನಡೆಯಲು ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು.ಎಸ್ಸೆಸ್ಸೆಲ್ಸಿ ಪರೀಕ್ಷೆ: ಕನ್ನಡ ವಿಷಯಕ್ಕೆ 232 ಮಂದಿ ಗೈರು
ಮಂಡ್ಯ:ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೊದಲ ದಿನವಾದ ಶುಕ್ರವಾರ ಕನ್ನಡ ವಿಷಯದ ಪರೀಕ್ಷೆಗೆ ೨೩೨ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಪರೀಕ್ಷೆಗೆ ೨೦,೧೫೮ ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ಅದರಲ್ಲಿ ೧೯,೯೨೬ ಮಂದಿ ಪರೀಕ್ಷೆ ಬರೆದಿದ್ದಾರೆ. ಉಳಿದ ೨೩೨ ಮಂದಿ ಗೈರು ಹಾಜರಾಗಿದ್ದರು ಎಂದು ನೋಡಲ್ ಅಧಿಕಾರಿ ಇಂದ್ರಾಣಿ ತಿಳಿಸಿದ್ದಾರೆ. ಸೋಮವಾರ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ.