ಲಕ್ಷ್ಮೇಶ್ವರ: ಕಠಿಣ ಪರಿಶ್ರಮ, ನಿರಂತರ ಓದು ಇವು ವಿದ್ಯಾರ್ಥಿ ಜೀವನದ ಪ್ರಮುಖ ಅಂಶಗಳಾಗಿವೆ. ಜೀವನದಲ್ಲಿ ನಾವು ಅಂದುಕೊಂಡಿದ್ದನ್ನು ಸಾಧಿಸಬೇಕಾದಲ್ಲಿ ಕಠಿಣ ಪರಿಶ್ರಮದಿಂದ ಮಾತ್ರ ಸಾಧ್ಯವೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಪಟ್ಟಣದ ಚನ್ನಮ್ಮನ ವನದಲ್ಲಿ ಸೋಮವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ತಜ್ಞರೊಂದಿಗೆ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ಬಗೆ ಹೇಗೆ ಎನ್ನುವ ಬಗ್ಗೆ ಸೂಕ್ತ ಮಾರ್ಗದರ್ಶನವನ್ನು ಶಿಕ್ಷಕರು ಹಾಗೂ ಶಿಕ್ಷಣ ತಜ್ಞರು ನೀಡಿದಲ್ಲಿ ಹೆಚ್ಚಿನ ಅಂಕಗಳಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಕಠಿಣ ಪರಿಶ್ರಮ ಹಾಗೂ ನಿರಂತರ ಓದಿನಿಂದ ಪರೀಕ್ಷೆಯ ಭಯ ಹೊಗಲಾಡಿಸಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಹಂತವು ಪ್ರತಿಯೊಬ್ಬ ವ್ಯಕ್ತಿಯ ಜೀವನದ ಮಹತ್ವದ ಘಟ್ಟವಾಗಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯ ಮಾಡುತ್ತದೆ ಎನ್ನುವುದನ್ನು ಅರಿತುಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು. ಈ ವೇಳೆ ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ನಾವು ಜೀವನದಲ್ಲಿ ಉತ್ತಮ ಅಂಶಗಳನ್ನು ಅಳವಡಿಸಿಕೊಂಡು ಬೆಳೆದಲ್ಲಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬಹುದು. ಯಾವ ಬೀಜವನ್ನು ನಾವು ಬಿತ್ತುತ್ತೇವೆ ಅದೇ ಫಲವನ್ನು ಪಡೆಯಲು ಸಾಧ್ಯ. ಆದ್ದರಿಂದ ಉತ್ತಮ ವ್ಯಕ್ತಿಗಳಾಗಿ ಸಮಾಜದಲ್ಲಿ ಉನ್ನತ ಸ್ಥಾನಗಳಿಸಲು ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು. ಈ ವೇಳೆ ಬಿಇಓ ಜಿ.ಎಂ. ಮುಂದಿನಮನಿ, ಮೂಡಲಗಿ ಬಿಇಒ ಅಜಿತ ಮನ್ನಿಕೇರಿ, ಗೋಕಾಕ ಬಿಇಒ ಬಳಿಗಾರ, ಅಥಣಿಯ ಬಸವರಾಜ ಉಮ್ರಾಣಿ, ಇಓ ಕೃಷ್ಣಪ್ಪ ಧರ್ಮರ ಮಾತನಾಡಿದರು. ಪುರಸಭೆ ಸದಸ್ಯ ಸಾಹೇಬಜಾನ್ ಹವಾಲ್ದಾರ, ಎಸ್.ಕೆ. ಹವಾಲ್ದಾರ ಬಿ.ಎಸ್. ಹರ್ಲಾಪೂರ ಮಾತನಾಡಿದರು. ವಾಣಿ ಹತ್ತಿ, ಮಲ್ಲಿಕಾರ್ಜುನ ಹೊಸಮನಿ, ಡಿ.ಎಚ್. ಪಾಟೀಲ, ಎ.ಎನ್. ಮುಳಗುಂದ, ಎಲ್.ಎಸ್. ಅರಳಹಳ್ಳಿ, ಫಹೀಮ್ ಪಲ್ಲಿ, ಎಚ್.ಎಂ.ಗುತ್ತಲ, ಆರ್.ಕೆ.ಸಯ್ಯದ, ಎಸ್.ಡಿ. ಲಮಾಣಿ, ಬಿ.ಸಿ. ಪಟ್ಟೇದ್, ವಾಸು ದೀಪಾಲಿ, ನಾಗರಾಜ ಮಜ್ಜಿಗುಡ್ಡ ಇದ್ದರು. ಜ್ಯೋತಿ ಗಾಯಕವಾಡ ಪ್ರಾರ್ಥಿಸಿದರು. ಉಮೇಶ ನೇಕಾರ ಸ್ವಾಗತಿಸಿದರು. ಈಶ್ವರ ಮೆಡ್ಲೇರಿ ನಿರೂಪಿಸಿದರು. ಸತರೀಶ್ ಬೊಮಲೆ ವಂದಿಸಿದರು.ಪೊಟೋ-ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮನ ವನ ಕಲ್ಯಾಣ ಮಂಟಪದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಪರೀಕ್ಷಾ ಭಯ ಹೋಗಲಾಡಿಸುವ ಕುರಿತ ಹಮ್ಮಿಕೊಂಡ ಕಾರ್ಯಾಗಾರವನ್ನು ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸಿ ಮಾತನಾಡಿದರು.