ತಾಲೂಕಿನ ಪ್ರತಿ ಪ್ರೌಢಶಾಲೆಯ ಗರಿಷ್ಠ ಅಂಕ ಗಳಿಕೆಯ ಮೂರು ವಿದ್ಯಾರ್ಥಿಗಳಿಗೆ ಸನ್ಮಾನ । ಶಂಭುಲಿಂಗೇಶ್ವರ ಎಜುಕೇಷನ್ ಟ್ರಸ್ಟ್ನಿಂದ ಅಭಿನಂದನೆ
ತಾಲೂಕಿನ ಜಯಂತಿನಗರದ ಶಂಭುಲಿಂಗೇಶ್ವರ ಎಜುಕೇಷನ್ ಟ್ರಸ್ಟ್ ಮತ್ತು ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ತಾಲೂಕಿನ ಪ್ರತಿಯೊಂದು ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕಾಲೇಜು ಸಭಾಂಗಣದಲ್ಲಿ ಆಡಳಿತ ಮಂಡಳಿ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಮುರಾರ್ಜಿ, ಆದರ್ಶ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್ ವಸತಿ ಶಾಲೆಗಳು ಸೇರಿ ಅನುದಾನಿತ ಮತ್ತು ಅನುದಾನ ರಹಿತ ಒಟ್ಟು48 ಪ್ರೌಢ ಶಾಲೆಗಳಲ್ಲಿನ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಒಟ್ಟು 144 ವಿದ್ಯಾರ್ಥಿಗಳಿಗೆ ದಿ.ಎ.ಎನ್.ಮಾಯಣ್ಣೇಗೌಡ ಎರೇಗೌಡನಹಳ್ಳಿ, ಕೆ.ಆರ್.ಪುಟ್ಟೇಗೌಡ ಕೆನ್ನಾಳು ಹಾಗೂ ತೊಟ್ಟಿಲು ಪುಟ್ಟೇಗೌಡ ಹುಲಿವಾನ ಇವರ ಹೆಸರಿನಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ತಾಲೂಕಿನ ವಿವಿಧ ಶಾಲೆಗಳಿಂದ ಪಾಲಕರೊಂದಿಗೆ ಆಗಮಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.ಇದೇ ವೇಳೆ ಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿ ಪಿಯುಸಿ ವಿಜ್ಷಾನ ವಿಭಾಗದಲ್ಲಿ ಗರಿಷ್ಠ ಅಂಕ ಗಳಿಸಿರುವ ವಿದ್ಯಾರ್ಥಿಗಳಾದ ಎಂ.ಕೀರ್ತನಾ (92.33), ವೈ.ಪಿ.ದರ್ಶಿನಿ (ಶೇ.88), ತನ್ಮಯಿ (ಶೇ.88), ಪ್ರಿಯಾ (86.33), ಡಿ.ಆರ್.ರಕ್ಷಿತಾ (ಶೇ.86) ಅವರಿಗೂ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಇಡೀ ಜಿಲ್ಲೆಗೆ ನಮ್ಮ ಶಿಕ್ಷಣ ಸಂಸ್ಥೆಯಲ್ಲೇ ಮೊದಲು 5 ತರಬೇತಿ ಕಾಲೇಜುಗಳನ್ನು ತೆರೆಯಲಾಯಿತು. ರಾಷ್ಟ್ರೀಯ ಯೋಗ ತರಬೇತಿ ಕಾರ್ಯಾಗಾರವನ್ನು 3 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.
ಮೊಬೈಲ್ ಹಾವಳಿಯಿಂದ ಮಕ್ಕಳು ಒಳ್ಳೆಯದಕ್ಕಿಂತ ಕೆಟ್ಟದನ್ನು ಅವಲಂಭಿಸುವುದು ಹೆಚ್ಚಾಗಿದೆ. ಮಕ್ಕಳು ಓದಿನ ಜತೆಗೆ ಸಂಸ್ಕಾರವನ್ನು ಕಲಿಯಬೇಕು. ನಮ್ಮವರು ಬದುಕನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಕಾರಣ ಸಂಸ್ಕಾರ ಹಾಳಾಗುತ್ತಿದೆ. ನಮ್ಮ ಮಾತು ಮತ್ತು ನಡವಳಿಕೆ ಯಾರಿಗೂ ನೋವು ಕೊಡಬಾರದು. ಪಾಲಕರು ಇದನ್ನು ಮಕ್ಕಳಿಗೆ ಹೇಳಿಕೊಡಬೇಕು ಎಂದು ಸಲಹೆ ನೀಡಿದರು.
----------
ಪಾಂಡವಪುರ ಜಯಂತಿನಗರದ ಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಎಲ್ಲಾ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.