ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಪ್ರಶಂಸನೀಯ: ಶಾಸಕ ಆರಗ

KannadaprabhaNewsNetwork |  
Published : May 15, 2024, 01:36 AM IST
ಫೋಟೋ 14 ಟಿಟಿಎಚ್ 01: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯ ವಿಧ್ಯಾರ್ಥಿನಿಯಾಗಿ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಡಿ. ರಜತಳನ್ನು ಶಾಸಕ ಆರಗ ಜ್ಞಾನೇಂದ್ರ ಗೌರವಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ರಜತಳ ಪೋಷಕರು ಹಾಗೂ ಪಪಂ ಸದಸ್ಯ ಯತಿರಾಜ್ ಇದ್ದರು. | Kannada Prabha

ಸಾರಾಂಶ

ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಾಗಿ 615 ಅಂಕ ಗಳಿಸುವ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ಡಿ. ರಜತ ಮನೆಗೆ ತೆರಳಿ ಆಕೆಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ನಂತರ 620 ಅಂಕಗಳ ಮೂಲಕ ರಾಜ್ಯಕ್ಕೆ 6ನೇ ಸ್ಥಾನ ಗಳಿಸಿದ ವಾಗ್ದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಛಾಯಾರನ್ನೂ ಅವರ ಮನೆಗೆ ಹೋಗಿ ಗೌರವಿಸಿ ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ತೀರ್ಥಹಳ್ಳಿ

ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ಫಲಿತಾಂಶ ಹೆಮ್ಮೆ ಪಡುವಂತಿದೆ. ತಾಲೂಕಿನ ಸರ್ಕಾರಿ ಸೇರಿದಂತೆ ಎಲ್ಲಾ 43 ಪ್ರೌಢಶಾಲೆಗಳೂ ಉತ್ತಮ ಫಲಿತಾಂಶ ಪಡೆದಿರುವುದು ಕಳೆದ ಬಾರಿ 9 ನೇ ಸ್ಥಾನದಲ್ಲಿದ್ದ ಜಿಲ್ಲೆಯ ಫಲಿತಾಂಶದಲ್ಲಿ ಸುಧಾರಣೆಯಾಗಿರುವುದು ಪ್ರಶಂಸನೀಯ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಮಂಗಳವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಾಗಿ 615 ಅಂಕ ಗಳಿಸುವ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ಡಿ. ರಜತ ಮನೆಗೆ ತೆರಳಿ ಆಕೆಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ನಂತರ 620 ಅಂಕಗಳ ಮೂಲಕ ರಾಜ್ಯಕ್ಕೆ 6ನೇ ಸ್ಥಾನ ಗಳಿಸಿದ ವಾಗ್ದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಛಾಯಾರನ್ನೂ ಅವರ ಮನೆಗೆ ಹೋಗಿ ಗೌರವಿಸಿ ಅಭಿನಂದಿಸಿದರು.ತಾಲೂಕು ಪ್ರಥಮ ಸ್ಥಾನ ಅಭಿಮಾನದ ಸಂಗತಿ:

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಉತ್ತಮ ಫಲಿತಾಂಶ ಬರುವುದಕ್ಕೆ ಕಾರಣರಾದ ಶಾಲಾಭಿವೃದ್ಧಿ ಸಮಿತಿ, ಪೋಷಕರು ಮತ್ತು ಭೋದಕ ವರ್ಗದವರ ಮತು ವಿದ್ಯಾರ್ಥಿಗಳ ಶ್ರಮ ಕಾರಣವಾಗಿದ್ದು ಎಲ್ಲರೂ ಅಭಿನಂದನಾರ್ಹರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನಕ್ಕೆ ಏರಿರುವುದು ಅದರಲ್ಲೂ ಮುಖ್ಯವಾಗಿ ಜಿಲ್ಲೆಯಲ್ಲಿ ಎಂದಿನಂತೆ ನಮ್ಮ ತಾಲೂಕು ಪ್ರಥಮ ಸ್ಥಾನವನ್ನೂ ಗಳಿಸಿರುವುದು ಅಭಿಮಾನದ ಸಂಗತಿಯಾಗಿದೆ ಎಂದರು.

------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಜ್ಞಾನವನ್ನು ಓಡಿಸಿ ಜ್ಞಾನ ಬೆಳಗುವ ಗುರುವಿಗೆ ಗುಲಾಮರಾಗಿ: ಡಿ.ನಾರಾಯಣಪ್ಪ
ತೋಟಗಾರಿಕೆ ವಿವಿಯಲ್ಲಿ ರೈತ ಸಂಪರ್ಕ ಕೇಂದ್ರ ಸ್ಥಾಪಿಸಿ