ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಾದ್ಯಂತ ನಕಲು ಮುಕ್ತವಾಗಿ ಪರೀಕ್ಷೆ ನಡೆಯಬೇಕು. ವಿದ್ಯಾರ್ಥಿಗಳು ಮುಕ್ತವಾಗಿ ಪರೀಕ್ಷೆ ಬರೆಯುವಂತೆ ನೋಡಿಕೊಳ್ಳಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡುವಂತೆ ಸೂಚಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಪರೀಕ್ಷೆ ನಿಯಮಾವಳಿ ಪಾಲಿಸಬೇಕು. ನಿರ್ಲಕ್ಷ್ಯ ಕಂಡುಬಂದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಇರುತ್ತದೆ. ಸುತ್ತಲಿನ ಜೆರಾಕ್ಸ್, ಕಂಪ್ಯೂಟರ್ ಮಳಿಗೆ ಮುಚ್ಚುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ವಾಟರ್ ಬಾಯ್ ನೇಮಕ ರದ್ದುಪಡಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಕೊಠಡಿ ಹೊರಗೆ ಮಾಡಬೇಕು ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಪೋನ್ ಬಳಕೆ ನಿಷೇಧಿಸಲಾಗಿದೆ ಎಂದರು.ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪನ್ವಾರ, ಜಿಲ್ಲಾ ಖಜಾನೆ ಅಧಿಕಾರಿ ಮಾಳಿಂಗರಾಯ ಬಿ., ಡಿಡಿಪಿಐ ಮಂಜುನಾಥ, ಶಹಾಪುರ ಬಿಇಒ ಜಾಹೀದ್ ಬೇಗಂ, ಸುರಪುರ ಬಿಇಒ ಬಸವರಾಜ ಸಿ., ಯಾದಗಿರಿ ಬಿಇಒ ಮಲ್ಲಿಕಾರ್ಜುನ ಪೂಜಾರಿ, ಜಿಲ್ಲಾ ನೋಡಲ್ ಅಧಿಕಾರಿ ಬಸನಗೌಡ ಆಲ್ದಾಳ ಸೇರಿ ಪರೀಕ್ಷೆಗೆ ಜವಾಬ್ದಾರಿ ವಹಿಸಿದ ಇತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.