ಎಸ್ಸೆಸ್ಸೆಂ, ನನ್ನ ಹೆಸರು ಎಳೆತಂದಿದ್ದು ಸರಿಯಲ್ಲ: ವಿಶ್ವನಾಥ

KannadaprabhaNewsNetwork |  
Published : Sep 19, 2025, 01:00 AM IST
18ಕೆಡಿವಿಜಿ5-ದಾವಣಗೆರೆಯಲ್ಲಿ ಗುರುವಾರ ನ್ಯಾಮತಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಡಿ.ಜಿ.ವಿಶ್ವನಾಥ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ನ್ಯಾಮತಿ ತಾಲೂಕಿನ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಚುನಾವಣೆಗೆ ಪಕ್ಷಾತೀತವಾಗಿ ತಾವು ಸ್ಪರ್ಧಿಸಿದ್ದು, ತಮಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬೆಂಬಲ ನೀಡಿದ್ದಾರೆಂಬ ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡರಾದ ಎ.ಬಿ.ಹನುಮಂತಪ್ಪ, ಶಾಂತರಾಜ ಪಾಟೀಲ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಹೊನ್ನಾಳಿ ತಾಲೂಕು ಕಾಂಗ್ರೆಸ್‌ ಅಧ್ಯಕ್ಷ, ಜಿಪಂ ಮಾಜಿ ಸದಸ್ಯ ಡಿ.ಜಿ. ವಿಶ್ವನಾಥ ಸ್ಪಷ್ಟಪಡಿಸಿದ್ದಾರೆ.

- ಬಿಜೆಪಿಯ ಹನುಮಂತಪ್ಪ, ಶಾಂತರಾಜ ಆರೋಪದಲ್ಲಿ ಹುರುಳಿಲ್ಲ: ಸಮರ್ಥನೆ - - -

(ಟಿಎಪಿಸಿಎಂಎಸ್‌ ಚುನಾವಣೆ)

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ನ್ಯಾಮತಿ ತಾಲೂಕಿನ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಚುನಾವಣೆಗೆ ಪಕ್ಷಾತೀತವಾಗಿ ತಾವು ಸ್ಪರ್ಧಿಸಿದ್ದು, ತಮಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬೆಂಬಲ ನೀಡಿದ್ದಾರೆಂಬ ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡರಾದ ಎ.ಬಿ.ಹನುಮಂತಪ್ಪ, ಶಾಂತರಾಜ ಪಾಟೀಲ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಹೊನ್ನಾಳಿ ತಾಲೂಕು ಕಾಂಗ್ರೆಸ್‌ ಅಧ್ಯಕ್ಷ, ಜಿಪಂ ಮಾಜಿ ಸದಸ್ಯ ಡಿ.ಜಿ. ವಿಶ್ವನಾಥ ಸ್ಪಷ್ಟಪಡಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಎಪಿಸಿಎಂಎಸ್‌ ಚುನಾವಣೆ ಪಕ್ಷಾತೀತವಾಗಿ ನಡೆಯುವುದಾಗಿದೆ. ಅಲ್ಲಿ ಪಕ್ಷದ ಚಿಹ್ನೆಯಡಿ ಯಾರೂ ಸ್ಪರ್ಧಿಸುವುದಿಲ್ಲ. ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಗುರುತಿಸಿಕೊಳ್ಳುತ್ತಾರೆ ಎಂದರು.

ಸೆ.14ರಂದು ನ್ಯಾಮತಿ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ತಾವೂ ಸ್ಪರ್ಧಿಸಿದ್ದು, ಕೇವಲ 1 ಮತದಿಂದ ಸೋಲನುಭವಿಸಿದ್ದೇನೆ. ಸೋಲನ್ನು ಒಪ್ಪಿಕೊಳ್ಳುತ್ತೇನೆ ಎಂದರು.

ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸುವ ನನಗೆ ಎಲ್ಲ ಪಕ್ಷದವರೂ ಬೆಂಬಲಿಸಿದ್ದಾರೆ. ಆದರೆ, ಹೊನ್ನಾಳಿಯ ಎ.ಬಿ.ಹನುಮಂತಪ್ಪ, ಶಾಂತರಾಜ ಪಾಟೀಲ ಇತರರು ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಆರೋಪ ಮಾಡಿದ್ದು ಸರಿಯಲ್ಲ. ತಮ್ಮ ವೈಯಕ್ತಿಕ ಜಿದ್ದಿಗೆ ನನ್ನ ಹೆಸರನ್ನು ಹಾಗೂ ನಮ್ಮ ನಾಯಕರಾದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೆಸರನ್ನು ಈ ವಿಚಾರದಲ್ಲಿ ಎಳೆತಂದು, ಸಚಿವರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಸಹ ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ಬಿಜೆಪಿಯ ಯಾರಿಗೂ ಕರೆ ಮಾಡಿಲ್ಲ. ಹೊನ್ನಾಳಿ ಬಿಜೆಪಿ ನಾಯಕರು ಭಿನ್ನಾಭಿಪ್ರಾಯಗಳನ್ನು ಮೊದಲು ಸರಿ ಮಾಡಿಕೊಂಡು, ನಂತರ ಮತ್ತೊಬ್ಬರ ಬಗ್ಗೆ ಮಾತನಾಡಲಿ ಎಂದು ವಿಶ್ವನಾಥ ಸಲಹೆ ನೀಡಿದರು.

ಪಕ್ಷದ ಮುಖಂಡರಾದ ಪಿ.ಎಂ.ಸತೀಶ, ಎ.ಎಸ್.ಮಧುಸೂದನ್, ಗಂಗನಕೋಟೆ ವೀರಭದ್ರ ಪಾಟೀಲ, ಚೀಲೂರು ಬಿ.ಎಸ್.ನಾಗರಾಜ, ಕೆ.ಜಿ.ರವಿಕುಮಾರ ಇತರರು ಇದ್ದರು.

- - -

-18ಕೆಡಿವಿಜಿ5.ಜೆಪಿಜಿ:

ದಾವಣಗೆರೆಯಲ್ಲಿ ಗುರುವಾರ ನ್ಯಾಮತಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಡಿ.ಜಿ.ವಿಶ್ವನಾಥ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ