ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ನಗರದ ಸೈಂಟ್ ಮೇರಿಸ್ ಶಾಲೆಯ ಎಚ್.ವೈ. ನಮ್ರತಾ ಅವರು 625ಕ್ಕೆ 619 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಈ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾ ಸಂಸ್ಥಾಪಕ ಜೆರಾಲ್ಡ್ ಲೋಬೋ ಹಾಗೂ ಸಹ ಸಂಸ್ಥಾಪಕ ಗ್ರೆಗೋರಿ ವಿನೋದ್ ಲೋಬೋ, ಸಂಸ್ಥೆಯ ಶೈಕ್ಷಣಿಕ ನಿರ್ದೇಶರಾದ ಮರಿಯ ಪ್ರಮೀಳ ಡಿಸೋಜ ಹಾಗೂ ಮುಖ್ಯ ಶಿಕ್ಷಕರು, ಸಹ ಶಿಕ್ಷಕ ವೃಂದದವರು ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.ಪೋಟೋ ಫೈಲ್ ನೇಮ್ 9 ಕೆಸಿಕೆಎಂ 7ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಚಿಕ್ಕಮಗಳೂರಿನ ಸೈಂಟ್ ಮೇರಿಸ್ ಶಾಲೆಯ ಸಂಸ್ಥಾಪಕರು ಹಾಗೂ ಆಡಳಿತ ಮಂಡಳಿಯವರು ಮತ್ತು ಶಿಕ್ಷಕರು ಅಭಿನಂದನೆ ಸಲ್ಲಿಸಿದರು.