ಕನ್ನಡಪ್ರಭ ವಾರ್ತೆ ಸಿದ್ದಾಪುರ
ದೇವಣಿಗೇರಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟು ಕೃಷಿ ಫಸಲುಗಳನ್ನು ನಾಶಗೊಳಿಸುತ್ತಾ ದಾಂದಲೆ ನಡೆಸುತ್ತಿತ್ತು. ಹಾಗಾಗಿ ಗ್ರಾಮಸ್ಥರು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕು ಹಾಗೂ ಕಾಡಾನೆಗಳನ್ನು ಕಾಡಿಗಟ್ಟಬೇಕು ಎಂದು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಕಾಡಾನೆ ಮರಿಗಳು ಸೇರಿದಂತೆ 7 ಕಾಡಾನೆಗಳು ಪತ್ತೆ ಹಚ್ಚಿ ಅರಣ್ಯಕ್ಕೆ ಅಟ್ಟಲಾಯಿತು ಎಂದು ವಲಯ ಅರಣ್ಯ ಅಧಿಕಾರಿ ಕೆ.ವಿ. ಶಿವರಾಂ ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ವಿರಾಜಪೇಟೆ ತಾಲೂಕು ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ ಎಸಿಎಫ್ ಗೋಪಾಲ್ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿ ಆನೆ ಕಾರ್ಯಪಡೆಯ ಪ್ರಶಾಂತ್, ಆರ್.ಆರ್.ಟಿ.ತಂಡದ ಅರುಣ್ ಸೇರಿದಂತೆ ಸಿಬ್ಬಂದಿ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.