ಮಾನಸಿಕ ಖಿನ್ನತೆಗೊಳಗಾಗಿದ್ದ ಸ್ಟಾಫ್‌ ನರ್ಸ್ ಆತ್ಮಹತ್ಯೆ

KannadaprabhaNewsNetwork | Updated : Oct 27 2023, 12:31 AM IST

ಸಾರಾಂಶ

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಗುರುವಾರ ಜರುಗಿದೆ.
ಲಿಂಗಸುಗೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಗುರುವಾರ ಜರುಗಿದೆ. ಮಂಜುಳಾ (45) ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಹಟ್ಟಿ ಚಿನ್ನದ ಗಣಿಯ ಸರ್ಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ ಹಲವಾರು ವರ್ಷಗಳಿಮದ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಪತಿ ಜೇಮ್ಸ್‌ ಪಾಲ್ ಅನಾರೋಗ್ಯದಿಂದ ಮೃತಪಟ್ಟಿದ್ದು, ತನ್ನ ಪತಿಯನ್ನ ಕಳೆದುಕೊಂಡು ಮಂಜುಳಾ ಇಬ್ಬರು ಮಕ್ಕಳೊಂದಿಗೆ ಹಟ್ಟಿ ಕ್ಯಾಂಪಿನ ಜಿಆರ್ ಕಾಲೋನಿಯಲ್ಲಿ ವಾಸವಿದ್ದರು. ಪತಿಯ ಅಗಲಿಕೆಯಿಂದ ತೀವ್ರ ಮಾನಸಿಕ ಕಿನ್ನತೆಗೆ ಒಳಗಾಗಿದ್ದ ಮಂಜುಳಾ ಗುರುವಾರ ಬೆಳಗಿನ ಜಾವದಲ್ಲಿ ಜಿಆರ್ ಕಾಲೋನಿಯ ಬ್ಲಾಕ್ ನಂ 40ರ ಮನೆಯ ಹತ್ತಿರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದು, ಮಂಜುಳಾ ತಮ್ಮ ಅನಿಲ್ ಕುಮಾರ ನೀಡಿದ ದೂರಿನ ಹಿನ್ನೆಲೆ ಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share this article