
ಕನ್ನಡಪ್ರಭ ವಾರ್ತೆ ಸಿಂಧನೂರು
ಶಾಲಾ ಮೈದಾನದಲ್ಲಿ ನೀರು ನಿಂತಿರುವುದರಿಂದ ವಿದ್ಯಾರ್ಥಿಗಳು ಆಟ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ತೊಂದರೆಯಾಗುತ್ತಿದೆ. ಅಲ್ಲದೆ ನಿಂತ ನೀರಿನಿಂದ ಸೊಳ್ಳೆಗಳ ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಆತಂಕವಿದೆ ಎಂದು ಸಮಿತಿಯ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ನಾಯಕ ತಿಳಿಸಿದರು.
ವಿದ್ಯಾರ್ಥಿಗಳ ಆರೋಗ್ಯಕ್ಕೆ ಸಂಬಂಧಿಸಿದ ವಿಷಯ ಆಗಿರುವುದರಿಂದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಶಾಲಾ ಆವರಣದಲ್ಲಿ ನಿಂತಿರುವ ಕೊಳಚೆ ಹಾಗೂ ಮಳೆ ನೀರನ್ನು ತಕ್ಷಣ ತೆರವುಗೊಳಿಸಬೇಕು. ಶಾಶ್ವತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಆವರಣದ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡಬೇಕು. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಕಟ್ಟಡ ಮತ್ತು ಮೈದಾನದ ಮೂಲಭೂತ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹರಿಸಬೇಕು.ಒಂದು ತಿಂಗಳೊಳಗೆ ಸಮಸ್ಯೆ ಪರಿಹರಿಸದಿದ್ದರೆ ಮುಂದಿನ ಹಂತದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಬಸವರಾಜ ನಾಯಕ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸದಸ್ಯರಾದ ಅಜ್ಜಪ್ಪ ಜಾಲಗಾರ್, ನಾಗರಾಜ, ಲಾರೆನ್ಸ್ ಇದ್ದರು.