ಕನ್ನಡಪ್ರಭ ವಾರ್ತೆ ಮದ್ದೂರು
ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ.ಸತೀಶ್ ನೇತೃತ್ವದಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ್ ವಿರುದ್ಧ ಘೋಷಣೆ ಕೂಗಿದರು.
ಆರ್‌ಸಿಬಿ ಕಪ್‌ಗೆ ಮುತ್ತಿಡುತ್ತಿರುವ ಡಿ.ಕೆ.ಶಿವಕುಮಾರ್ ಅವರ ಬಿತ್ತಿ ಪತ್ರವನ್ನು ಹಿಡಿದು ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ 11 ಮಂದಿ ಅಮಾಯಕರ ಬಲಿಯಾಗಿದೆ. ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ದೂರಿದರು.ಪ್ರಕರಣದ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಕೂಡಲೇ ರಾಜೀನಾಮೆ ನೀಡಬೇಕು. ಪ್ರಕರಣದ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮನ್ಮು ಮಾಜಿ ನಿರ್ದೇಶಕಿ ರೂಪ, ಮುಖಂಡರಾದ ಜಿ.ಸಿ. ಮಹೇಂದ್ರ, ಎಂ.ಸಿ.ಸಿದ್ದು , ಮಮತಾ ರಾಂಕಾ, ನಿತ್ಯಾನಂದ, ಕೆಂಪ ಬೋರಯ್ಯ, ಗೆಜ್ಜಲಗೆರೆ ಯೋಗೇಶ್ , ಎನ್.ಆರ್.ಪ್ರಕಾಶ್, ಡಾಬಾ ಕಿಟ್ಟಿ, ಶೇಖರ, ಶ್ರೀನಿವಾಸ ಶೆಟ್ಟಿ, ಮಧುಕುಮಾರ, ವೀರಭದ್ರ ಸ್ವಾಮಿ, ವಳಗೆರೆಹಳ್ಳಿ ರವಿ, ಜಿ.ಸಿ.ಮಧು ಮತ್ತಿತರರು ಭಾಗವಹಿಸಿದ್ದರು.