ಭದ್ರತಾ ವೈಫಲ್ಯದಿಂದ ಬೆಂಗಳೂರಿನಲ್ಲಿ ಕಾಲ್ತುಳಿತ: ಆರೋಪ

KannadaprabhaNewsNetwork |  
Published : Jun 18, 2025, 12:16 AM ISTUpdated : Jun 18, 2025, 04:56 PM IST
ಪೊಟೋ ಪೈಲ್ ನೇಮ್ ೧೭ಎಸ್‌ಜಿವಿ೧ ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ರಾಜ್ಯ ಸರ್ಕಾರದ ಭದ್ರತಾ ವೈಫಲ್ಯದಿಂದ ೧೧ ಜನರ ಸಾವಿಗೆ ಆಕ್ರೋಶ ವ್ಯಕ್ತಪಡಿಸಿ ಶಿಗ್ಗಾಂವಿ ಮಂಡಲ ಬಿಜೆಪಿ ವತಿಯಿಂದ  ಚನ್ನಮ್ಮ ವೃತ್‌ದಲ್ಲಿ  ಮಾನವ ಸರಪಳಿಯ ಮೂಲಕ ದಿಕ್ಕಾರ ಕೂಗಿದರು | Kannada Prabha

ಸಾರಾಂಶ

ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು 5 ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಖಂಡನೀಯ.

ಶಿಗ್ಗಾಂವಿ : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ರಾಜ್ಯ ಸರ್ಕಾರದ ಭದ್ರತಾ ವೈಫಲ್ಯದಿಂದ ೧೧ ಜನರು ಕಾಲ್ತುಳಿತದಿಂದ ಸಾವಿಗೀಡಾದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿ ಶಿಗ್ಗಾಂವಿ ಮಂಡಲ ಬಿಜೆಪಿ ವತಿಯಿಂದ ಮಂಗಳವಾರ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. 

ಶಿಗ್ಗಾಂವಿ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ ಮಾತನಾಡಿ, ರಾಜ್ಯ ಸರ್ಕಾರದ ವೈಫಲ್ಯದಿಂದ ಇಂತಹ ಅನಾಹುತ ಸಂಭವಿಸಿದೆ. ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ೫ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಖಂಡನೀಯ. ಕೂಡಲೆ ಅಮಾನತು ಹಿಂಪಡೆದು ಘಟನೆಯ ನೈತಿಕ ಹೊಣೆ ಹೊತ್ತು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸಿದ್ಧಾರ್ಥಗೌಡ ಪಾಟೀಲ, ಯುವ ಮೋರ್ಚಾ ರಾಜ್ಯ ಸಮಿತಿ ಸದಸ್ಯ ನರಹರಿ ಕಟ್ಟಿ, ಮಾಜಿ ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ಪ್ರಧಾನ ಕಾಯದರ್ಶಿ ರೇಣುಕನಗೌಡ ಪಾಟೀಲ, ಪುರಸಭೆ ಸದಸ್ಯರಾದ ಪರಶುರಾಮ ಸೊನ್ನದ, ದಯಾನಂದ ಅಕ್ಕಿ, ಮಂಜುನಾಥ ಬ್ಯಾಹಟ್ಟಿ, ಸೋಮಶೇಖರ ಗೌರಿಮಠ, ಕರಿಯಪ್ಪ ಕಟ್ಟಿಮನಿ, ಶರೀಫಸಾಬ ನದಾಫ, ಹೊನ್ನಪ್ಪ ಹೂಗಾರ, ಸಂಜೀವ ಮಣ್ಣಣ್ಣವರ,ರಮೇಶ ಸಾತಣ್ಣವರ, ಪ್ರತೀಕ ಕೊಳೇಕರ, ಚೇತನ ಕಲಾಲ, ಸಚಿನ ಮಡಿವಾಳರ, ಕಿರಣ ಬಡ್ಡಿ, ಸಂಜೀವ ಬಾರಿಗಿಡದ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಎಲೆಕ್ಟ್ರಿಕಲ್ ಮೋಟಾರ್ ರಿವೈಡಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿಯಲ್ಲಿ ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಜು. 5ರಿಂದ ಆ. 8ರ ವರೆಗೆ 31 ದಿನಗಳ ಉಚಿತ ಎಲೆಕ್ಟ್ರಿಕಲ್ ಮೋಟಾರ್ ರಿವೈಡಿಂಗ್ ತರಬೇತಿ ಆಯೋಜಿಸಲಾಗಿದೆ.

ಜಿಲ್ಲೆಯ 18ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಈ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲೆಯ ಗ್ರಾಮೀಣ ಭಾಗದ ಹಾಗೂ ರೇಷನ್ ಕಾರ್ಡ್ ಹೊಂದಿದವರಿಗೆ ಮಾತ್ರ ತರಬೇತಿಗೆ ಅವಕಾಶವಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.ಆಸಕ್ತರು ಜೂ. 28ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿ, ಡಿಸಿ ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ- ಹಾವೇರಿ ಮೊ. 8660219375 ಸಂಪರ್ಕಿಸಲು ಕೋರಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ