ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಡನೆ ಗುರುವಾರ ಸಭೆ ನಡೆಸಿ, ಕಾವೇರಿ ನದಿ ಪಾತ್ರದಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಸ್ನಾನ ಮಾಡಿದ ನಂತರ ಬಟ್ಟೆಗಳನ್ನು ನೀರಿಗೆ ಬಿಸಾಡುವುದು ಸಾಮಾನ್ಯ. ಕಾವೇರಿ ನದಿ ಪಾತ್ರದಲ್ಲಿ ಮಾಲಿನ್ಯ ತಡೆಗಟ್ಟಲು ಅಸ್ಥಿ ವಿಸರ್ಜನೆಗೆ ದರ ನಿಗದಿ ಪಡಿಸಿ ನೋಡಿಕೊಳ್ಳಲು ಏಜೆನ್ಸಿಯನ್ನು ನೇಮಕ ಮಾಡಲಾಗಿದೆ ಎಂದರು.
ಕಾವೇರಿ ನದಿ ಪಾತ್ರದ ಗೋಸಾಯಿ ಘಾಟ್, ಕಾವೇರಿ ಸಂಗಮ, ಪಶ್ಚಿಮ ವಾಹಿನಿ, ಸ್ನಾನ ಘಟ್ಟಗಳಲ್ಲಿ ನಾಲ್ಕು ಸ್ಥಳಗಳಲ್ಲಿ ಅಸ್ಥಿ ವಿಸರ್ಜನೆ ಮಾಡುವ ಸ್ಥಳಗಳಲ್ಲಿ ಏಜೆನ್ಸಿ ಅವರು ಸ್ನಾನ ಮಾಡಿದ ನಂತರ ಸಾರ್ವಜನಿಕರಿಗೆ ಬಟ್ಟೆ ಬದಲಾಯಿಸಲು ಕೊಠಡಿಗಳ ವ್ಯವಸ್ಥೆ ಮಾಡಬೇಕು. ಹಸಿ ಬಟ್ಟೆಗಳು, ಹೂವು, ಹಣ್ಣು ಇತರೆ ಪದಾರ್ಥಗಳನ್ನು ವಿಲೇವಾರಿ ಮಾಡಲು ಅಗತ್ಯ ಕಸದ ಬುಟ್ಟಿಗಳನ್ನು ಇಡಬೇಕು. ಇವುಗಳ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅಧಿಕಾರಿಗಳು ಅಸ್ಥಿ ವಿಸರ್ಜನೆಗೆ ನಿಗದಿಪಡಿಸಿರುವ ಸ್ಥಳಗಳನ್ನು ಹೊರತು ಪಡಿಸಿ ಸಾರ್ವಜನಿಕರು ಕಾವೇರಿ ನದಿ ಪಾತ್ರದ ಬೇರೆ ಸ್ಥಳಗಳಲ್ಲಿ ಅಸ್ಥಿ ವಿಸರ್ಜನೆ ಮಾಡದಂತೆ ಪರಿಶೀಲನೆ ನಡೆಸಿ ಎಂದರು.
ಅಧಿಕಾರಿಗಳು ಕಾವೇರಿ ನದಿ ಪಾತ್ರದಲ್ಲಿ ಅಸ್ಥಿ ವಿಸರ್ಜನೆ ಮಾಡುವ ಅರ್ಚಕರ ಪಟ್ಟಿಯನ್ನು ಸಿದ್ಧಪಡಿಸಿ ಪುರೋಹಿತರೊಂದಿಗೆ ಸಭೆ ನಡೆಸಿ ಅವರಿಗೆ ಯಾವುದೇ ತ್ಯಾಜ್ಯಗಳನ್ನು ನೀರಿಗೆ ಬಿಸಾಡದಂತೆ ತಿಳಿವಳಿಕೆ ನೀಡಿ ಎಂದರು
ಪರಿಸರವನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇಂದು ನಾವು ನಮ್ಮ ಜಲ ಸಂಪನ್ಮೂಲವನ್ನು ಸಂರಕ್ಷಣೆ ಮಾಡದೆ ಹೋದರೆ ನಮ್ಮ ಮುಂದಿನ ಪೀಳಿಗೆ ನೀರಿಲ್ಲದೆ ಪರದಾಡುತ್ತಿರುವ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದರು.