ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 400ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿ ಆಗುವುದರಲ್ಲಿ ಸಂದೇಹವಿಲ್ಲ
ನರಗುಂದ: ಲೋಕಸಭಾ ಚುನಾವಣೆ ಹಿನ್ನೆಲೆ ನರಗುಂದ ಶಾಸಕ ಸಿ.ಸಿ. ಪಾಟೀಲ ಪಟ್ಟಣದ ಅಧ್ಯಾಪಕ ನಗರದ ಪ್ರಾಥಮಿಕ ಶಾಲೆಯ 74ನೇ ಮತಗಟ್ಟೆಗೆ ಕುಟುಂಬದ ಸಮೇತರಾಗಿ ಬಂದು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಪ್ರಪಂಚದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ. 2 ಹಂತದ ಚುನಾವಣೆಯಲ್ಲಿ 14 ಜನ ಕಣದಲ್ಲಿದ್ದು, ಪ್ರಧಾನಿ ಮೋದಿಯವರ ಆಡಳಿತವನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 400ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿ ಆಗುವುದರಲ್ಲಿ ಸಂದೇಹವಿಲ್ಲ ಎಂದರು.
ಈ ಸಂದರ್ಭದಲ್ಲಿ ಶಾಸಕರ ಪತ್ನಿ ಶೋಭಾ ಪಾಟೀಲ, ಪುತ್ರರಾದ ಉಮೇಶಗೌಡ ಪಾಟೀಲ, ಸಂಗನಗೌಡ ಪಾಟೀಲ, ಮಹೇಶಗೌಡ ಪಾಟೀಲ, ಪುತ್ರಿ ರೂಪಾ ಪಾಟೀಲ, ಸೊಸೆ ಪೂಜಾ ಪಾಟೀಲ, ಸೇರಿದಂತೆ ಮುಂತಾದವರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.