ಕೊಪ್ಪಳ: ಜಿಲ್ಲಾ ನೌಕರರ ಸಂಘದ ಚುನಾವಣೆ ಜಿಲ್ಲಾದ್ಯಂತ ತಾರಕಕ್ಕೇರಿದೆ. ಈಗಾಗಲೇ ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲಾ ಹಂತದ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ರಾಜಕೀಯ ಪಕ್ಷವನ್ನು ಮೀರಿಸುವಂತೆ ಪ್ರಚಾರ ಮಾಡಲಾಗುತ್ತಿದೆ.
ನ. 11ರಂದು ನಾಮಪತ್ರ ಪರಿಶೀಲನೆ ಮತ್ತು ವಾಪಸಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಈ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಕಣದಲ್ಲಿ ಎಷ್ಟು ಆಕಾಂಕ್ಷಿಗಳು ಉಳಿಯುತ್ತಾರೆ ಎನ್ನುವುದು ಗೊತ್ತಾಗುತ್ತದೆ.
ನ. 16ರಂದು ಮತದಾನ ನಿಗದಿಯಾಗಿದ್ದು, ಯಾವ ಸ್ಥಾನಗಳಲ್ಲಿ ಸ್ಪರ್ಧೆಯಲ್ಲಿ ಉಳಿಯುತ್ತಾರೆ. ಆ ಸ್ಥಾನಕ್ಕೆ ಮಾತ್ರ ಮತದಾನ ನಡೆಯಲಿದೆ. ಈಗಾಗಲೇ ಇರುವ ಮಾಹಿತಿಯ ಪ್ರಕಾರ 30 ಸ್ಥಾನಗಳಿಗೆ ಕೇವಲ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆ ಪಕ್ಕಾ ಎನ್ನಲಾಗುತ್ತಿದೆ. ಆದರೆ, ನಾಮಪತ್ರ ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪಡೆಯುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಅವಿರೋಧ ಆಯ್ಕೆಯಾದವರನ್ನು ಘೋಷಣೆ ಮಾಡಲಾಗುತ್ತದೆ.ಪ್ರತ್ಯೇಕ ಬಣ
ಶಿಕ್ಷಕರ ವಲಯದಲ್ಲಿ ತೀವ್ರ ಪೈಪೋಟಿ
ಮನೆ ಮನೆಗೆ ಹೋಗಿ ಮತಯಾಚನೆ ಮಾಡುವುದು, ಪಾರ್ಟಿ ಮಾಡಿ ಮತಯಾಚನೆ ಮಾಡುವುದು ತುರುಸಾಗಿಯೇ ನಡೆದಿದೆ. ರಾಜಕೀಯ ಪಕ್ಷಗಳನ್ನು ನಾಚಿಸುವಂತೆ ಶಿಕ್ಷಕರು ಹಾಗೂ ನೌಕರರು ಸುತ್ತಾಡಿ ಮತಯಾಚನೆ ಮಾಡುತ್ತಿದ್ದಾರೆ. ಜಾತಿ, ಧರ್ಮದ ಆಧಾರದಲ್ಲಿ ಮತಯಾಚನೆ ಮಾಡಲಾಗುತ್ತಿದೆ.