ಮೆಕ್ಕೆಜೋಳ ಖರೀದಿ ಆರಂಭಿಸಿ : ಬಸವರಾಜ ಬೊಮ್ಮಾಯಿ

KannadaprabhaNewsNetwork |  
Published : Nov 13, 2025, 01:15 AM ISTUpdated : Nov 13, 2025, 06:47 AM IST
  Basavaraj Bommai

ಸಾರಾಂಶ

ಹಾವೇರಿ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು, ಮೆಕ್ಕೆಜೋಳ ಖರೀದಿ ಆರಂಭಿಸಬೇಕು ಮತ್ತು ಪ್ರತಿ ಟನ್ ಕಬ್ಬಿಗೆ ಸರ್ಕಾರ ನಿಗದಿ ಮಾಡಿರುವ ₹3300 ದರವನ್ನು ಜಿಲ್ಲೆಯ ರೈತರಿಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಹಾವೇರಿ: ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು, ಸತತ ಮಳೆಯಿಂದಾಗಿ ಮೆಕ್ಕೆಜೋಳ, ಹೆಸರು, ಸೋಯಾಬಿನ್ ಎಲ್ಲವೂ ನಾಶವಾಗಿದೆ. ರಾಜ್ಯ ಸರ್ಕಾರ ಕೂಡಲೇ ಬೆಳೆ ನಷ್ಟ ಪರಿಹಾರ ನೀಡಬೇಕು. ಮೆಕ್ಕೆಜೋಳ ಖರೀದಿ ಆರಂಭಿಸಬೇಕು ಮತ್ತು ಪ್ರತಿ ಟನ್ ಕಬ್ಬಿಗೆ ಸರ್ಕಾರ ನಿಗದಿ ಮಾಡಿರುವ ₹3300 ದರವನ್ನು ಜಿಲ್ಲೆಯ ರೈತರಿಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

  ಎಕ್ಸ್ ಖಾತೆಯಲ್ಲಿ ಪ್ರಕಟ

ಈ ಕುರಿತು ಎಕ್ಸ್ ಖಾತೆಯಲ್ಲಿ ಪ್ರಕಟಿಸಿರುವ ಅವರು, ಹಾವೇರಿ ಜಿಲ್ಲೆಯಲ್ಲಿ ರೈತರಿಗೆ ಈಗ ಕಬ್ಬಿಗೆ ನ್ಯಾಯ ಸಮ್ಮತವಾದ ದರ ಸಿಕ್ಕಿಲ್ಲ ಹಾಗೂ ಮೆಕ್ಕೆಜೋಳ ಎಂಎಸ್‌ಪಿಗಿಂತ ಹೆಚ್ಚು ದರದಲ್ಲಿ ಖರೀದಿ ಮಾಡಬೇಕೆಂದು ಧರಣಿ ಮಾಡುತ್ತಿದ್ದಾರೆ. ಬೆಳೆ ನಷ್ಟ ಸರ್ವೆಯಲ್ಲಿ ಅನ್ಯಾಯವಾಗಿದೆ. ಇದುವರೆಗೂ ಬೆಳೆ ನಷ್ಟ ಪರಿಹಾರ ಬಂದಿಲ್ಲ. ಆದ್ದರಿಂದ ಕೂಡಲೇ ಜಿಲ್ಲಾಡಳಿತ ರಾಜ್ಯ ಸರ್ಕಾರ ನಿಗದಿ ಮಾಡಿರುವ ಪ್ರತಿ ಟನ್ ಕಬ್ಬಿಗೆ ₹3300 ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಅನುಷ್ಠಾನ ಮಾಡಬೇಕು. ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಬೆಳೆ ಬೆಳೆದಿರುವುದು ಮೆಕ್ಕೆಜೋಳ ಸುಮಾರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಇಳುವರಿ ಬರುವ ಅಂದಾಜಿದೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆದ ರೈತರ ರಕ್ಷಣೆಗೆ ಬರಬೇಕಿರುವುದು ರಾಜ್ಯ ಸರ್ಕಾರದ ಕರ್ತವ್ಯ. ರಾಜ್ಯ ಸರ್ಕಾರ ಕೂಡಲೇ ಕೆಎಂಎಫ್‌ಗೆ ಆದೇಶ ಕೊಟ್ಟು ಅವರಿಗೆ ಅವಶ್ಯವಿರುವ ಮೆಕ್ಕೆಜೋಳ ನೇರವಾಗಿ ರೈತರಿಂದ ಖರೀದಿಸಲು ಆದೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮೆಕ್ಕೆಜೋಳ ಖರೀದಿ ಆರಂಭಿಸಬೇಕು

ಅಲ್ಲದೇ ಕೂಡಲೇ ಮೆಕ್ಕೆಜೋಳ ಖರೀದಿ ಆರಂಭಿಸಬೇಕು. ಎಲ್ಲೆಲ್ಲಿ ಸರ್ವೆ ಕಾರ್ಯ ಸರಿ ನಡೆದಿಲ್ಲ ಎಂಬ ದೂರು ಬಂದಿವೆಯೋ ಅಲ್ಲಿ ರಾಜ್ಯ ಸರ್ಕಾರದಿಂದ ಅನುಮತಿ ಪಡೆದು ಮರು ಸರ್ವೆ ಮಾಡಿ ಕೂಡಲೇ ಬೆಳೆ ನಷ್ಟ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಲು ಆಗ್ರಹಿಸಿದ್ದಾರೆ.

ಈಗಾಗಲೇ ನಾನು ಕಬ್ಬಿನ ದರದ ಬಗ್ಗೆ ಜಿಲ್ಲಾಧಿಕಾರಿ ಜತೆ ಮಾತನಾಡಿದ್ದೇನೆ. ಕೂಡಲೇ ಸಕ್ಕರೆ ಸಚಿವರು ಕೂಡ ಮಧ್ಯಪ್ರವೇಶ ಮಾಡಿ ಈ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!