ಹುಬ್ಬಳ್ಳಿ:
ಕಳೆದ ಐದಾರು ವರ್ಷಗಳಿಂದ ಪ್ರಕೃತಿಯ ವಿಕೋಪದಿಂದಾಗಿ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಭೀಕರ ಬರಗಾಲಕ್ಕೆ ತುತ್ತಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸಂದಿಘ್ನ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ಬೆನ್ನಿಗೆ ನಿಂತು ಅವರ ಬೆಳೆಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಕಳಸಾ-ಬಂಡೂರಿ, ಮಹದಾಯಿ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಬೇಕು. ಬೆಣ್ಣಿಹಳ್ಳ ಕಾಮಗಾರಿಯನ್ನು ₹ 200 ಕೋಟಿ ವೆಚ್ಚದಲ್ಲಿ ಆರಂಭಿಸಿದ್ದು ಈ ಕಳಪೆ ಗುಣಮಟ್ಟದಿಂದ ನಡೆಯುತ್ತಿದೆ. ಇದರಿಂದಾಗಿ ರೈತರ ಹೊಲದಲ್ಲಿ ನೀರು ನಿಂತು ಹಾನಿಯಾಗುತ್ತಿದ್ದು, ಗುಣಮಟ್ಟದ ಹಾಗೂ ವೈಜ್ಞಾನಿಕವಾಗಿ ಕಾಮಗಾರಿ ಮಾಡುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಕೂಡಲೇ ಜಮೀನಿನಲ್ಲಿ ನಿಂತ ನೀರು ಹಳ್ಳಕ್ಕೆ ಹರಿದು ಹೋಗಲು ಪೈಪ್ ಅಳವಡಿಸಬೇಕೆಂದು ಒತ್ತಾಯಿಸಿದರು.ಉತ್ತರ ಕರ್ನಾಟಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಸೂಕ್ತ ಪರಿಹಾರ ನೀಡಬೇಕು. ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡಬೇಕು.
ಈ ವೇಳೆ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಹೇಮನಗೌಡ ಬಸನಗೌಡ್ರ, ಪ್ರಕಾಶ ಸವದತ್ತಿ, ಕಲ್ಲಪ್ಪ ಡೈಲಾತರ, ಮೌನೇಶ, ಹನುಮಂತಪ್ಪ ಕರಲಿಂಗಣ್ಣವರ, ಲಿಂಗಯ್ಯ ಹಿರೇಮಠ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.