ಹುಬ್ಬಳ್ಳಿ:
ಉದ್ಯಮಿಗಳು, ಸ್ಟಾರ್ಟ್‌ಅಪ್ ಸಂಸ್ಥಾಪಕರು, ಬ್ಯಾಂಕಿಂಗ್ ವಲಯದ ಪ್ರತಿನಿಧಿಗಳು, ಹಣಕಾಸು ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ ಈ ಸಮಾವೇಶವು ಉದ್ಯಮದ ಬೆಳವಣಿಗೆಗೆ ಹೊಸ ದಿಕ್ಕನ್ನು ನೀಡಿತು.
ಕಾರ್ಯಕ್ರಮ ಉದ್ಘಾಟಿಸಿದ ಡಾ. ರಾಜನ್ ದೇಶಪಾಂಡೆ ಅರ್ಥಪೂರ್ಣವಾಗಿ ಮಾತನಾಡಿದರು. ಸಮಾವೇಶದಲ್ಲಿ ಎಂಎಸ್‌ಎಂಇ ಮತ್ತು ಸ್ಟಾರ್ಟಪ್ ಬೆಳವಣಿಗೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ವಿಶೇಷ ಉಪನ್ಯಾಸ ಮತ್ತು ಚರ್ಚೆಗಳು ನಡೆದವು. ಅನುಪ್ ಪೈ ಉದ್ಯಮಗಳನ್ನು ಸಾರ್ವಜನಿಕ ಷೇರು ಮಾರುಕಟ್ಟೆಯತ್ತ ಕೊಂಡೊಯ್ಯುವ ಮಾರ್ಗಗಳ ಕುರಿತು ವಿವರಿಸಿದರು. ಸಿಎ ಉಲ್ಲಾಸ್ ಕಾಮತ್ ಕುಟುಂಬ ಆಧಾರಿತ ಉದ್ಯಮಗಳ ಸುಸ್ಥಿರ ಬೆಳವಣಿಗೆ ಮತ್ತು ನಾಯಕತ್ವ ವರ್ಗಾವಣೆಯ ಮಹತ್ವವನ್ನು ತಿಳಿಸಿದರು.ವಿಶೇಷ ಪ್ಯಾನಲ್ ಚರ್ಚೆಯಲ್ಲಿ ಸಾಂಪ್ರದಾಯಿಕ ಉದ್ಯಮಗಳನ್ನು ಆಧುನಿಕ ಹಾಗೂ ತಂತ್ರಜ್ಞಾನ ಆಧಾರಿತ ಸಂಸ್ಥೆಗಳಾಗಿ ರೂಪಾಂತರಿಸುವ ಮಾರ್ಗಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಉದ್ಯಮಿಗಳು ಎದುರಿಸುತ್ತಿರುವ ಸವಾಲುಗಳು ಮತ್ತು ಅವುಗಳ ಪರಿಹಾರಗಳ ಕುರಿತು ಅರ್ಥಪೂರ್ಣ ಸಂವಾದ ನಡೆಯಿತು.
ಕಲ್ಪನಾ ನಾಯಕ್, ದಿಲೀಪ್ ಭಟ್, ಸುಹಾಸ್ ಪ್ರಭು, ರಾಮ್ ಕಿಣಿ, ಆರ್. ಆರ್. ಕಾಮತ್, ಪ್ರತಾಪ ಕಾಮತ್ ಅವರನ್ನು ಸನ್ಮಾನಿಸಲಾಯಿತು.