ಮಂಡ್ಯ ಜಿಲ್ಲೆಯ ರಾಜ್ಯ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಗಿಸಿ

KannadaprabhaNewsNetwork |  
Published : Oct 09, 2025, 02:00 AM IST
8ಕೆಎಂಎನ್ ಡಿ24 | Kannada Prabha

ಸಾರಾಂಶ

ಕಾಮಗಾರಿಗೆ ಅಗತ್ಯ ವಿರುವ ಹೆಚ್ಚುವರಿ ಭೂಮಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿ 150-ಎರಲ್ಲಿ ಕೆ.ಬಿ ಕ್ರಾಸ್‌ನಿಂದ ಚುಂಚನಹಳ್ಳಿ ರಸ್ತೆ ವಿಸ್ತರಣೆ, ಮೆಲುಸೇತುವೆ ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ ಅನುಷ್ಠಾನ ಮಾಡಿ.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರ ಮುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ವಿಕಾಸಸೌಧ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, ಜಿಲ್ಲಾ ವ್ಯಾಪ್ತಿಯ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರು.

ಕಾಮಗಾರಿಗೆ ಅಗತ್ಯ ವಿರುವ ಹೆಚ್ಚುವರಿ ಭೂಮಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿ 150-ಎರಲ್ಲಿ ಕೆ.ಬಿ ಕ್ರಾಸ್‌ನಿಂದ ಚುಂಚನಹಳ್ಳಿ ರಸ್ತೆ ವಿಸ್ತರಣೆ, ಮೆಲುಸೇತುವೆ ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ ಅನುಷ್ಠಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ಹೈವೆ ಮತ್ತು ಅದಕ್ಕೆ ಸಂಪರ್ಕಿತ ಸರ್ವಿಸ್ ರಸ್ತೆಗಳಲ್ಲಿ ಬಾಕಿ ಇರುವ ಕಾಮಗಾರಿ, ಹಾಗೆಯೇ ಬೆಂಗಳೂರಿನಿಂದ ಹಾಸನ, ಮೈಸೂರು - ಕೆ.ಆರ್.ಪೇಟೆ ಮತ್ತು ಮೈಸೂರು-ನಾಗಮಂಗಲ ರಸ್ತೆಗಳಿಗೆ ಸಂಬಂಧಿಸಿದ ಭೂ-ಸ್ವಾಧೀನ ಪ್ರಕ್ರಿಯೆ ಮತ್ತು ಇತರೆ ಕಾನೂನು ಕಾರ್ಯವಿಧಾನಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಹಾದುಹೋಗುವ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮುಚ್ಚುವುದು ಮತ್ತು ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಸಚಿವರು ನಿರ್ದೇಶಿಸಿದರು.

ಇಂದು ವಿದ್ಯುತ್ ವ್ಯತ್ಯಯ

ಮಳವಳ್ಳಿ: ತಾಲೂಕಿನ ಕಿರುಗಾವಲು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ 11ಕೆವಿ ಎಫ್-9 ಮೂಗನಕೊಪ್ಪಲು(ಐಪಿ) ಫೀಡರ್‌ನ ನಿರ್ವಹಣಾ ಕಾರ್ಯವಿರುವುದರಿಂದ ಅ.9ರಂದು ಬೆಳಗ್ಗೆ 9 ರಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಕೇಂದ್ರ ಮಾರ್ಗದ ಮೂಗನಕೊಪ್ಪಲು, ಆಲದಹಳ್ಳಿ, ಸಂಶೆಟ್ಟಿಪುರ, ದಡದಪುರ, ಜಡಗನಪುರ, ಕೊದೇನಕೊಪ್ಪಲು, ಉಪ್ಪನಹಳ್ಳಿ, ಕನ್ನಹಳ್ಳಿ, ಬಂಡೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ಪುಟ್ಟಸ್ವಾಮಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ