- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ವತಿಯಿಂದ ಪತ್ರಿಕಾ ದಿನಾಚರಣೆ
ಪತ್ರಕರ್ತರಿಗೆ ವಿವಿಧ ಸೌಲಭ್ಯ ಒದಗಿಸುವಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ರಾಜ್ಯ ಸಂಘ ಅತ್ಯಂತ ಹೆಚ್ಚು ಕ್ರೀಯಾಶೀಲವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಅನಿಲ್ ಆನಂದ್ ಹೇಳಿದ್ದಾರೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆಯಿಂದ ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.ಪತ್ರಕರ್ತರಿಗೆ ಬಸ್.ಪಾಸ್, ಆರೋಗ್ಯ ಸಂಜೀವಿನಿ, ಮಾಸಾಶನ ಮತ್ತಿತರ ಸೌಲಭ್ಯ ಒದಗಿಸುವಲ್ಲಿ ಸಂಘದ ರಾಜ್ಯಾಧ್ಯಕ್ಷರು ಅವಿರತ ಶ್ರಮ ವಹಿಸುತ್ತಿದ್ದಾರೆ. ಅವರ ನಿರ್ದೇಶನದಂತೆ ಜಿಲ್ಲಾ ಸಂಘ, ತಾಲೂಕು ಸಂಘಗಳು ಅತ್ಯಂತ ಕ್ರೀಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿವೆ. ಪತ್ರಿಕಾ ದಿನಾಚರಣೆ ಅರ್ಥಪೂರ್ಣವಾಗಿ ನೆರವೇರಿದೆ ಎಂದು ಹೇಳಿದರು.ಹಿರಿಯ ಪತ್ರಕರ್ತ ಎಸ್.ಸುರೇಶ್ ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ ತಾಲೂಕು ಸಂಘದ ನೇತೃತ್ವದಲ್ಲಿ ಸರ್ವರ ಸಹಕಾರದಿಂದ ಪತ್ರಕರ್ತರ ಸಹಕಾರ ಸಂಘ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಸಹಕಾರ ಸಂಘ ನೋಂದಣಿ ಮಾಡಲಾಗಿದೆ. ಪತ್ರಕರ್ತರ ಸಮುದಾಯ ಭವನದ ಅಭಿವೃದ್ಧಿಗೆ ಸರ್ವರೂ ಕೈಜೋಡಿಸಿದ್ದಾರೆ ಎಂದ ಅವರು ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.ಹಿರಿಯ ಪತ್ರಕರ್ತ ಎ.ವಿ.ನಾಗಭೂಷಣ್ ತಾಲೂಕಿನಲ್ಲಿ ಪತ್ರಿಕೆಗಳು ನಡೆದು ಬಂದ ದಾರಿ ಕುರಿತು ವಿವರವಾಗಿ ಮಾತನಾಡಿದರು. ಪುರಸಭೆ ಅಧ್ಯಕ್ಷ ವಸಂತಕುಮಾರ್ ಅವರು ದಿ.ಡಿ.ವಿ. ಗುಂಡಪ್ಪ, ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರ ಅನಾವರಣಗೊಳಿಸಿ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಶುಭ ಕೋರಿದರು.ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸತ್ರೆ ಜಿಲ್ಲಾ ಸರ್ಜನ್ ಡಾ.ಟಿ.ಎಂ.ದೇವರಾಜ್ ಮಾತನಾಡಿ ಸರ್ವರೂ ಸಂಘಟನೆ ಬಲಪಡಿಸಬೇಕು ಎಂದು ಹೇಳಿದರು.ಸಂಘ ತಾಲೂಕು ಅಧ್ಯಕ್ಷ ಎಸ್.ಎನ್.ಸಿದ್ರಾಮಪ್ಪ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಮಾಜಿ ಅಧ್ಯಕ್ಷ ಎಚ್.ಯು.ಫಾರೂಕ್, ಎಂ.ನರೇಂದ್ರ, ಪತ್ರಕರ್ತ ಟಿ.ದಾದಾಪೀರ್, ರೋಟರಿ ಕ್ಲಬ್ ಅಧ್ಯಕ್ಷ ಕೆ.ಪಿ.ಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ ಕುಮಾರ್, ಕಜಾಪ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಎಸ್.ವಿಶಾಲಾಕ್ಷಮ್ಮ ಮಾತನಾಡಿದರು.
ಹಿರಿಯ ಪತ್ರಕರ್ತರಾದ ಎ.ವಿ.ನಾಗಭೂಷಣ್, ಎಸ್.ಸುರೇಶ್ ಚಂದ್ರ ಅವರನ್ನು ಸನ್ಮಾನಿಸಲಾಯಿತು. ಪತ್ರಕರ್ತರ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಲಾಯಿತು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಬಿ.ಎನ್.ನಾಗರಾಜ, ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಟಿ.ಎಂ.ಹರೀಶ್, ಕನ್ನಡಶ್ರೀ ಬಿ.ಎಸ್.ಭಗವಾನ್, ಯಶೋದಮ್ಮ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಾಜಿ ಅಧ್ಯಕ್ಷ ಕೆ.ನಾಗರಾಜ್, ಟಿ.ಎಸ್.ರಮೇಶ್ ಭಾಗವಹಿಸಿದ್ದರು.ಸೃಷ್ಠಿ ಪ್ರಕಾಶ್ ಅವರಿಂದ ಭರತನಾಟ್ಯ ನೃತ್ಯ ಪ್ರದರ್ಶನ, ಕಲಾವಿದರಾದ ಲೋಕೇಶ್ ತಂಡದವರು ಗೀತೆಗಳನ್ನು ಹಾಡಿದರು.3ಕೆಟಿಆರ್.ಕೆ.10.ತರೀಕೆರೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆಯಿಂದ ನಡೆದ ಪತ್ರಿಕಾ ದಿನಾಚರಣೆ ಯಲ್ಲಿ ಪುರಸಭೆ ಅಧ್ಯಕ್ಷ ವಸಂತಕುಮಾರ್, ಜಿಲ್ಲಾಧ್ಯಕ್ಷ ಅನಿಲ್ ಆನಂದ್, ತಾಲೂಕು ಅಧ್ಯಕ್ಷ ಎಸ್.ಎಸ್.ಸಿದ್ರಾಮಪ್ಪ, ಹಿರಿಯ ಪತ್ರಕರ್ತರಾದ ಎ.ವಿ.ನಾಗಭೂಷಣ್, ಎಸ್.ಸುರೇಶ್ ಚಂದ್ರ ಮತ್ತಿತರರು ಭಾಗವಹಿಸಿದ್ದರು.