ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ರಾಜ್ಯ ದಿವಾಳಿ: ರೂಪಾಲಿ ನಾಯ್ಕ

KannadaprabhaNewsNetwork |  
Published : Nov 11, 2024, 11:50 PM IST
ರೂಪಾಲಿ ಎಸ್.ನಾಯ್ಕ ಸತ್ಕರಿಸಿದರು  | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ, ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ದೇಶದ ಪ್ರತಿ ನಾಗರಿಕರ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ.

ಕಾರವಾರ: ಕಾಂಗ್ರೆಸ್ಸಿನವರು ದುರಾಡಳಿತ, ದುರಾಲೋಚನೆಯಿಂದ ರಾಜ್ಯವನ್ನು ಹಾಳುಗೆಡವುತ್ತಿದ್ದಾರೆ. ದಿವಾಳಿ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಇನ್ನಷ್ಟು ಬಲಾಢ್ಯವಾಗಬೇಕು. ಪಕ್ಷದ ಬೆಳವಣಿಗೆ ಕಾರ್ಯಕರ್ತರ ಮೇಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ತಿಳಿಸಿದರು.

ಅಂಕೋಲಾದಲ್ಲಿ ಸೋಮವಾರ ನಡೆದ ಸಂಘಟನಾ ಪರ್ವ ವಿಶೇಷ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ, ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ದೇಶದ ಪ್ರತಿ ನಾಗರಿಕರ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ. ನಿಸ್ವಾರ್ಥವಾಗಿ ಸೇವೆ ಮಾಡುತ್ತಿರುವ ಮೋದಿ ಅವರ ಕೈಯನ್ನು ಇನ್ನಷ್ಟು ಬಲಪಡಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ನಾವೂ ಸತತವಾಗಿ ದುಡಿಯೋಣ. ಬಿಜೆಪಿಯನ್ನು ಇನ್ನಷ್ಟು ಸದೃಢವಾಗಿ ಬೆಳೆಸೋಣ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಪಕ್ಷಕ್ಕೆ ಬೂತ್ ಕಮಿಟಿಯೇ ಪ್ರಮುಖ ಶಕ್ತಿ. ಸಂಘಟನೆ ಗಟ್ಟಿ ಇದ್ದಾಗ ಮಾತ್ರ ಪಕ್ಷದ ಬೆಳವಣಿಗೆ ಸಾಧ್ಯ. ಮುಂದೆ ಸಾಲು ಸಾಲಾಗಿ ಚುನಾವಣೆಗಳು ಬರಲಿವೆ. ಕಾರ್ಯಕರ್ತರು ಅವುಗಳನ್ನು ಯಶಸ್ವಿಯಾಗಿ ಎದುರಿಸಲು ಸಿದ್ಧರಾಗಬೇಕು ಎಂದು ವಿನಂತಿಸಿದರು.

ಪಕ್ಷದ ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿ, ಕಾರ್ಯಕರ್ತರು ಪಕ್ಷದ ಪ್ರಮುಖ ಶಕ್ತಿಯಾಗಿದ್ದಾರೆ. ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.

ಪಕ್ಷದ ಜಿಲ್ಲಾ ಸಹ ಚುನಾವಣಾಧಿಕಾರಿ ಆರ್.ಡಿ. ಹೆಗಡೆ ಮಾತನಾಡಿ, ಕಾರ್ಯಕರ್ತರು ನಿರಂತರವಾಗಿ ದುಡಿಯುತ್ತಿದ್ದಾರೆ. ಇದರಿಂದ ಪಕ್ಷದ ಸಂಘಟನೆ ಸಾಧ್ಯವಾಗಿದೆ. ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕಾಗಿದೆ ಎಂದರು.

ಅಂಕೋಲಾ ಪ್ರಬಾರಿ ಸುಬ್ರಾಯ ದೇವಡಿಗ, ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ಹಿಂದುಳಿದ ಮೋರ್ಚಾ ಅಧ್ಯಕ್ಷ ರಾಜೇಂದ್ರ ನಾಯ್ಕ, ಮಾಜಿ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ಪುರಸಭೆ ಅಧ್ಯಕ್ಷ ಸೂರಜ ನಾಯ್ಕ, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಮಾಧ್ಯಮ ಸಹ ವಕ್ತಾರ ಜಗದೀಶ ನಾಯಕ ಮೊಗಟಾ, ಆರತಿ ಗೌಡ ಇತರರು ಇದ್ದರು.

ಸಂಜಯ ನಾಯ್ಕ ಸ್ವಾಗತಿಸಿದರು. ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಶಾಂಕ ಹೆಗಡೆ ನಿರೂಪಿಸಿ, ವಂದಿಸಿದರು.ಕಾರ್ಯಕರ್ತರಿಗೆ ಸನ್ಮಾನ...

ಬಿಜೆಪಿಯ ಬೂತ್ ಅಧ್ಯಕ್ಷರು, ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಮೋರ್ಚಾದ ಪ್ರಮುಖರನ್ನು, ಪ್ರಮುಖ ಪದಾಧಿಕಾರಿಗಳು, ಕಾರ್ಯಕರ್ತರನ್ನು ರೂಪಾಲಿ ಎಸ್. ನಾಯ್ಕ ಹಾಗೂ ಗಣ್ಯರು ಸತ್ಕರಿಸಿದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌