ಕನ್ನಡಪ್ರಭ ವಾರ್ತೆ ಬೆಂಗಳೂರು:
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಹಲವು ಶಾಸಕರು, ಸಂಸದರು, ಮುಖಂಡರು ಹಾಗೂ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಇಡೀ ದಿನ ಪ್ರತಿಭಟನೆ ನಡೆಸಿದರು. ಹಾಲು, ಬಸ್ ಪ್ರಯಾಣ ದರ ಸೇರಿದಂತೆ ವಿವಿಧ ದರ ಏರಿಕೆ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಅಂತ್ಯದಲ್ಲಿ ಬಿಜೆಪಿ ನಾಯಕರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದಾಗ, ಪೊಲೀಸರು ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ಯಶಸ್ವಿಯಾಗಿ ತಡೆದರು. ಇದರಿಂದ ರೊಚ್ಚಿಗೆದ್ದ ಬಿ.ವೈ.ವಿಜಯೇಂದ್ರ, ಸಿ.ಟಿ.ರವಿ, ಸತೀಶ್ ರೆಡ್ಡಿ ಸೇರಿದಂತೆ ಹಲವು ನಾಯಕರು ಪೊಲೀಸ್ ಬ್ಯಾರಿಕೇಡ್ ಹತ್ತಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ತಕ್ಷಣ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ನಾಯಕರ ನಡುವೆ ಕೆಲ ಕಾಲ ಹೈಡ್ರಾಮಾ ಕೂಡ ನಡೆಯಿತು.ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ನಿಶ್ಚಿತ: ಬಿಎಸ್‌ವೈ
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಕ್ಕೆ ಬಂದ ನಂತರ ಏನಾದರೂ ಉತ್ತಮ ಕೆಲಸ ಮಾಡಿದ್ದಾರಾ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇತ್ತೀಚೆಗೆ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಮುಖ್ಯಮಂತ್ರಿ ಹೋದಾಗ, ಜನರು ಬೆಲೆ ಏರಿಕೆ ಬಗ್ಗೆ ಪ್ರಶ್ನೆ ಮಾಡಿ ಮಂಗಳಾರತಿ ಮಾಡಿ ಕಳುಹಿಸಿದ್ದಾರೆ. ಈಗ ದೇವರು ಕೂಡ ಡಿ.ಕೆ.ಶಿವಕುಮಾರ್‌ಗೆ ಆಶೀರ್ವಾದ ಮಾಡುತ್ತಿಲ್ಲ. ತಮಿಳುನಾಡು ಸರ್ಕಾರ ಕೇಳದಿದ್ದರೂ ಕಾಂಗ್ರೆಸ್ ಸರ್ಕಾರ ನೀರು ಬಿಡುತ್ತಿದೆ. ಈಗ ಡೀಸೆಲ್ ಹಾಕಲೂ ಹಣವಿಲ್ಲ ಎಂದಿದ್ದಾರೆ. ಮುಂದೆ ನೀರು ಕೂಡ ಇರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.ಬೆಲೆ ಏರಿಕೆ 6ನೇ ಗ್ಯಾರಂಟಿ- ಬಿ.ವೈ.ವಿಜಯೇಂದ್ರ
ಮೊನ್ನೆ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಹೋಗಿದ್ದರು. ನೀನು ಮುಖ್ಯಮಂತ್ರಿ ಆಗಿ ಮುಂದುವರೆಯಬೇಕಾದರೆ, ಸಿದ್ದರಾಮಯ್ಯ ಅವರ ಕೈಕಾಲು ಹಿಡಿ. ಇಲ್ಲವಾದರೆ, ಮೂರನೇ ಮುಖ್ಯಮಂತ್ರಿ ಬರುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ ಬಳಿಕ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಮನೆಗೆ ಹೋಗಿ ಮಾತನಾಡಿದ್ದಾರೆ. ಇವರಿಬ್ಬರ ಸಂಬಂಧ ಹೇಗಿದೆ ಎಂದು ಸ್ವಲ್ಪ ದಿನಗಳಲ್ಲಿ ಸಿದ್ದರಾಮಯ್ಯ ಅವರೇ ತೋರಿಸುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.ಚಾಕು-ಚೂರಿ ಸಂಸ್ಕೃತಿಯ ಕಾಂಗ್ರೆಸ್- ಛಲವಾದಿ: