ರಾಜ್ಯ ಬಜೆಟ್ : ಮಡಿಕೇರಿ ಅಭಿವೃದ್ಧಿ, ಮತ್ತು ಏಕಗವಾಕ್ಷಿ ಪ್ರವಾಸಿ ಸೇವಾ ಕೇಂದ್ರ ಸ್ಥಾಪನೆಗೆ ನಗರ ಛೇಂಬರ್ ಆಫ್ ಕಾಮರ್ಸ್ ಮನವಿ

KannadaprabhaNewsNetwork |  
Published : Feb 22, 2026, 03:00 AM IST
ಚಿತ್ರ : ಅನ್ವೇಕರ್ | Kannada Prabha

ಸಾರಾಂಶ

ಮಡಿಕೇರಿ ನಗರದ ಸಮಗ್ರ ಅಭಿವೃದ್ಧಿಗೆ ಹಾಗೂ ಏಕ ಗವಾಕ್ಷಿ ಪ್ರವಾಸಿ ಸೇವಾ ಕೇಂದ್ರ ಸ್ಥಾಪನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಮಡಿಕೇರಿ ನಗರ ಛೇಂಬರ್ ಆಫ್ ಕಾಮರ್ಸ್ ಶಾಸಕ ಡಾ. ಮಂತರ್ ಗೌಡ ಅವರಲ್ಲಿ ಮನವಿ ಮಾಡಿಕೊಂಡಿದೆ.

ಮಡಿಕೇರಿ: ಮಡಿಕೇರಿ ನಗರದ ಸಮಗ್ರ ಅಭಿವೃದ್ಧಿಗೆ ಹಾಗೂ ಏಕ ಗವಾಕ್ಷಿ ಪ್ರವಾಸಿ ಸೇವಾ ಕೇಂದ್ರ ಸ್ಥಾಪನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಮಡಿಕೇರಿ ನಗರ ಛೇಂಬರ್ ಆಫ್ ಕಾಮರ್ಸ್ ಶಾಸಕ ಡಾ. ಮಂತರ್ ಗೌಡ ಅವರಲ್ಲಿ ಮನವಿ ಮಾಡಿಕೊಂಡಿದೆ.ಈ ಕುರಿತು ಶಾಸಕರಿಗೆ ಪತ್ರ ಬರೆದಿರುವ ಛೇಂಬರ್ ಆಫ್ ಕಾಮರ್ಸ್ ನಗರಾಧ್ಯಕ್ಷ ಸಂತೋಷ್ ಅಣ್ವೇಕರ್ ಮಡಿಕೇರಿ ನಗರಕ್ಕೆ ಭೇಟಿ ನೀಡುವ ಪ್ರವಾಸಿಗರ ಹಿತದೃಷ್ಟಿಯಿಂದ ಏಕ ಗವಾಕ್ಷಿ ಪ್ರವಾಸಿ ಸೇವಾ ಕೇಂದ್ರ ಸ್ಥಾಪನೆಗೆ ಮತ್ತು ನಗರದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯ ಯೋಜನೆಗಳಿಗೆ ಮುಂಬರುವ ರಾಜ್ಯ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕೆಂದು ಕೋರಿದ್ದಾರೆ.

ಪ್ರವಾಸಿಗರಿಗೆ ಒಂದೇ ಸೂರಿನಡಿ ಮಾಹಿತಿ ಕೇಂದ್ರ, ಪ್ರವಾಸಿ ತಾಣಗಳ ಟಿಕೆಟ್ ಬುಕ್ಕಿಂಗ್ ಮತ್ತು ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಒದಗಿಸುವ ಸುಸಜ್ಜಿತವಾದ ಏಕಗವಾಕ್ಷಿ ಪ್ರವಾಸಿ ಸೇವಾ ಕೇಂದ್ರದ ಕಚೇರಿಯನ್ನು ಸ್ಥಾಪಿಸಬೇಕು.ನಗರದ ಭದ್ರತೆ ಮತ್ತು ಸುಗಮ ಸಂಚಾರಕ್ಕಾಗಿ ಪ್ರಮುಖ ಜಂಕ್ಷನ್‌ಗಳಲ್ಲಿ ಎಐ (ಕೃತಕ ಬುದ್ಧಿಮತ್ತೆ) ಚಾಲಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.ನಗರದ ಮುಖ್ಯ ರಸ್ತೆಗಳಲ್ಲಿ ಹಳೆಯ ಬೀದಿ ದೀಪಗಳನ್ನು ಬದಲಿಸಿ, ಪರಿಸರ ಸ್ನೇಹಿ ಮತ್ತು ಹೆಚ್ಚು ಬೆಳಕು ನೀಡುವ ಎಲ್‌ಇಡಿ ದೀಪಗಳನ್ನು ಅಳವಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂಪಿಗಳ ಜತೆ ಸಿಎಂ ಸರ್ವಪಕ್ಷ ಸಭೆಗೆ ವಿಪಕ್ಷಗಳಿಂದ ಮೆಚ್ಚುಗೆ
ಕಾವೇರಿ ವಿವಾದ : ತ.ನಾಡು ಸಿಎಂ ಸಭೆ ಬಗ್ಗೆ ಕುತೂಹಲ