ಸೆ.29,30 ರಂದು ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ: ಭರತ್ ರಾಜ್

KannadaprabhaNewsNetwork |  
Published : Sep 20, 2024, 01:39 AM IST
ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ | Kannada Prabha

ಸಾರಾಂಶ

ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ್, ಮಹಾರಾಷ್ಟ್ರ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಮಟ್ಟದ ಮುಖಂಡರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕಬ್ಬು ಬೆಳೆಗಾರರ ಸ್ಥಿತಿಗತಿ, ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಮತ್ತು ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ ಸೆ. 29, 30ರಂದು ಕಲಬುರಗಿಯಲ್ಲಿ ನಡೆಯಲಿದೆ ಎಂದು ರಾಜ್ಯ ಸಂಚಾಲಕ ಎನ್.ಎಲ್. ಭರತ್‌ರಾಜ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ್, ಮಹಾರಾಷ್ಟ್ರ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಮಟ್ಟದ ಮುಖಂಡರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕಬ್ಬು ಬೆಳೆಗಾರರ ಸ್ಥಿತಿಗತಿ, ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದರು.

ಕೇಂದ್ರ ಸರ್ಕಾರ ಟನ್ ಕಬ್ಬಿಗೆ 5 ಸಾವಿರ ಬೆಲೆ ನಿಗದಿ ಮಾಡದೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಶಾಮೀಲಾಗಿದೆ. ಅದೇ ರೀತಿ ರಾಜ್ಯ ಸರ್ಕಾರ ಸಕ್ಕರೆ ಕಂಪನಿ ಮಾಲೀಕರ ಮುಲಾಜಿನಲ್ಲಿ ನಡೆಯುತ್ತಿದೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲವಾಗಿದೆ. 5 ಸಾವಿರ ಎಫ್‌ಆರ್‌ಪಿ ನಿಗದಿ ಮಾಡಬೇಕು. ರಾಜ್ಯ ಸರ್ಕಾರ 500 ರು. ಎಸ್‌ಎಪಿ ನಿಗದಿಪಡಿಸದೆ ರೈತ ವಿರೋಗಳಾಗಿವೆ ಎಂದು ದೂರಿದರು.

ಉಪ ಉತ್ಪನ್ನಗಳ ಆಧಾರದ ಮೇಲೆ ಟನ್ ಕಬ್ಬಿಗೆ 13 ಸಾವಿರ ನೀಡಬಹುದು. ಆದರೆ, ಕಾರ್ಖಾನೆಗಳವರು ಉಪ ಉತ್ಪನ್ನಗಳನ್ನು ಮಾಡದೆ ರೈತರಿಗೆ ಕಡಿಮೆ ಹಣ ನೀಡಿ ವಂಚಿಸುತ್ತಿವೆ. ರೈತರಿಗಾಗಿ ಕೇಂದ್ರ ಸರ್ಕಾರ ನೀಡುವ ಸಹಾಯ ಧನವನ್ನೂ ಸಕ್ಕರೆ ಕಾರ್ಖಾನೆಗಳವರು ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಹರಿಯಾಣದಲ್ಲಿ ಎಫ್‌ಆರ್‌ಪಿ ಜೊತೆಗೆ ಎಸ್‌ಎಪಿಯನ್ನು ಟನ್ ಕಬ್ಬಿಗೆ 900 ಸೇರಿಸಿ 3.874 ರು. ನೀಡುತ್ತಿವೆ. ತಮಿಳುನಾಡಿನಲ್ಲಿ ಹೆಚ್ಚಿನ ಹಣ ನೀಡಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಕಡಿಮೆ ಹಣ ನೀಡುತ್ತಿವೆ ಎಂದು ದೂರಿದರು.

ಕಬ್ಬು ಕಟಾವು ಮಾಡುವುದನ್ನು ಸಹ ಉದ್ಯೋಗ ಖಾತ್ರಿ ಯೋಜನೆಗೆ ಸೇರಿಸಬೇಕು. ಇದರಿಂದ ಕಬ್ಬು ಕಟಾವು ಮಾಡಲು ಕೂಲಿ ಆಳುಗಳು ಸಹ ಸಿಕ್ಕಂತಾಗುತ್ತದೆ. ಕಬ್ಬು ತುಂಬಿದ ವಾಹನ ಇತರೆ ಗಾಡಿಗಳು ಕಬ್ಬು ತುಂಬಿಕೊಂಡು ಬಂದ ತಕ್ಷಣ ಅನ್‌ಲೋಡ್ ಮಾಡಬೇಕು. ವಿನಾಕಾರಣ ಕಬ್ಬನ್ನು ಒಣಗಿಸಬಾರದು. ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಕಡಿತ ಮಾಡಿಕೊಳ್ಳುವಾಗ ಕಿ.ಮೀ. ಆಧಾರದ ಮೇಲೆ ಹಣ ಕಡಿತ ಮಾಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕುಳ್ಳೇಗೌಡ, ಮರಿಲಿಂಗೇಗೌಡ, ಕೆಂಪರಾಜು, ಶುಕುಮಾರ್, ರಾಮಕೃಷ್ಣ, ಜಯಸ್ವಾಮಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!