ಐಸಿಯುನಲ್ಲಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ

KannadaprabhaNewsNetwork |  
Published : Aug 03, 2025, 01:30 AM IST
ಹೊನ್ನಾಳಿ ಫೋಟೋ 2ಎಚ್.ಎಲ್.ಐ1ಎ. ರಾಜ್ಯ ಹೆದ್ದಾರಿ ಚೀಲೂರು ಬಳಿ ಹಮ್ಮಿಕೊಂಡಿದ್ದ ರಸ್ತೆತಡೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹಾಗೂಪ್ರತಿಭಟನಾ ನಿರತ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.  | Kannada Prabha

ಸಾರಾಂಶ

ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಶೂನ್ಯವಾಗಿದ್ದು ಪ್ರಸ್ತುತ ಸರ್ಕಾರ ಐಸಿಯುನಲ್ಲಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ: ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಶೂನ್ಯವಾಗಿದ್ದು ಪ್ರಸ್ತುತ ಸರ್ಕಾರ ಐಸಿಯುನಲ್ಲಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ, ಶಿವಮೊಗ್ಗ ರಾಜ್ಯ ಹೆದ್ದಾರಿ ರಸ್ತೆಯ ಚೀಲೂರು ಗ್ರಾಮದ ಬಳಿ ಶನಿವಾರ ಹಮ್ಮಿಕೊಂಡ ಬೃಹತ್ ಪ್ರತಿಭಟನೆ, ರಸ್ತೆತಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾಗಿದ್ದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಅಭಿವೃದ್ಧಿ ಶೂನ್ಯವಾಗಿದೆ ಎಂದು ಸರ್ಕಾರವನ್ನು ಟೀಕಿಸಿದರು.

ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ, ಡಿಸಿಎಂ ಹಾಗೂ ಇತರ ಕಾಂಗ್ರೆಸ್ ನಾಯಕರು ಸಾಮಾಜಿಕ ನ್ಯಾಯ ಎಂದು ಹೇಳಿಕೊಂಡು ಸಂವಿಧಾನದ ಬಗ್ಗೆ ಮಾತನಾಡುತ್ತಿದ್ದಾರೆ, ಅಂಬೇಡ್ಕರ್ ಅವರನ್ನು ಸೋಲಿಸಿದ ಕಾಂಗ್ರೆಸ್‌ಗೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

ಸರ್ಕಾರದಿಂದ ಇದುವರೆಗೆ ಒಬ್ಬೊಬ್ಬ ಕಾಂಗ್ರೆಸ್ ಶಾಸಕರಿಗೆ ಕೇವಲ 11.5 ಕೋಟಿ ರು. ಮಾತ್ರ ಬಿಡುಗಡೆಯಾಗಿದೆ, 50 ಕೋಟಿ ರು. ಎಂದು ಸುಳ್ಳು ಹೇಳಲಾಗುತ್ತಿದೆ ಎಂದು ಆರೋಪಿಸಿದದರು.

ನಮ್ಮ ಅಧಿಕಾರದಲ್ಲಿ ಮಂಜೂರಾಗಿದ್ದ ಏತ ನೀರಾವರಿ ಯೋಜನೆ ಸೇರಿದಂತೆ ಇತರ ಕಾಮಗಾರಿಗಳೇ ಇಂದು ನಡೆಯುತ್ತಿವೆ, ಹೊಸದಾಗಿ ಯಾವುದೇ ಯೋಜನೆಯ ಕಾಮಗಾರಿಯನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿಲ್ಲ ಇದಕ್ಕೆ ಕಾರಣ ಸರ್ಕಾರದಲ್ಲಿ ಹಣದ ಕೊರತೆ ಎದ್ದು ಕಾಣುತ್ತಿದೆ. ತಕ್ಷಣ ಇದರ ಬಗ್ಗೆ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಎಸ್ಸಿ,ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಬಿಟ್ಟಿ ಭಾಗ್ಯಗಳಿಗೆ ಉಪಯೋಗಿಸಿ ಎಸ್ಸಿ,ಎಸ್ಟಿ ಜನಾಂಗಕ್ಕೆ ಅನ್ಯಾಯ ಮಾಡುತ್ತಿದೆ, ಎಸ್‌ಸಿಪಿಟಿಎಸ್‌ಪಿಗೆ ಮೀಸಲಿರಿಸಿದ್ದ ಈ ವರ್ಷದ 14 ಸಾವಿರ ಕೋಟಿ ರು. ಸೇರಿ ಒಟ್ಟು 30 ಸಾವಿರ ಕೋಟಿ ರು.. ಅನುದಾನವನ್ನು 5 ಗ್ಯಾರಂಟಿಗಳಿಗೆ ಬಳಿಸಿಕೊಂಡು ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ದೂರಿದರು.

ರಾಜ್ಯ ಸರ್ಕಾರ 6.3 ಲಕ್ಷ ಮೆಟ್ರಿಕ್ ಟನ್ ಗೊಬ್ಬರದ ಬೇಡಿಕೆಯನ್ನು ಕೇಂದ್ರಕ್ಕೆ ಸಲ್ಲಿಸಿತ್ತು, ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್ ಟನ್ ಗೊಬ್ಬರವನ್ನು ಸರಬರಾಜು ಮಾಡಿದೆ. ರಾಜ್ಯ ಸರ್ಕಾರ 7.8 ಲಕ್ಷ ಮೆಟ್ರಿಕ್ ಟನ್ ಖರ್ಚು ತೋರಿಸಿದೆ ಎಂದರು.

ಮೂರು ತಾಸು ರಸ್ತೆ ತಡೆ:

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಚೀಲೂರಿನಲ್ಲಿ ಸುಮಾರು ಮೂರು ತಾಸು ರಸ್ತೆ ತಡೆ ನಡೆಸಿದ್ದರಿಂದ ಸಂಚಾರ ವ್ಯವಸ್ಥೆ ಅಸ್ತವ್ಯಸ್ತೆಯಾಗಿತ್ತು. ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು,

ಬಿಗಿ ಪೊಲೀಸ್ ಬಂದೋಬಸ್ತ್‌:

ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದ್ದರಿಂದ ಎಎಸ್‌ಪಿ ಸ್ಯಾಂ ವರ್ಗಿಸ್ ನೇತೃತ್ವದಲ್ಲಿ ನ್ಯಾಮತಿ ಪಿಐ ರವಿಕುಮಾರ್, ಹೊನ್ನಾಳಿ ಪಿಐ ಸುನಿಲ್‌ಕುಮಾರ್ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ಬಂಧನ ಬಿಡುಗಡೆ:

ಚೀಲೂರಿನಲ್ಲಿ ರಸ್ತೆ ತಡೆ ತೀವ್ರಗೊಂಡಾಗ ಪೊಲೀಸರು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ಬಿಜೆಪಿ ಮಂಡಲದ ತಾಲೂಕು ಅಧ್ಯಕ್ಷ ಅರಕೆರೆ ನಾಗರಾಜ್, ಬಿಜೆಪಿ ಮಂಡಲದ ನಿಕಟಪೂರ್ವ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ಹಿಂದುಳಿದ ವರ್ಗಗಳ ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೆ.ಪಿ.ಕಬೇಂದ್ರಪ್ಪ, ಗಿರೀಶ್, ಮುಖಂಡರಾದ ಶಿವುಹುಡೇದ್, ಅಜೇಯ್, ಗಿರೀಶ್ ಚನ್ನಯ್ಯ, ಎಸ್.ಎಸ್.ಬೀರಪ್ಪ ಮಾತನಾಡಿದರು.

ಬಿಜೆಪಿ ಮುಖಂಡರಾದ ದೊಡ್ಡೇರಿ ರಾಜಣ್ಣ,ಮಾರುತಿನಾಯ್ಕ್, ,ಅನಿಲ್‌ಕುಮಾರ್ ಹಾಗೂ ಸಹಸ್ರಾರು ಬಿಜೆಪಿ ಕಾರ್ಯಕರ್ತರು ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ