ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1000 ದಿನಗಳನ್ನು ಪೂರೈಸಿದ್ದು, ಸಾವಿರಾರು ದಿನಗಳ ಆಡಳಿತದಲ್ಲಿ ಸಾವಿರಾರು ಸಮಸ್ಯೆಗಳನ್ನು ಸರ್ಕಾರ ಮಹಾ ಜನತೆಯ ತಲೆಯ ಮೇಲೆ ಹಾಕಿದೆ. ಅದರೆ ಮುಖ್ಯಮಂತ್ರಿಗಳು ತಮ್ಮ ಫೇಸ್‌ಬುಕ್‌ನಲ್ಲಿ ಸಾವಿರ ದಿನಗಳಲ್ಲಿ 1.37 ಸಾವಿರ ಕುಟುಂಬಗಳಿಗೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ 1.13 ಲಕ್ಷ ಕೋಟಿ ಹಣವನ್ನು ಜನರಿಗೆ ತಲುಪಿದ್ದೇವೆ. ಅದರ ಪರಿಣಾಮದಿಂದ ತಲಾದಾಯ ಜಾಸ್ತಿಯಾಗಿದ್ದು, ನಮ್ಮ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದೆ. ಅಲ್ಲದೆ 1 ಲಕ್ಷ ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಬಳಸಲಾಗಿದೆ ಎಂದು ಹೇಳಿದ್ದಾರೆ. ಆದರೆ ಸರ್ಕಾರ ಪತ್ನಿಗೆ 2,000 ಕೊಟ್ಟು ಪತಿ ಜೇಬಿನಿಂದ, ಕುಟುಂಬದ ಕಡೆಯಿಂದ 10 ಸಾವಿರ ರು. ಸಂಗ್ರಹಿಸುವ ಮೂಲಕ ಕೆಟ್ಟ ಆರ್ಥಿಕ ವ್ಯವಸ್ಥೆಯನ್ನು ರಾಜ್ಯದ ಜನರ ಮೇಲೆ ಹೇರಿದ್ದಾರೆ’ ಎಂದು ಕಿಡಿಕಾರಿದರು.
ಆಸ್ಪತ್ರೆಯಲ್ಲಿ ಚೀಟಿ ಪಡೆಯುವ ಶುಲ್ಕದಿಂದ ಹಿಡಿದು ಆರ್‌ಟಿಸಿವರೆಗೆ ದರ ದುಪ್ಪಟ್ಟು ಮಾಡಿದ್ದಾರೆ. ಬಡವರು ಕುಡಿಯುವ ಮದ್ಯದ ದರವನ್ನು ಶೇ.20ರಷ್ಟು ಹೆಚ್ಚು ಮಾಡಿ ಹಣ ವಸೂಲಿ ಮಾಡುವ ಮೂಲಕ ಗ್ಯಾರಂಟಿ ಯೋಜನೆಗಳ ವೆಚ್ಚವನ್ನು ಸರಿದೂಗಿಸುವ ಕೆಲಸವನ್ನು ಮಾಡಿದ್ದಾರೆ. ಇದು ರಾಜ್ಯಸರ್ಕಾರದ ಸಾವಿರ ದಿನಗಳ ಆಡಳಿತದ ಅಭಿವೃದ್ಧಿಯೇ ಎಂದು ಮಹೇಶ್ ಖಾರವಾಗಿ ಪ್ರಶ್ನಿಸಿದರು.ಕಾನೂನು ಸುವ್ಯವಸ್ಥೆ ಹಳ್ಳಹಿಡಿದಿದೆ:
ಹಗರಣ ಸರಮಾಲೆ ಇದ್ದು, ಮೈಸೂರು, ಬೆಂಗಳೂರಿನಲ್ಲಿ ಡ್ರಗ್ಸ್ ಮಾಫೀಯಾವನ್ನು ಮಹಾರಾಷ್ಟ್ರ ಪೊಲೀಸರು ಪತ್ತೆಹಚ್ಚಿದ್ದಾರೆ. ಕರ್ನಾಟಕ ಗೃಹ ಇಲಾಖೆ ಶಕ್ತಿಹೀನವಾಗಿದ್ದು, ಹಳ್ಳ ಹಿಡಿದಿದೆ. ಹಾಗಾಗಿ ಕೇಂದ್ರ ತನಿಖಾ ದಳ, ಪಕ್ಕದ ರಾಜ್ಯದ ಪೊಲೀಸರು ಕರ್ನಾಟಕದ ಅವ್ಯವಹಾರಗಳನ್ನು ಪತ್ತೆಹಚ್ಚಿದ್ದಾರೆ ಎಂದರು.
ಮಾಜಿ ಶಾಸಕ ಎಸ್.ಬಾಲರಾಜು ಮಾತನಾಡಿ, ‘ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಓಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಜಿ.ಪಂ.ಮಾಜಿ ಸದಸ್ಯ ಸಿ.ಎನ್. ಬಾಲರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ. ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹಾದೇವಸ್ವಾಮಿ ಹಾಜರಿದ್ದರು.