ರಾಜ್ಯ ಕಿವುಡರ ಚೆಸ್ ಚಾಂಪಿಯನ್‌ಶಿಪ್ : ಜಿಲ್ಲಾ ಕಿವುಡರ ಸಂಘದ ಪದಾಧಿಕಾರಿಗಳು ಭಾಗಿ

KannadaprabhaNewsNetwork |  
Published : Jul 11, 2025, 11:48 PM IST
ಚಿತ್ರ : 9ಎಂಡಿಕೆ2 : ಕೊಡಗು ಜಿಲ್ಲಾ ಕಿವುಡರ ಸಂಘದ ಪದಾಧಿಕಾರಿಗಳು ಭಾಗಿಯಾಗಿರುವುದು.  | Kannada Prabha

ಸಾರಾಂಶ

20ನೇ ಕರ್ನಾಟಕ ರಾಜ್ಯ ಕಿವುಡರ ಚೆಸ್‌ ಚಾಂಪಿಯನ್‌ಶಿಪ್‌ನಲ್ಲಿ ಕೊಡಗಿನ ಪದಾಧಿಕಾರಿಗಳು ಭಾಗವಹಿಸಿದ್ದರು.

ಮಡಿಕೇರಿ : ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟ ಹಾಗೂ ಧಾರವಾಡ ಜಿಲ್ಲಾ ಕಿವುಡರ ಸಂಘದ ಸಹಯೋಗದಲ್ಲಿ ನಡೆದ 20ನೇ ಕರ್ನಾಟಕ ರಾಜ್ಯ ಕಿವುಡರ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೊಡಗಿನ ಪದಾಧಿಕಾರಿಗಳು ಭಾಗವಹಿಸಿದ್ದರು.ಹುಬ್ಬಳ್ಳಿಯ ಶಾಂತಿನಾಥ ಸಾಂಸ್ಕೃತಿಕ ಭವನದಲ್ಲಿ ಜು.3 ರಿಂದ 5ರ ವರೆಗೆ ನಡೆದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘದ ಉಪಾಧ್ಯಕ್ಷ ಶಂಕರನಾರಾಯಣ ಹೆಬ್ಬಾರ್ ಹಾಗೂ ಕಾರ್ಯದರ್ಶಿ ರಂಜಿತ್ ಪಾಲ್ಗೊಂಡಿದ್ದರು.

------------------------------------------

ಭೂಕುಸಿತ ಪ್ರದೇಶಗಳಲ್ಲಿ ತಲೆ ಎತ್ತಿರುವ ಅಕ್ರಮ ರೆಸಾರ್ಟ್‌ಗಳ ತೆರವಿಗೆ ಆಗ್ರಹ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿನ ಭೂ ಕುಸಿತ ಪೀಡಿತ ಪ್ರದೇಶಗಳಲ್ಲಿ ಕರ್ನಾಟಕ ರಾಜ್ಯ ಭೂ ಕಂದಾಯ ಕಾಯ್ದೆಯನ್ನು ಉಲ್ಲಂಘಿಸಿ ಅಕ್ರಮವಾಗಿ ರೆಸಾರ್ಟ್ ಗಳನ್ನು ನಿರ್ಮಾಣ ಮಾಡಲಾಗಿದ್ದು, ಜಿಲ್ಲಾಡಳಿತ ಇವುಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ನೆಲಸಮಗೊಳಿಸಬೇಕು ಎಂದು ಎನ್ವಿರಾನ್ಮೆಂಟ್ ಐಂಡ್ ಹೆಲ್ತ್ ಫೌಂಡೇಷನ್ ಸಂಸ್ಥೆ ಮುಖ್ಯಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಹಾಗೂ ಪರಿಸರವಾದಿ ಕರ್ನಲ್ ಸಿ.ಪಿ.ಮುತ್ತಣ್ಣ, 2018-19ರಲ್ಲಿ ಮಡಿಕೇರಿ ಸೇರಿದಂತೆ ಮಕ್ಕಂದೂರು, ಗಾಳಿಬೀಡು ವ್ಯಾಪ್ತಿಯಲ್ಲಿ ಭೂ ಕುಸಿತ ಉಂಟಾಗಿತ್ತು. ಸಾಕಷ್ಟು ನಷ್ಟವನ್ನು ಅನುಭವಿಸುವಂತಾಗಿತ್ತು. ಅದೇ ಸ್ಥಳದಲ್ಲಿ ಇಂದು ರೆಸಾರ್ಟ್ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ. ಈಗಾಗಲೇ ದೊಡ್ಡ ದೊಡ್ಡ ರೆಸಾರ್ಟ್‌ಗಳು ತಲೆ ಎತ್ತಿದೆ. ಇಷ್ಟೆಲ್ಲಾ ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಇಂತಹ ರೆಸಾರ್ಟ್ ನಿರ್ಮಾಣಕ್ಕೆ ಅನುಮತಿ ನೀಡಿದವರ ವಿರುದ್ಧ ಸೂಕ್ತ ತನಿಖೆ ನಡೆಸಿ ಜಿಲ್ಲಾಡಳಿತ ನೆಲಸಮ ಮಾಡಬೇಕು ಎಂದು ಒತ್ತಾಯಿಸಿದರು.ಕೊಡಗಿನ ಹಿತದೃಷ್ಟಿಯಿಂದ ಇಂತಹ ರೆಸಾರ್ಟ್ ವಿರುದ್ಧ ಜಿಲ್ಲೆಯಲ್ಲಿ ಹೋರಾಟ ರೂಪಿಸಲಾಗುವುದು. ಜಿಲ್ಲೆಯ ಜನತೆ, ವಿವಿಧ ಸಂಘಸಂಸ್ಥೆಗಳು ಕೊಡಗಿನ ಉಳಿವಿಗಾಗಿ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸಮಾಜಸೇವಕರಾದ ಗೋಪಿನಾಥ್ ಮಾತನಾಡಿ, ಸೋಮವಾರಪೇಟೆ ತಾಲೂಕು ಕಿರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರವಾಸಿ ತಾಣ ಮಕ್ಕಳ ಗುಡಿ ಬೆಟ್ಟದ ಸಮೀಪ 2018ರಲ್ಲಿ ಭಾರೀ ಭೂ ಕುಸಿತ ಸಂಭವಿಸಿತ್ತು. ಈ ಪ್ರದೇಶವನ್ನು ಅತೀ ಸೂಕ್ಷ್ಮ ಪ್ರದೇಶವೆಂದು ರಾಜ್ಯ ಸರ್ಕಾರ ಗುರುತಿಸಿದೆ. 2019ರಿಂದ ಈಚೆಗೆ ಇಲ್ಲಿನ ಅಕ್ಕಪಕ್ಕದ ನಿವಾಸಿಗಳಿಗೆ ಮಳೆಗಾಲದಲ್ಲಿ ಮನೆಗಳನ್ನು ಬಿಡುವಂತೆ ಜಿಲ್ಲಾಡಳಿತ ಎಚ್ಚರಿಕೆ ಕೊಡುತ್ತಾ ಬಂದಿದೆ. ಆದರೆ 2018ರಲ್ಲಿ ಭೂ ಕುಸಿತವಾದ ಸ್ಥಳದಿಂದ 100 ಮೀಟರ್ ದೂರದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲು ಸುಮಾರು 32 ಎಕರೆ ಜಾಗವನ್ನು ಜಿಲ್ಲಾಡಳಿತ ಭೂ ಪರಿವರ್ತನೆ ಮಾಡಿಕೊಟ್ಟಿದೆ. ಇದರ ವಿರುದ್ಧ ಕ್ರಮಕೈಗೊಳ್ಳುವಂತಾಗಬೇಕು ಎಂದು ಆಗ್ರಹಿಸಿದರು.ಕಿರಗಂದೂರು ಗ್ರಾಮ ಆಡಳಿತದ ಅಧ್ಯಕ್ಷ ಚಿದಾನಂದ್, ಕಾರ್ಯದರ್ಶಿ ಬಿ.ಬಿ.ರಶೀನ್ ಕುಮಾರ್, ಗ್ರಾಮಸ್ಥರಾದ ಎಸ್.ಸಿ.ಗಿರೀಶ್, ಕೆ.ಜಿ.ನಿತೀಶ್ ಸುದ್ದಿಗೋಷ್ಠಿಯಲ್ಲಿದ್ದರು.

PREV