ರಾಜ್ಯ ರೈತ ಸಮಾವೇಶದಲ್ಲಿ ರಾಜ್ಯದ 30 ರೈತ ಸಂಘಟನೆ ಸಹಯೋಗದಲ್ಲಿ ಸಮಾವೇಶ ಆಯೋಜಿಸಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಸರ್ಕಾರಗಳ ಮೇಲೆ ಒತ್ತಡ ಹಾಕಲಾಗುವುದು
ನರಗುಂದ: ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಅ.4ರಂದು ಬಂಡಾಯ ನೆಲದಲ್ಲಿ ರಾಜ್ಯ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸೇನಾ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಮಹದಾಯಿ ಹೋರಾಟ ವೇದಿಕೆಯಲ್ಲಿ ಅ. 4ರಂದು ನಡೆಯುವ ರಾಜ್ಯ ರೈತ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಈಗಾಗಲೇ ಕಳೆದ 9 ವರ್ಷಗಳಿಂದ ಉತ್ತರ ಕರ್ನಾಟಕ ಭಾಗದ ಬಂಡಾಯ ನೆಲದಲ್ಲಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರು ನಿರಂತರ ಧರಣಿ ಮಾಡಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಸರ್ಕಾರಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಅ.4ರಂದು ನರಗುಂದದಲ್ಲಿ ರೈತ ಸೇನಾ ಸಂಘಟನೆ ನೇತೃತ್ವದಲ್ಲಿ ನಡೆಯುವ ರಾಜ್ಯ ರೈತ ಸಮಾವೇಶದಲ್ಲಿ ರಾಜ್ಯದ 30 ರೈತ ಸಂಘಟನೆ ಸಹಯೋಗದಲ್ಲಿ ಸಮಾವೇಶ ಆಯೋಜಿಸಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಸರ್ಕಾರಗಳ ಮೇಲೆ ಒತ್ತಡ ಹಾಕಲಾಗುವುದು. ರೈತ ಬೆಳೆಗೆ ಕನಿಷ್ಟ ಬೆಂಬಲ ಬೆಲೆ ನಿಗದಿ, ರಾಜ್ಯದ ಎಲ್ಲ ತಾಲೂಕುಗಳಲ್ಲಿ ಶಾಶ್ವತ ಬೆಂಬಲ ಬೆಲೆ ಕೇಂದ್ರ ತೆರೆಯುವುದು, ಜಲಾಶಯಗಳ ಹೂಳು ತೆಗೆಯುವುದು. ಜಲಾಶಯ ಮೂಲಕ ನೀರಾವರಿ ಕಾಲುವೆ ಕೆಳ ಭಾಗದ ರೈತರಿಗೆ ನೀರು ಒದಗಿಸಲು ಸಮಾವೇಶದಲ್ಲಿ ಒತ್ತಾಯಿಸಲಾಗುವುದು ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.