ಕರಾವಳಿಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ರಿಜ್ವಾನ್ ಅರ್ಷದ್

KannadaprabhaNewsNetwork |  
Published : Sep 22, 2026, 03:00 AM IST
ಸಚಿವ ರಿಜ್ವಾನ್ ಅರ್ಷದ್ ಕಾಪುನಲ್ಲಿ ಜನರ ಅಹವಾಲು ಸ್ವೀಕರಿಸಿದರು | Kannada Prabha

ಸಾರಾಂಶ

ಕರಾವಳಿ ಭಾಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎನ್ನುವುದಕ್ಕೆ ಶುಕ್ರವಾರ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಒಂದು ಉತ್ತಮ ನಿದರ್ಶನವಾಗಿದೆ. 80 ವರ್ಷದಲ್ಲಿಯೇ ಮೊದಲ ಬಾರಿಗೆ ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಈ ಭಾಗದ ಸಮಸ್ಯೆ ಮತ್ತು ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಸವಿಸ್ತಾರವಾಗಿದೆ ಚರ್ಚಿಸಲಾಗಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

ಉಡುಪಿ : ಕರಾವಳಿ ಭಾಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎನ್ನುವುದಕ್ಕೆ ಶುಕ್ರವಾರ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಒಂದು ಉತ್ತಮ ನಿದರ್ಶನವಾಗಿದೆ. 80 ವರ್ಷದಲ್ಲಿಯೇ ಮೊದಲ ಬಾರಿಗೆ ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಈ ಭಾಗದ ಸಮಸ್ಯೆ ಮತ್ತು ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಸವಿಸ್ತಾರವಾಗಿದೆ ಚರ್ಚಿಸಲಾಗಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.ಅವರು ಶನಿವಾರ ಪ್ರಜಾಸೇವೆ ಇಲಾಖೆ ವತಿಯಿಂದ ಕಾಪು ತಾಲೂಕು ಕಚೇರಿ ಸಭಾಂಗಣದಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಭಾಗಕ್ಕೆ ಪ್ರವಾಸೋದ್ಯಮವೇ ದೊಡ್ಡ ಶಕ್ತಿ. ಪ್ರವಾಸೋದ್ಯಮ ಅಭಿವೃದ್ಧಿಯಿಂದ ಸ್ಥಳೀಯ ಯುವಕರು ದೇಶ-ವಿದೇಶಗಳಿಗೆ ಉದ್ಯೋಗಕ್ಕೆ ತೆರಳುವುದು ತಪ್ಪಲಿದೆ. ಸಮಾಜದಲ್ಲಿ ಶಾಂತಿ ಸೌಹಾರ್ದತೆಯನ್ನು ಬೆಳೆಸಿ, ಎಲ್ಲ ಜಾತಿ-ಧರ್ಮದವರು ಸಾಮರಸ್ಯದಿಂದ ಬಾಳುವ ವಾತಾವರಣ ಸೃಷ್ಟಿ ಮಾಡುವ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಾಗ ಪ್ರಪಂಚಕ್ಕೆ ಕರಾವಳಿ ಪ್ರದೇಶವನ್ನು ಸ್ವರ್ಗದ ಮಾದರಿಯಲ್ಲಿ ಸೃಷ್ಟಿ ಮಾಡಬಹುದಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಕೃಷಿ ಮೇಳ -2026 ರ ಕುರಿತ ಪೋಸ್ಟರನ್ನು ಸಚಿವರು ಬಿಡುಗಡೆ ಮಾಡಿದರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬ್ಯಾಟರಿ ಚಾಲಿತ ವ್ಹೀಲ್ ಚೇರ್, ಹೊಲಿಗೆ ಯಂತ್ರ, ಟಾಕಿಂಗ್ ಲ್ಯಾಪ್‌ಟಾಪ್ ಮತ್ತು ಡಿ.ದೇವರಾಜ ಅರಸು ನಿಗಮದ ವತಿಯಿಂದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಾಸ್ತವಿಕವಾಗಿ ಮಾತನಾಡಿದರು. ರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂದೂರಿ ದಾಸರಿ, ಕಾಪು ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಕಾಪು ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಕಾಪು ನಗರ ಪ್ರಾಧಿಕಾರದ ಅಧ್ಯಕ್ಷ ವಿಕ್ರಮ್ ಕಾಪು, ಜಿಪಂ ಸಿಇಓ ಪ್ರತೀಕ್ ಬಾಯಲ್, ಎಸ್ಪಿ ಹರಿರಾಂ ಶಂಕರ್, ಎಡಿಸಿ ಅಬೀದ್ ಗದ್ಯಾಳ್ ಮತ್ತಿತರರು ಉಪಸ್ಥಿತರಿದ್ದರು.ಕಾಪು ತಹಸೀಲ್ದಾರ್ ಅನಂತ ಶಂಕರ್ ಬಿ. ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ನಿರೂಪಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 75 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಸ್ಥಳದಲ್ಲಿಯೇ ವಿಲೇ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಸಿಸಿ ಬ್ಯಾಂಕ್‌ 134 ಹುದ್ದೆಗಳ ನೇಮಕಾತಿಗೆ ಶೀಘ್ರ
ತಾಳಿಕೋಟೆ ಬಂದ್; ರೈತರ ಬೃಹತ್‌ ಪ್ರತಿಭಟನೆ